< ಯೆಹೆಜ್ಕೇಲನು 41 >

1 ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.
После ме одведе у цркву, и измери довратнике, и беше шест лаката у ширину отуда и шест лаката у ширину одовуда, према ширини шатору.
2 ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.
А вратима ширина беше десет лаката, а стране вратима беху од пет лаката од туда и од пет лаката од овуда; по том измери јој дужину, и беше четрдесет лаката, и ширину, и беше двадесет лаката.
3 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.
Па уђе унутра и измери довратнике, и беху од два лакта; а врата беху од шест лаката, а ширина вратима седам лаката.
4 ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.
И измери дужину онде, и беше двадесет лаката, а ширина двадесет лаката унутра у цркви; и рече ми: Ово је светиња над светињама.
5 ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.
И измери зид дому, и беше шест лаката, и ширина клети унаоколо у дому беше четири лакта.
6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.
А клети беху по три једна над другом, и беше их тридесет, и допираху до зида који беше у дому унаоколо за клети да их држи, а не држаше их зид од дома.
7 ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು.
Јер се рашириваше грађевина озго унаоколо за клети које беху око дома озго свуда унаоколо, и зато грађевина беше озго шира, и најниже клети беху озго шире за средње.
8 ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು.
И видех уз дом висину унаоколо; а под у клети беше с целе трске, шест лаката.
9 ಕೊಠಡಿಗಳ ಹೊರ ಗೋಡೆಯ ದಪ್ಪವು ಐದು ಮೊಳವಿತ್ತು ಮತ್ತು ಉಳಿದದ್ದು, ಒಳಗಿನ ಪಕ್ಕದ ಕೊಠಡಿಗಳ ಸ್ಥಳವಾಗಿತ್ತು.
Ширина зиду уз клети споља беше пет лаката, а беше празно место клетима која беху уз дом.
10 ೧೦ ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.
И међу клетима беше двадесет лаката ширине око дома.
11 ೧೧ ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಆ ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು.
А врата од клети беху к празном месту, једна према северу, а једна према југу, а ширина оном празном месту пет лаката свуда унаоколо.
12 ೧೨ ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು.
А грађевина која беше пред одељеном страном к западу имаше седамдесет лаката у ширину, а зид те грађевине беше пет лаката широк унаоколо, и деведесет лаката дуг.
13 ೧೩ ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.
Потом измери дом, и беше у дужину сто лаката; одељена страна и грађевина и зидови јој, све заједно у дужину сто лаката.
14 ೧೪ ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು.
И ширина пред домом и одељеном страном к истоку имаше сто лаката.
15 ೧೫ ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.
И измери дужину грађевини пред одељеном страном што беше иза ње, и клети њене од туда и од овуда, и беше сто лаката; и унутрашњи дом и ходнике од трема;
16 ೧೬ ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.
Прагове и прозоре сужене, и клети унаоколо у три реда, према прагу, што беше обложено дрветом свуда унаоколо, од земље до прозора, и прозори беху обложени;
17 ೧೭ ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು.
До врх врата и до дома унутрашњег, и споља, и сав зид унаоколо изнутра и споља на меру.
18 ೧೮ ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.
И беху начињени херувими и палме, једна палма међу два херувима, и у сваког херувима беху два лица:
19 ೧೯ ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.
Лице човечје према палми од туда, и лице лавово према палми од овуда; тако беше начињено по свему дому унаоколо;
20 ೨೦ ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.
Од земље до врх врата беху херувими и палме начињене, тако и по зиду у цркви.
21 ೨೧ ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.
У цркви довратници беху на четири угла; и светињи лице беше онако.
22 ೨೨ ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.
Олтар беше дрвен, три лакта висок, и два лакта дуг, с угловима, и дужина и стране беху од дрвета. И рече ми: То је сто који стоји пред Господом.
23 ೨೩ ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು.
Двоја врата беху у цркви и светињи;
24 ೨೪ ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.
А у вратима беху два крила, која се обртаху, два крила у једних врата и два у других.
25 ೨೫ ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.
И на вратима црквеним беху начињени херувими и палме, као по зидовима; и греде дрвене беху пред тремом споља.
26 ೨೬ ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.
И беху уски прозори и палме од туда и од овуда по странама трему и по клетима у дому и по гредама.

< ಯೆಹೆಜ್ಕೇಲನು 41 >