< ವಿಮೋಚನಕಾಂಡ 2 >

1 ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು.
I wyszedł mąż niektóry z domu Lewiego; który pojął córkę z pokolenia Lewiego.
2 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.
I poczęła ona niewiasta, a porodziła syna; a widząc go, że był nadobny, kryła go przez trzy miesiące.
3 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.
Ale gdy go nie mogła dłużej zataić, wzięła plecionkę z sitowia i obmazała ją klejem i smołą; a włożywszy w nię ono dziecię, położyła je między rogóż na brzegu rzeki.
4 ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.
A stała siostra jego z daleka, aby wiedziała, co się z nim dziać będzie.
5 ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.
Wtem wyszła córka Faraonowa, aby się kąpała w rzece, a panny jej przechadzały się po brzegu rzeki; i ujrzała plecionkę w rogoży, i posłała służebnicę swą, aby ją wzięła.
6 ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು.
A otworzywszy ujrzała dziecię, a ono chłopiątko płakało; a użaliwszy się go, rzekła: Z dziatek Hebrejskich jest ten.
7 ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು.
I rzekła siostra jego do córki Faraonowej: Chceszże, pójdę, i zawołam ci niewiasty, mamki Hebrejskiej, która być odchowała to dziecię?
8 ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.
I rzekła jej córka Faraonowa: Idź. Tedy poszła ona dzieweczka, i zawołała matki onegoż dziecięcia.
9 ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.
Do której rzekła córka Faraonowa: Weźmij to dziecię, i chowaj mi je, a ja tobie dam zapłatę twoję; i wziąwszy niewiasta dziecię, chowała je.
10 ೧೦ ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.
A gdy podrosło ono dziecię, przywiodła je do córki Faraonowej, i było jej za syna; a nazwała imię jego Mojżesz, bo mówiła: Żem z wody wyciągnęła go.
11 ೧೧ ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.
I stało się za onych dni, gdy urósł Mojżesz, że wyszedł do braci swej, i widział ciężary ich; obaczył też męża Egipczanina, który bił jednego Hebrajczyka z braci jego.
12 ೧೨ ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.
A obejrzawszy się tam i sam, gdy widział, że nikogo nie masz, zabił Egipczanina, i zagrzebł go w piasek.
13 ೧೩ ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು.
A wyszedłszy zaś dnia wtórego, ujrzał, a oto, dwaj mężowie Hebrejscy wadzili się; i rzekł onemu, który krzywdę czynił:
14 ೧೪ ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
Czemuż bijesz bliźniego swego? Ale mu odpowiedział: Któż cię postanowił książęciem i sędzią nad nami? albo mię ty myślisz zabić, jakoś zabił Egipczanina? i zląkł się Mojżesz i rzekł:
15 ೧೫ ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.
Pewnie się ta rzecz wyjawiła. Usłyszał tedy Farao tę rzecz, i szukał zabić Mojżesza. Lecz Mojżesz uciekł od twarzy Faraonowej, i mieszkał w ziemi Madyjańskiej; a przyszedłszy tam siedział u studni.
16 ೧೬ ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.
A kapłan Madyjański miał siedem córek, które wyszedłszy czerpały wodę, i nalewały do koryt, aby napoiły trzodę ojca swego;
17 ೧೭ ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
A przyszedłszy pasterze odganiali je. Tedy wstawszy Mojżesz obronił ich, i napoił bydło ich.
18 ೧೮ ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು.
A gdy się wróciły do Raguela, ojca swego, rzekł: Czemuście dziś tak prędko przyszły?
19 ೧೯ ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು.
I odpowiedziały: Mąż Egipski obronił nas od ręki pasterzów; nadto czerpając naczerpał nam i wody i napoił trzody.
20 ೨೦ ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
Zatem rzekł do córek swych: A gdzież ten jest? Czemuście opuściły człowieka tego? Zawołajcie go, aby jadł chleb.
21 ೨೧ ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
I przyzwolił Mojżesz mieszkać z onym mężem, który dał Zeforę, córkę swoję, Mojżeszowi.
22 ೨೨ ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
I urodziła syna, a nazwał imię jego Gerson, bo mówił: Byłem przychodniem w ziemi cudzej.
23 ೨೩ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
I stało się po niemałym czasie, że umarł król Egipski; i wzdychali, i wołali synowie Izraelscy dla niewoli; a wstąpiło wołanie ich do Boga przed niewolą.
24 ೨೪ ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
I usłyszał Bóg wołanie ich; i wspomniał Bóg na przymierze swoje z Abrahamem, z Izaakiem, i z Jakóbem.
25 ೨೫ ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.
I wejrzał Bóg na syny Izraelskie, i poznał Bóg.

< ವಿಮೋಚನಕಾಂಡ 2 >