< ಎಜ್ರನು 6 >

1 ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.
בֵּאדַ֛יִן דָּרְיָ֥וֶשׁ מַלְכָּ֖א שָׂ֣ם טְעֵ֑ם וּבַקַּ֣רוּ ׀ בְּבֵ֣ית סִפְרַיָּ֗א דִּ֧י גִנְזַיָּ֛א מְהַחֲתִ֥ין תַּמָּ֖ה בְּבָבֶֽל׃
2 ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.
וְהִשְׁתְּכַ֣ח בְּאַחְמְתָ֗א בְּבִֽירְתָ֛א דִּ֛י בְּמָדַ֥י מְדִינְתָּ֖ה מְגִלָּ֣ה חֲדָ֑ה וְכֵן־כְּתִ֥יב בְּגַוַּ֖הּ דִּכְרֹונָֽה׃ פ
3 ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.
בִּשְׁנַ֨ת חֲדָ֜ה לְכֹ֣ורֶשׁ מַלְכָּ֗א כֹּ֣ורֶשׁ מַלְכָּא֮ שָׂ֣ם טְעֵם֒ בֵּית־אֱלָהָ֤א בִֽירוּשְׁלֶם֙ בַּיְתָ֣א יִתְבְּנֵ֔א אֲתַר֙ דִּֽי־דָבְחִ֣ין דִּבְחִ֔ין וְאֻשֹּׁ֖והִי מְסֹֽובְלִ֑ין רוּמֵהּ֙ אַמִּ֣ין שִׁתִּ֔ין פְּתָיֵ֖הּ אַמִּ֥ין שִׁתִּֽין׃
4 ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.
נִדְבָּכִ֞ין דִּי־אֶ֤בֶן גְּלָל֙ תְּלָתָ֔א וְנִדְבָּ֖ךְ דִּי־אָ֣ע חֲדַ֑ת וְנִ֨פְקְתָ֔א מִן־בֵּ֥ית מַלְכָּ֖א תִּתְיְהִֽב׃
5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.
וְ֠אַף מָאנֵ֣י בֵית־אֱלָהָא֮ דִּ֣י דַהֲבָ֣ה וְכַסְפָּא֒ דִּ֣י נְבֽוּכַדְנֶצַּ֗ר הַנְפֵּ֛ק מִן־הֵיכְלָ֥א דִי־בִירוּשְׁלֶ֖ם וְהֵיבֵ֣ל לְבָבֶ֑ל יַהֲתִיב֗וּן וִ֠יהָךְ לְהֵיכְלָ֤א דִי־בִירֽוּשְׁלֶם֙ לְאַתְרֵ֔הּ וְתַחֵ֖ת בְּבֵ֥ית אֱלָהָֽא׃ ס
6 “ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.
כְּעַ֡ן תַּ֠תְּנַי פַּחַ֨ת עֲבַֽר־נַהֲרָ֜ה שְׁתַ֤ר בֹּוזְנַי֙ וּכְנָוָ֣תְהֹ֔ון אֲפַרְסְכָיֵ֔א דִּ֖י בַּעֲבַ֣ר נַהֲרָ֑ה רַחִיקִ֥ין הֲוֹ֖ו מִן־תַּמָּֽה׃
7 ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ. ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.
שְׁבֻ֕קוּ לַעֲבִידַ֖ת בֵּית־אֱלָהָ֣א דֵ֑ךְ פַּחַ֤ת יְהוּדָיֵא֙ וּלְשָׂבֵ֣י יְהוּדָיֵ֔א בֵּית־אֱלָהָ֥א דֵ֖ךְ יִבְנֹ֥ון עַל־אַתְרֵֽהּ׃
8 ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.
וּמִנִּי֮ שִׂ֣ים טְעֵם֒ לְמָ֣א דִֽי־תֽ͏ַעַבְד֗וּן עִם־שָׂבֵ֤י יְהוּדָיֵא֙ אִלֵּ֔ךְ לְמִבְנֵ֖א בֵּית־אֱלָהָ֣א דֵ֑ךְ וּמִנִּכְסֵ֣י מַלְכָּ֗א דִּ֚י מִדַּת֙ עֲבַ֣ר נַהֲרָ֔ה אָסְפַּ֗רְנָא נִפְקְתָ֛א תֶּהֱוֵ֧א מִֽתְיַהֲבָ֛א לְגֻבְרַיָּ֥א אִלֵּ֖ךְ דִּי־לָ֥א לְבַטָּלָֽא׃
9 ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.
וּמָ֣ה חַשְׁחָ֡ן וּבְנֵ֣י תֹורִ֣ין וְדִכְרִ֣ין וְאִמְּרִ֣ין ׀ לַעֲלָוָ֣ן ׀ לֶאֱלָ֪הּ שְׁמַיָּ֟א חִנְטִ֞ין מְלַ֣ח ׀ חֲמַ֣ר וּמְשַׁ֗ח כְּמֵאמַ֨ר כָּהֲנַיָּ֤א דִי־בִירֽוּשְׁלֶם֙ לֶהֱוֵ֨א מִתְיְהֵ֥ב לְהֹ֛ם יֹ֥ום ׀ בְּיֹ֖ום דִּי־לָ֥א שָׁלֽוּ׃
10 ೧೦ ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
דִּֽי־לֶהֱוֹ֧ן מְהַקְרְבִ֛ין נִיחֹוחִ֖ין לֶאֱלָ֣הּ שְׁמַיָּ֑א וּמְצַלַּ֕יִן לְחַיֵּ֥י מַלְכָּ֖א וּבְנֹֽוהִי׃
11 ೧೧ ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
וּמִנִּי֮ שִׂ֣ים טְעֵם֒ דִּ֣י כָל־אֱנָ֗שׁ דִּ֤י יְהַשְׁנֵא֙ פִּתְגָמָ֣א דְנָ֔ה יִתְנְסַ֥ח אָע֙ מִן־בַּיְתֵ֔הּ וּזְקִ֖יף יִתְמְחֵ֣א עֲלֹ֑הִי וּבַיְתֵ֛הּ נְוָל֥וּ יִתְעֲבֵ֖ד עַל־דְּנָֽה׃
12 ೧೨ ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.
וֵֽאלָהָ֞א דִּ֣י שַׁכִּ֧ן שְׁמֵ֣הּ תַּמָּ֗ה יְמַגַּ֞ר כָּל־מֶ֤לֶךְ וְעַם֙ דִּ֣י ׀ יִשְׁלַ֣ח יְדֵ֗הּ לְהַשְׁנָיָ֛ה לְחַבָּלָ֛ה בֵּית־אֱלָהָ֥א דֵ֖ךְ דִּ֣י בִירוּשְׁלֶ֑ם אֲנָ֤ה דָרְיָ֙וֶשׁ֙ שָׂ֣מֶת טְעֵ֔ם אָסְפַּ֖רְנָא יִתְעֲבִֽד׃ פ
13 ೧೩ ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.
אֱ֠דַיִן תַּתְּנַ֞י פַּחַ֧ת עֲבַֽר־נַהֲרָ֛ה שְׁתַ֥ר בֹּוזְנַ֖י וּכְנָוָתְהֹ֑ון לָקֳבֵ֗ל דִּֽי־שְׁלַ֞ח דָּרְיָ֧וֶשׁ מַלְכָּ֛א כְּנֵ֖מָא אָסְפַּ֥רְנָא עֲבַֽדוּ׃
14 ೧೪ ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.
וְשָׂבֵ֤י יְהוּדָיֵא֙ בָּנַ֣יִן וּמַצְלְחִ֔ין בִּנְבוּאַת֙ חַגַּ֣י נְבִיאָה (נְבִיָּ֔א) וּזְכַרְיָ֖ה בַּר־עִדֹּ֑וא וּבְנֹ֣ו וְשַׁכְלִ֗לוּ מִן־טַ֙עַם֙ אֱלָ֣הּ יִשְׂרָאֵ֔ל וּמִטְּעֵם֙ כֹּ֣ורֶשׁ וְדָרְיָ֔וֶשׁ וְאַרְתַּחְשַׁ֖שְׂתְּא מֶ֥לֶךְ פָּרָֽס׃
15 ೧೫ ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.
וְשֵׁיצִיא֙ בַּיְתָ֣ה דְנָ֔ה עַ֛ד יֹ֥ום תְּלָתָ֖ה לִירַ֣ח אֲדָ֑ר דִּי־הִ֣יא שְׁנַת־שֵׁ֔ת לְמַלְכ֖וּת דָּרְיָ֥וֶשׁ מַלְכָּֽא׃ פ
16 ೧೬ ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.
וַעֲבַ֣דוּ בְנֵֽי־יִ֠שְׂרָאֵל כָּהֲנַיָּ֨א וְלֵוָיֵ֜א וּשְׁאָ֣ר בְּנֵי־גָלוּתָ֗א חֲנֻכַּ֛ת בֵּית־אֱלָהָ֥א דְנָ֖ה בְּחֶדְוָֽה׃
17 ೧೭ ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
וְהַקְרִ֗בוּ לַחֲנֻכַּת֮ בֵּית־אֱלָהָ֣א דְנָה֒ תֹּורִ֣ין מְאָ֔ה דִּכְרִ֣ין מָאתַ֔יִן אִמְּרִ֖ין אַרְבַּ֣ע מְאָ֑ה וּצְפִירֵ֨י עִזִּ֜ין לְחַטָּיָא (לְחַטָּאָ֤ה) עַל־כָּל־יִשְׂרָאֵל֙ תְּרֵֽי־עֲשַׂ֔ר לְמִנְיָ֖ן שִׁבְטֵ֥י יִשְׂרָאֵֽל׃
18 ೧೮ ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.
וַהֲקִ֨ימוּ כָהֲנַיָּ֜א בִּפְלֻגָּתְהֹ֗ון וְלֵוָיֵא֙ בְּמַחְלְקָ֣תְהֹ֔ון עַל־עֲבִידַ֥ת אֱלָהָ֖א דִּ֣י בִירוּשְׁלֶ֑ם כִּכְתָ֖ב סְפַ֥ר מֹשֶֽׁה׃ פ
19 ೧೯ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.
וַיַּעֲשׂ֥וּ בְנֵי־הַגֹּולָ֖ה אֶת־הַפָּ֑סַח בְּאַרְבָּעָ֥ה עָשָׂ֖ר לַחֹ֥דֶשׁ הָרִאשֹֽׁון׃
20 ೨೦ ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.
כִּ֣י הִֽטַּהֲר֞וּ הַכֹּהֲנִ֧ים וְהַלְוִיִּ֛ם כְּאֶחָ֖ד כֻּלָּ֣ם טְהֹורִ֑ים וַיִּשְׁחֲט֤וּ הַפֶּ֙סַח֙ לְכָל־בְּנֵ֣י הַגֹּולָ֔ה וְלַאֲחֵיהֶ֥ם הַכֹּהֲנִ֖ים וְלָהֶֽם׃
21 ೨೧ ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.
וַיֹּאכְל֣וּ בְנֵֽי־יִשְׂרָאֵ֗ל הַשָּׁבִים֙ מֵֽהַגֹּולָ֔ה וְכֹ֗ל הַנִּבְדָּ֛ל מִטֻּמְאַ֥ת גֹּויֵֽ־הָאָ֖רֶץ אֲלֵהֶ֑ם לִדְרֹ֕שׁ לַֽיהוָ֖ה אֱלֹהֵ֥י יִשְׂרָאֵֽל׃
22 ೨೨ ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.
וַיַּֽעֲשׂ֧וּ חַג־מַצֹּ֛ות שִׁבְעַ֥ת יָמִ֖ים בְּשִׂמְחָ֑ה כִּ֣י ׀ שִׂמְּחָ֣ם יְהוָ֗ה וְֽהֵסֵ֞ב לֵ֤ב מֶֽלֶךְ־אַשּׁוּר֙ עֲלֵיהֶ֔ם לְחַזֵּ֣ק יְדֵיהֶ֔ם בִּמְלֶ֥אכֶת בֵּית־הָאֱלֹהִ֖ים אֱלֹהֵ֥י יִשְׂרָאֵֽל׃ פ

< ಎಜ್ರನು 6 >