< ಧರ್ಮೋಪದೇಶಕಾಂಡ 31 >

1 ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.
मग मोशेने सर्व इस्राएलांना ही वचने सांगितली.
2 ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
तो म्हणाला, “मी आता एकशेवीस वर्षाचा आहे. माझ्याने आता तुमचे नेतृत्व होत नाही. शिवाय यार्देन नदीपलीकडे जायचे नाही असे, परमेश्वराने मला सांगितले आहे.
3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
तुमचा देव परमेश्वर हा तुम्हास साथ देईल. तुमच्यासाठी तो इतर राष्ट्रांना पराभूत करील. त्यांच्याकडून तुम्ही त्या प्रदेशाचा ताबा घ्याल. पण परमेश्वराने सांगितल्याप्रमाणे यहोशवा तुमचे नेतृत्व करील.
4 ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
अमोऱ्यांचे राजे सीहोन आणि ओग यांचा परमेश्वराने संहार केला. तसेच तो यावेळी तुमच्यासाठी करील.
5 ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
या राष्ट्रांचा पराभव करण्यात परमेश्वराचे तुम्हास साहाय्य होईल. पण त्यावेळी, मी सांगितले तसे तुम्ही वागले पाहिजे.
6 ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
शौर्य दाखवा. खंबीर पणाने वागा. त्या लोकांची भीती बाळगू नका! कारण प्रत्यक्ष तुमचा देव परमेश्वर तुमच्याबरोबर आहे. तो तुम्हास अंतर देणार नाही, तुमची साथ सोडणार नाही”
7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
मग मोशेने यहोशवाला बोलावले. सर्वांसमक्ष त्यास सांगितले, “खंबीर राहा आणि शौर्य गाजव. या लोकांच्या पूर्वजांना परमेश्वराने जी भूमी द्यायचे कबूल केले आहे, तेथे तू त्यांना नेणार आहेस. ती काबीज करायला या इस्राएलांना तू मदत कर.
8 ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
परमेश्वर तुमच्या सोबतीला तुमच्यापुढेच चालणार आहे. तो तुम्हास सोडून जाणार नाही, तुम्हास अंतर देणार नाही. तेव्हा भिऊ नको आणि निर्भय राहा.”
9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
नंतर मोशेने सर्व नियमशास्त्र लिहून याजकांना दिले. हे याजक लेवी वंशातील होते. परमेश्वराच्या कराराचा कोश वाहण्याचे काम त्यांचे होते. इस्राएलाच्या वडिलधाऱ्या लोकांसही मोशेने हे नियमशास्त्र दिले.
10 ೧೦ ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
१०मग मोशे वडीलधाऱ्या लोकांशी बोलला. तो म्हणाला, “प्रत्येक सात वर्षांच्या अखेरीला म्हणजेच कर्ज माफीच्या ठराविक वर्षी मंडपाच्या सणाच्या वेळी ही शिकवण तुम्ही सर्वांना वाचून दाखवा.
11 ೧೧ ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
११यावेळी सर्व इस्राएलांनी तुमचा देव परमेश्वर ह्याने त्यांच्यासाठी निवडलेल्या पवित्र निवासस्थानी जमावे. तेव्हा त्यांना ऐकू जाईल अशा पद्धतीने तुम्ही हे नियमशास्त्र वाचून दाखवावे.
12 ೧೨ ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
१२पुरुष, स्त्रिया, लहान मुले, गावातील परकीय अशा सर्वांना यावेळी एकत्र आणावे. त्यांनी ही शिकवण ऐकावी, परमेश्वर देवाचे भय धरावे या शिकवणीचे जीवनात आचरण करावे.
13 ೧೩ ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.
१३ज्या पुढच्या पिढीला ही शिकवण माहीत नव्हती त्यांना ती माहीत होईल. लवकरच तुम्ही यार्देन ओलांडून जो देश आपलासा करायला चालला आहात तेथे ही मुलेबाळेही तुमचा देव परमेश्वर ह्याज विषयीचे भय धरण्यास तो शिकवील.”
14 ೧೪ ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
१४परमेश्वर मोशेला म्हणाला, “तुझा मृत्यू आता समीप आला आहे. यहोशवाला घेऊन निवासमंडपात ये. म्हणजे मी त्यास आज्ञा देईन.” तेव्हा मोशे व यहोशवा दर्शनमंडपामध्ये गेले.
15 ೧೫ ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
१५दर्शनमंडपाच्या प्रवेशद्वारी असलेल्या मेघस्तंभात परमेश्वर प्रगट झाला.
16 ೧೬ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
१६तेव्हा परमेश्वर मोशेला म्हणाला, “तू आता लवकरच मरण पावशील व आपल्या पूर्वजांना भेटशील. तेव्हा हे लोक माझ्यापासून परावृत होतील. ते माझ्याशी केलेला पवित्र करार मोडतील. माझी साथ सोडून ते वेश्येसमान त्या देशातील इतर खोट्या दैवतांची पूजा करायला लागतील.”
17 ೧೭ ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
१७तेव्हा माझा त्यांच्यावर कोप होऊन मी त्यांना सोडून जाईन. मी त्यांना मदत करायचे नाकारल्याने त्यांचा नाश होईल. त्यांना अनेक अडचणींना सामोरे जावे लागेल. त्यांच्यावर संकटे कोसळतील. तेव्हा ते म्हणतील की आपल्याला परमेश्वराची साथ नाही म्हणून आपल्यावर आपत्ती येत आहेत.
18 ೧೮ ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
१८पण त्यांनी इतर दैवतांची पूजा केल्याने, दुष्कृत्ये केल्यामुळे मी त्यांना मदत करणार नाही.
19 ೧೯ “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
१९“तेव्हा तुम्ही हे गीत लिहून घ्या व इस्राएल लोकांस शिकवा. त्यांच्याकडून ते तोंडपाठ करून घ्या. म्हणजे इस्राएल लोकांविरूद्ध ही माझ्याबाजूने साक्ष राहील.
20 ೨೦ ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
२०त्यांच्या पूर्वजांना कबूल केलेल्या भूमीत मी त्यांना नेणार आहे. ही भूमी दुधामधाने समृद्ध आहे. तेथे त्यांची अन्नधान्याची चंगळ होईल. ते संपन्न जीवन जगतील. पण मग ते इतर दैवतांकडे वळतील व त्यांची पूजा करतील. माझ्यापासून ते परावृत होतील व कराराचा भंग करतील.
21 ೨೧ ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
२१त्यामुळे त्यांच्यावर आपत्ती कोसळतील. त्यांना अनेक अडचणी येतील. त्याही वेळी हे गीत त्यांच्यामुखी असेल आणि त्यांच्या चुकीची साक्ष त्यांना पटेल. कारण जो देश मी शपथ वाहून देऊ केला. मी त्यांना त्या भूमीत अजून नेलेले नाही. पण त्यांच्या मनात तेथे गेल्यावर काय काय करायचे याबाबत जे विचार चालू आहेत ते मला अगोदरच माहीत आहेत.”
22 ೨೨ ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
२२तेव्हा त्याच दिवशी मोशेने ते गीत लिहून काढले, आणि इस्राएल लोकांस ते शिकवले.
23 ೨೩ ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
२३मग नूनचा मुलगा यहोशवा याला परमेश्वर म्हणाला, “हिंम्मत धर, खंबीर राहा. मी वचनपूर्वक देऊ केलेल्या प्रदेशात तू या इस्राएलांना घेऊन जाशील. मी तुझ्याबरोबर राहीन.”
24 ೨೪ ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,
२४मोशेने सर्व शिकवण काळजीपूर्वक लिहून काढल्यावर
25 ೨೫ ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,
२५लेवींना आज्ञा दिली. (लेवी म्हणजे परमेश्वराच्या कराराचा कोश वाहणारे लोक.) मोशे म्हणाला,
26 ೨೬ “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
२६“हा नियमशास्त्राचा ग्रंथ घ्या आणि परमेश्वराच्या कराराच्या कोशात ठेवा. तुमच्याविरुध्द हा साक्ष राहील.
27 ೨೭ ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
२७तुम्ही फार ताठर आहात हे मला माहीत आहे. तुम्ही आपलाच ठेका चालवता. मी तुमच्याबरोबर असतानाही तुम्ही परमेश्वराविरूद्ध बंड केले आहे. तेव्हा माझ्यामागेही तुम्ही तेच कराल.
28 ೨೮ ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
२८तुमच्या वंशातील सर्व वडिलांना व महाजनांना येथे बोलवा. स्वर्ग आणि पृथ्वीच्या साक्षीने त्यांना मी चार गोष्टी सांगेन.
29 ೨೯ ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
२९माझ्या मृत्यूनंतर तुम्ही दुराचरण करणार आहात हे मला माहीत आहे. मी सांगितलेल्या मार्गापासून तुम्ही ढळणार आहात. त्यामुळे भविष्यात तुमच्यावर संकटे कोसळतील. कारण परमेश्वराने निषिद्ध म्हणून सांगितलेल्या गोष्टी तुम्ही करणार आहात. तुमच्या दुष्कृत्याने तुम्ही परमेश्वराचा राग ओढवून घ्याल.”
30 ೩೦ ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.
३०सर्व इस्राएल लोक एकत्र जमल्यावर मोशेने हे संपूर्ण गीत त्यांच्यासमोर म्हटले.

< ಧರ್ಮೋಪದೇಶಕಾಂಡ 31 >