< ಪ್ರಸಂಗಿ 1 >

1 ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.
דִּבְרֵי֙ קֹהֶ֣לֶת בֶּן־דָּוִ֔ד מֶ֖לֶךְ בִּירוּשָׁלָֽ͏ִם׃
2 ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.
הֲבֵ֤ל הֲבָלִים֙ אָמַ֣ר קֹהֶ֔לֶת הֲבֵ֥ל הֲבָלִ֖ים הַכֹּ֥ל הָֽבֶל׃
3 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?
מַה־יִּתְרֹ֖ון לָֽאָדָ֑ם בְּכָל־עֲמָלֹ֔ו שֶֽׁיַּעֲמֹ֖ל תַּ֥חַת הַשָּֽׁמֶשׁ׃
4 ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.
דֹּ֤ור הֹלֵךְ֙ וְדֹ֣ור בָּ֔א וְהָאָ֖רֶץ לְעֹולָ֥ם עֹמָֽדֶת׃
5 ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
וְזָרַ֥ח הַשֶּׁ֖מֶשׁ וּבָ֣א הַשָּׁ֑מֶשׁ וְאֶ֨ל־מְקֹומֹ֔ו שֹׁואֵ֛ף זֹורֵ֥חַֽ ה֖וּא שָֽׁם׃
6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
הֹולֵךְ֙ אֶל־דָּרֹ֔ום וְסֹובֵ֖ב אֶל־צָפֹ֑ון סֹובֵ֤ב ׀ סֹבֵב֙ הֹולֵ֣ךְ הָר֔וּחַ וְעַל־סְבִיבֹתָ֖יו שָׁ֥ב הָרֽוּחַ׃
7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
כָּל־הַנְּחָלִים֙ הֹלְכִ֣ים אֶל־הַיָּ֔ם וְהַיָּ֖ם אֵינֶ֣נּוּ מָלֵ֑א אֶל־מְקֹ֗ום שֶׁ֤הַנְּחָלִים֙ הֹֽלְכִ֔ים שָׁ֛ם הֵ֥ם שָׁבִ֖ים לָלָֽכֶת׃
8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
כָּל־הַדְּבָרִ֣ים יְגֵעִ֔ים לֹא־יוּכַ֥ל אִ֖ישׁ לְדַבֵּ֑ר לֹא־תִשְׂבַּ֥ע עַ֙יִן֙ לִרְאֹ֔ות וְלֹא־תִמָּלֵ֥א אֹ֖זֶן מִשְּׁמֹֽעַ׃
9 ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
מַה־שֶּֽׁהָיָה֙ ה֣וּא שֶׁיִּהְיֶ֔ה וּמַה־שֶּׁנַּֽעֲשָׂ֔ה ה֖וּא שֶׁיֵּעָשֶׂ֑ה וְאֵ֥ין כָּל־חָדָ֖שׁ תַּ֥חַת הַשָּֽׁמֶשׁ׃
10 ೧೦ ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
יֵ֥שׁ דָּבָ֛ר שֶׁיֹּאמַ֥ר רְאֵה־זֶ֖ה חָדָ֣שׁ ה֑וּא כְּבָר֙ הָיָ֣ה לְעֹֽלָמִ֔ים אֲשֶׁ֥ר הָיָ֖ה מִלְּפָנֵֽנוּ׃
11 ೧೧ ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”
אֵ֥ין זִכְרֹ֖ון לָרִאשֹׁנִ֑ים וְגַ֨ם לָאַחֲרֹנִ֜ים שֶׁיִּהְי֗וּ לֹֽא־יִהְיֶ֤ה לָהֶם֙ זִכָּרֹ֔ון עִ֥ם שֶׁיִּהְי֖וּ לָאַחֲרֹנָֽה׃ פ
12 ೧೨ ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
אֲנִ֣י קֹהֶ֗לֶת הָיִ֥יתִי מֶ֛לֶךְ עַל־יִשְׂרָאֵ֖ל בִּירוּשָׁלָֽ͏ִם׃
13 ೧೩ ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
וְנָתַ֣תִּי אֶת־לִבִּ֗י לִדְרֹ֤ושׁ וְלָתוּר֙ בַּֽחָכְמָ֔ה עַ֛ל כָּל־אֲשֶׁ֥ר נַעֲשָׂ֖ה תַּ֣חַת הַשָּׁמָ֑יִם ה֣וּא ׀ עִנְיַ֣ן רָ֗ע נָתַ֧ן אֱלֹהִ֛ים לִבְנֵ֥י הָאָדָ֖ם לַעֲנֹ֥ות בֹּֽו׃
14 ೧೪ ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.
רָאִ֙יתִי֙ אֶת־כָּל־הַֽמַּעֲשִׂ֔ים שֶֽׁנַּעֲשׂ֖וּ תַּ֣חַת הַשָּׁ֑מֶשׁ וְהִנֵּ֥ה הַכֹּ֛ל הֶ֖בֶל וּרְע֥וּת רֽוּחַ׃
15 ೧೫ ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
מְעֻוָּ֖ת לֹא־יוּכַ֣ל לִתְקֹ֑ן וְחֶסְרֹ֖ון לֹא־יוּכַ֥ל לְהִמָּנֹֽות׃
16 ೧೬ ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
דִּבַּ֨רְתִּי אֲנִ֤י עִם־לִבִּי֙ לֵאמֹ֔ר אֲנִ֗י הִנֵּ֨ה הִגְדַּ֤לְתִּי וְהֹוסַ֙פְתִּי֙ חָכְמָ֔ה עַ֛ל כָּל־אֲשֶׁר־הָיָ֥ה לְפָנַ֖י עַל־יְרוּשָׁלָ֑͏ִם וְלִבִּ֛י רָאָ֥ה הַרְבֵּ֖ה חָכְמָ֥ה וָדָֽעַת׃
17 ೧೭ ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.
וָאֶתְּנָ֤ה לִבִּי֙ לָדַ֣עַת חָכְמָ֔ה וְדַ֥עַת הֹולֵלֹ֖ות וְשִׂכְל֑וּת יָדַ֕עְתִּי שֶׁגַּם־זֶ֥ה ה֖וּא רַעְיֹ֥ון רֽוּחַ׃
18 ೧೮ ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.
כִּ֛י בְּרֹ֥ב חָכְמָ֖ה רָב־כָּ֑עַס וְיֹוסִ֥יף דַּ֖עַת יֹוסִ֥יף מַכְאֹֽוב׃

< ಪ್ರಸಂಗಿ 1 >