< ಆದಿಕಾಂಡ 21 >

1 ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
И Господ походи Сару, као што беше рекао и учини Господ Сари као што беше казао.
2 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
Јер затрудне и роди Сара Авраму сина у старости његовој у исто време кад каза Господ.
3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು.
И Аврам надеде име сину који му се роди, ког му роди Сара, Исак.
4 ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.
И обреза Аврам сина свог Исака кад би од осам дана, као што му заповеди Бог.
5 ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.
А Авраму беше сто година кад му се роди син Исак.
6 ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
А Сара рече: Бог ми учини смех; ко год чује, смејаће ми се.
7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.
И рече: Ко би рекао Авраму да ће Сара дојити децу? Ипак му родих сина у старости његовој.
8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
А кад дете дорасте да се одбије од сисе, учини Аврам велику гозбу онај дан кад одбише Исака од сисе.
9 ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
И Сара виде сина Агаре Мисирке, која га роди Авраму, где се подсмева;
10 ೧೦ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
Па рече Авраму: Отерај ову робињу са сином њеним, јер син ове робиње неће бити наследник с мојим сином, с Исаком.
11 ೧೧ ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.
А то Авраму би врло криво ради сина његовог.
12 ೧೨ ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
Али Бог рече Авраму: Немој да ти је криво ради детета и ради робиње твоје. Шта ти је год казала Сара, послушај; јер ће ти се у Исаку семе прозвати.
13 ೧೩ ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.
Али ћу и од сина робињиног учинити народ, јер је твоје семе.
14 ೧೪ ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.
И Аврам устав ујутру рано, узе хлеба и мешину воде, и даде Агари метнувши јој на леђа, и дете, и отпусти је. А она отишавши луташе по пустињи вирсавској.
15 ೧೫ ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
А кад неста воде у мешини, она баци дете под једно дрво,
16 ೧೬ ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.
Па отиде колико се може стрелом добацити, и седе према њему; јер говораше: Да не гледам како ће умрети дете. И седећи према њему стаде гласно плакати.
17 ೧೭ ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
А Бог чу глас детињи, и анђео Божји викну с неба Агару, и рече јој: Шта ти је Агаро? Не бој се, јер Бог чу глас детињи оданде где је.
18 ೧೮ ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
Устани, дигни дете и узми га у наручје; јер ћу од њега учинити велик народ.
19 ೧೯ ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
И Бог јој отвори очи, те угледа студенац; и отишавши напуни мешину воде, и напоји дете.
20 ೨೦ ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
И Бог беше с дететом, те одрасте, и живеше у пустињи и поста стрелац.
21 ೨೧ ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.
А живеше у пустињи Фарану. И мати га ожени из земље мисирске.
22 ೨೨ ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.
У то време рече Авимелех и Фихол војвода његов Авраму говорећи: Бог је с тобом у свему што радиш.
23 ೨೩ ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
Закуни ми се сада Богом да нећеш преварити мене ни сина мог ни унука мог него да ћеш добро онако како сам ја теби чинио и ти чинити мени и земљи у којој си дошљак.
24 ೨೪ ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು.
А Аврам рече: Хоћу се заклети.
25 ೨೫ ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
Али Аврам прекори Авимелеха за студенац, који узеше на силу слуге Авимелехове.
26 ೨೬ ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.
А Авимелех рече: Не знам ко је то учинио; нити ми ти каза, нити чух до данас.
27 ೨೭ ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.
Тада Аврам узе оваца и говеда, и даде Авимелеху, и ухвати веру међу собом.
28 ೨೮ ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು,
А Аврам одлучи седам јагањаца из стада.
29 ೨೯ ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು.
А Авимелех рече Авраму: Шта ће оно седам јагањаца што си одлучио?
30 ೩೦ ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.
А он одговори: Да примиш из моје руке оно седам јагањаца, да ми буде сведочанство да сам ја ископао овај студенац.
31 ೩೧ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.
Отуда се прозва оно место Вирсавеја, јер се онде заклеше обојица.
32 ೩೨ ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.
Тако ухватише веру на Вирсавеји. Тада се диже Авимелех и Фихол војвода његов, и вратише се у земљу филистејску.
33 ೩೩ ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
А Аврам посади луг на Вирсавеји, и онде призва име Господа Бога Вечног.
34 ೩೪ ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.
И Аврам живеше као дошљак у земљи филистејској много времена.

< ಆದಿಕಾಂಡ 21 >