< ವಿಮೋಚನಕಾಂಡ 29 >

1 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.
Вот что должен ты совершить над ними, чтобы посвятить их во священники Мне: возьми одного тельца из волов, и двух овнов без порока,
2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,
и хлебов пресных, и опресноков, смешанных с елеем, и лепешек пресных, помазанных елеем: из муки пшеничной сделай их,
3 ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.
и положи их в одну корзину, и принеси их в корзине, и вместе тельца и двух овнов.
4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
Аарона же и сынов его приведи ко входу в скинию собрания и омой их водою.
5 ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ,
И возьми священные одежды, и облеки Аарона в хитон и в верхнюю ризу, в ефод и в наперсник, и опояшь его по ефоду;
6 ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,
и возложи ему на голову кидар и укрепи диадиму святыни на кидаре;
7 ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.
и возьми елей помазания, и возлей ему на голову, и помажь его.
8 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ
И приведи также сынов его и облеки их в хитоны;
9 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.
и опояшь их поясом, Аарона и сынов его, и возложи на них повязки и будет им принадлежать священство по уставу навеки; и наполни руки Аарона и сынов его.
10 ೧೦ ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.
И приведи тельца пред скинию собрания, и возложат Аарон и сыны его руки свои на голову тельца пред Господом у дверей скинии собрания;
11 ೧೧ ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.
и заколи тельца пред лицем Господним при входе в скинию собрания;
12 ೧೨ ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.
возьми крови тельца и возложи перстом твоим на роги жертвенника, а всю остальную кровь вылей у основания жертвенника;
13 ೧೩ ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
возьми весь тук, покрывающий внутренности, и сальник с печени, и обе почки и тук, который на них, и воскури на жертвеннике;
14 ೧೪ ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
а мясо тельца и кожу его и нечистоты его сожги на огне вне стана: это - жертва за грех.
15 ೧೫ ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
И возьми одного овна, и возложат Аарон и сыны его руки свои на голову овна;
16 ೧೬ ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.
и заколи овна, и возьми крови его, и покропи на жертвенник со всех сторон;
17 ೧೭ ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.
рассеки овна на части, вымой в воде внутренности его и голени его, и положи их на рассеченные части его и на голову его;
18 ೧೮ ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
и сожги всего овна на жертвеннике. Это всесожжение Господу, благоухание приятное, жертва Господу.
19 ೧೯ ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Возьми и другого овна, и возложат Аарон и сыны его руки свои на голову овна;
20 ೨೦ ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.
и заколи овна, и возьми крови его, и возложи на край правого уха Ааронова и на край правого уха сынов его, и на большой палец правой руки их, и на большой палец правой ноги их; и покропи кровью на жертвенник со всех сторон;
21 ೨೧ ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.
и возьми крови, которая на жертвеннике, и елея помазания, и покропи на Аарона и на одежды его, и на сынов его, и на одежды сынов его с ним, - и будут освящены, он и одежды его, и сыны его и одежды их с ним.
22 ೨೨ ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,
И возьми от овна тук и курдюк, и тук, покрывающий внутренности, и сальник с печени, и обе почки и тук, который на них, правое плечо потому что это овен вручения священства,
23 ೨೩ ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,
и один круглый хлеб, одну лепешку на елее и один опреснок из корзины, которая пред Господом,
24 ೨೪ ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.
и положи все на руки Аарону и на руки сынам его, и принеси это, потрясая пред лицем Господним;
25 ೨೫ ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.
и возьми это с рук их и сожги на жертвеннике со всесожжением, в благоухание пред Господом: это жертва Господу.
26 ೨೬ ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.
И возьми грудь от овна вручения, который для Аарона, и принеси ее, потрясая пред лицем Господним, - и это будет твоя доля;
27 ೨೭ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.
и освяти грудь приношения, которая потрясаема была и плечо возношения, которое было возносимо, от овна вручения, который для Аарона и для сынов его,
28 ೨೮ ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.
и будет это Аарону и сынам его в участок вечный от сынов Израилевых, ибо это - возношение; возношение должно быть от сынов Израилевых при мирных жертвах сынов Израилевых, возношение их Господу.
29 ೨೯ ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.
А священные одежды, которые для Аарона, перейдут после него к сынам его, чтобы в них помазывать их и вручать им священство;
30 ೩೦ ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.
семь дней должен облачаться в них великий священник из сынов его, заступающий его место, который будет входить в скинию собрания для служения во святилище.
31 ೩೧ ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.
Овна же вручения возьми и свари мясо его на месте святом;
32 ೩೨ ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
и пусть съедят Аарон и сыны его мясо овна сего из корзины, у дверей скинии собрания,
33 ೩೩ ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.
ибо чрез это совершено очищение для вручения им священства и для посвящения их; посторонний не должен есть сего, ибо это святыня;
34 ೩೪ ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.
если останется от мяса вручения и от хлеба до утра, то сожги остаток на огне: не должно есть его, ибо это святыня.
35 ೩೫ ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
И поступи с Аароном и с сынами его во всем так, как Я повелел тебе; в семь дней наполняй руки их.
36 ೩೬ ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
И тельца за грех приноси каждый день для очищения, и жертву за грех совершай на жертвеннике для очищения его, и помажь его для освящения его;
37 ೩೭ ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
семь дней очищай жертвенник, и освяти его, и будет жертвенник святыня великая: все, прикасающееся к жертвеннику, освятится.
38 ೩೮ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
Вот что будешь ты приносить на жертвеннике: двух агнцев однолетних без порока каждый день постоянно в жертву всегдашнюю;
39 ೩೯ ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.
одного агнца приноси поутру, а другого агнца приноси вечером,
40 ೪೦ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.
и десятую часть ефы пшеничной муки, смешанной с четвертью гина битого елея, а для возлияния четверть гина вина, для одного агнца;
41 ೪೧ ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.
другого агнца приноси вечером: с мучным даром, подобным утреннему, и с таким же возлиянием приноси его в благоухание приятное, в жертву Господу.
42 ೪೨ ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.
Это - всесожжение постоянное в роды ваши пред дверями скинии собрания пред Господом, где буду открываться вам, чтобы говорить с тобою;
43 ೪೩ ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.
там буду открываться сынам Израилевым, и освятится место сие славою Моею.
44 ೪೪ ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.
И освящу скинию собрания и жертвенник; и Аарона и сынов его освящу, чтобы они священнодействовали Мне;
45 ೪೫ ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.
и буду обитать среди сынов Израилевых, и буду им Богом,
46 ೪೬ ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.
и узнают, что Я Господь, Бог их, Который вывел их из земли Египетской, чтобы Мне обитать среди них. Я Господь, Бог их.

< ವಿಮೋಚನಕಾಂಡ 29 >