< ಆದಿಕಾಂಡ 35 >

1 ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
Y dijo Dios a Jacob: Levántate, sube a Bet-el, y estáte allí; y haz allí un altar al Dios que se te apareció cuando huías de tu hermano Esaú.
2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
Entonces Jacob dijo a su familia y a todos los que con él estaban: Quitad los dioses ajenos que hay entre vosotros, y limpiaos, y mudad vuestros vestidos.
3 ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
Y levantémonos, y subamos a Bet-el; y allí haré altar al Dios que me respondió en el día de mi angustia, y ha sido conmigo en el camino que he andado.
4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
Así dieron a Jacob todos los dioses ajenos que había en poder de ellos, y los zarcillos que estaban en sus orejas; y Jacob los escondió debajo de un alcornoque, que estaba en Siquem.
5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
Y salieron, y el terror de Dios fue sobre las ciudades que había en sus alrededores, y no siguieron tras los hijos de Jacob.
6 ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.
Y llegó Jacob a Luz, que está en tierra de Canaán, (esta es Bet-el) él y todo el pueblo que con él estaba;
7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
y edificó allí un altar, y llamó el lugar El-betel, porque allí se le había aparecido Dios, cuando huía de su hermano.
8 ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
Entonces murió Débora, ama de Rebeca, y fue sepultada a las raíces de Bet-el, debajo de un alcornoque; y se llamó su nombre Alón-bacut.
9 ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
Y se apareció otra vez Dios a Jacob, cuando se había vuelto de Padan-aram, y le bendijo.
10 ೧೦ ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
Y le dijo Dios: Tu nombre es Jacob; no se llamará más tu nombre Jacob, sino Israel será tu nombre; y llamó su nombre Israel.
11 ೧೧ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
Y le dijo Dios: Yo soy el Dios Omnipotente: crece y multiplícate; una nación y compañía de naciones ( gentiles ) saldrá de ti, y reyes saldrán de tus lomos;
12 ೧೨ ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
y la tierra que yo he dado a Abraham y a Isaac, la daré a ti; y a tu simiente después de ti daré la tierra.
13 ೧೩ ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.
Y se fue de él Dios, del lugar donde había hablado con él.
14 ೧೪ ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
Y Jacob puso un título en el lugar donde había hablado con él, un título de piedra, y derramó sobre él libación, y echó sobre él aceite.
15 ೧೫ ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
Y llamó Jacob el nombre de aquel lugar donde Dios había hablado con él, Bet-el.
16 ೧೬ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
Y partieron de Bet-el, y había aún como media legua de tierra para llegar a Efrata, cuando dio a luz Raquel, y hubo trabajo en su parto.
17 ೧೭ ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
Y aconteció, que como había trabajo en su parto, le dijo la partera: No temas, que también tendrás este hijo.
18 ೧೮ ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.
Y acaeció que al salírsele el alma, (pues murió) llamó su nombre Benoni; mas su padre lo llamó Benjamín.
19 ೧೯ ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
Así murió Raquel, y fue sepultada en el camino de Efrata, la cual es Belén.
20 ೨೦ ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.
Y puso Jacob un título sobre su sepultura: éste es el título de la sepultura de Raquel hasta hoy.
21 ೨೧ ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
Y salió Israel, y tendió su tienda más allá de la torre de Eder.
22 ೨೨ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
Y acaeció, morando Israel en aquella tierra, que fue Rubén y durmió con Bilha la concubina de su padre; lo cual oyó Israel. Y fueron los hijos de Israel doce:
23 ೨೩ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
Los hijos de Lea: Rubén el primogénito de Jacob, y Simeón, y Leví, y Judá, e Isacar, y Zabulón.
24 ೨೪ ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
Los hijos de Raquel: José, y Benjamín.
25 ೨೫ ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.
Y los hijos de Bilha, sierva de Raquel: Dan, y Neftalí.
26 ೨೬ ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
Y los hijos de Zilpa, sierva de Lea: Gad, y Aser. Estos fueron los hijos de Jacob, que le nacieron en Padan-aram.
27 ೨೭ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.
Y vino Jacob a Isaac su padre a Mamre, a la ciudad de Arba, que es Hebrón, donde habitaron Abraham e Isaac.
28 ೨೮ ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
Y fueron los días de Isaac ciento ochenta años.
29 ೨೯ ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.
Y expiró Isaac y murió, y fue recogido a su pueblo, viejo y lleno de días; y lo sepultaron Esaú y Jacob sus hijos.

< ಆದಿಕಾಂಡ 35 >