< ದಾನಿಯೇಲನು 4 >

1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
Nebuchadnezzar the king, to all the peoples, nations, and languages living in all the earth: May your peace be increased.
2 ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
It has seemed good to me to make clear the signs and wonders which the Most High God has done with me.
3 ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
How great are his signs! and how full of power are his wonders! his kingdom is an eternal kingdom and his rule goes on from generation to generation.
4 “ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.
I, Nebuchadnezzar, was at rest in my place, and all things were going well for me in my great house:
5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
I saw a dream which was a cause of great fear to me; I was troubled by the images of my mind on my bed, and by the visions of my head.
6 ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
And I gave orders for all the wise men of Babylon to come in before me so that they might make clear to me the sense of my dream.
7 “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
Then the wonder-workers, the users of secret arts, the Chaldaeans, and the readers of signs came in to me: and I put the dream before them but they did not make clear the sense of it to me.
8 ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
But at last Daniel came in before me, he whose name was Belteshazzar, after the name of my god, and in whom is the spirit of the holy gods: and I put the dream before him, saying,
9 ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
O Belteshazzar, master of the wonder-workers, because I am certain that the spirit of the holy gods is in you, and you are troubled by no secret; this is the dream which I saw: make clear to me its sense.
10 ೧೦ ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
On my bed I saw a vision: there was a tree in the middle of the earth, and it was very high.
11 ೧೧ ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.
And the tree became tall and strong, stretching up to heaven, and to be seen from the ends of the earth:
12 ೧೨ ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.
Its leaves were fair and it had much fruit, and in it was food enough for all: the beasts of the field had shade under it, and the birds of heaven were resting in its branches, and it gave food to all living things.
13 ೧೩ ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
In the visions of my head on my bed I saw a watcher, a holy one, coming down from heaven,
14 ೧೪ ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
Crying out with a loud voice; and this is what he said: Let the tree be cut down and its branches broken off; let its leaves be taken off and its fruit sent in every direction: let the beasts get away from under it and the birds from its branches:
15 ೧೫ ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.
But keep its broken end and its roots still in the earth, even with a band of iron and brass; let him have the young grass of the field for food, and let him be wet with the dew of heaven, and let his part be with the beasts.
16 ೧೬ ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.
Let his heart be changed from that of a man, and the heart of a beast be given to him; and let seven times go by him.
17 ೧೭ ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
This order is fixed by the watchers, and the decision is by the word of the holy ones: so that the living may be certain that the Most High is ruler over the kingdom of men, and gives it to any man at his pleasure, lifting up over it the lowest of men.
18 ೧೮ ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
This dream I, King Nebuchadnezzar, saw; and do you, O Belteshazzar, make clear the sense of it, for all the wise men of my kingdom are unable to make the sense of it clear to me; but you are able, for the spirit of the holy gods is in you.
19 ೧೯ ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
Then Daniel, whose name was Belteshazzar, was at a loss for a time, his thoughts troubling him. The king made answer and said, Belteshazzar, do not be troubled by the dream or by the sense of it. Belteshazzar, answering, said, My lord, may the dream be about your haters, and its sense about those who are against you.
20 ೨೦ “ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,
The tree which you saw, which became tall and strong, stretching up to heaven and seen from the ends of the earth;
21 ೨೧ ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,
Which had fair leaves and much fruit, and had in it food for all; under which the beasts of the field were living, and in the branches of which the birds of heaven had their resting-places:
22 ೨೨ ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.
It is you, O King, who have become great and strong: for your power is increased and stretching up to heaven, and your rule to the end of the earth.
23 ೨೩ “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
And as for the vision which the king saw of a watcher, a holy one, coming down from heaven, saying, Let the tree be cut down and given to destruction;
24 ೨೪ “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.
This is the sense of it, O King, and it is the decision of the Most High which has come on my lord the king:
25 ೨೫ ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
That they will send you out from among men, to be with the beasts of the field; they will give you grass for your food like the oxen, and you will be wet with the dew of heaven, and seven times will go by you, till you are certain that the Most High is ruler in the kingdom of men, and gives it to any man at his pleasure.
26 ೨೬ ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
And as they gave orders to let the broken end and the roots of the tree be, so your kingdom will be safe for you after it is clear to you that the heavens are ruling.
27 ೨೭ ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
For this cause, O King, let my suggestion be pleasing to you, and let your sins be covered by righteousness and your evil-doing by mercy to the poor, so that the time of your well-being may be longer.
28 ೨೮ ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.
All this came to King Nebuchadnezzar.
29 ೨೯ ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,
At the end of twelve months he was walking on the roof of his great house in Babylon.
30 ೩೦ “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
The king made answer and said, Is this not great Babylon, which I have made for the living-place of kings, by the strength of my power and for the glory of my honour?
31 ೩೧ ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
While the word was still in the king's mouth, a voice came down from heaven, saying, O King Nebuchadnezzar, to you it is said: The kingdom has gone from you:
32 ೩೨ ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
And they will send you out from among men, to be with the beasts of the field; they will give you grass for your food like the oxen, and seven times will go by you, till you are certain that the Most High is ruler in the kingdom of men, and gives it to any man at his pleasure.
33 ೩೩ ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
That very hour the order about Nebuchadnezzar was put into effect: and he was sent out from among men, and had grass for his food like the oxen, and his body was wet with the dew of heaven, till his hair became long as eagles' feathers and his nails like those of birds.
34 ೩೪ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
And at the end of the days, I, Nebuchadnezzar, lifting up my eyes to heaven, got back my reason, and, blessing the Most High, I gave praise and honour to him who is living for ever, whose rule is an eternal rule and whose kingdom goes on from generation to generation.
35 ೩೫ ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
And all the people of the earth are as nothing: he does his pleasure in the army of heaven and among the people of the earth: and no one is able to keep back his hand, or say to him, What are you doing?
36 ೩೬ ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
At the same time my reason came back to me; and for the glory of my kingdom, my honour and my great name came back to me; and my wise men and my lords were turned to me again; and I was made safe in my kingdom and had more power than before.
37 ೩೭ ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
Now I, Nebuchadnezzar, give worship and praise and honour to the King of heaven; for all his works are true and his ways are right: and those who go in pride he is able to make low.

< ದಾನಿಯೇಲನು 4 >