< ಆದಿಕಾಂಡ 37 >

1 ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
সেই দিনের যাকোব তার বাবার দেশে, কনান দেশে বাস করছিলেন।
2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
যাকোবের বংশ-বৃত্তান্ত এই। যোষেফ সতেরো বছর বয়সে তার ভাইদের সঙ্গে পশুপাল চরাত; সে ছোটবেলায় তার বাবার স্ত্রী বিলহার ও সিল্পার ছেলেদের সঙ্গী ছিল এবং যোষেফ তাদের খারাপ ব্যবহারের খবর বাবার কাছে আনত।
3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
যোষেফ ইস্রায়েলের বৃদ্ধ বয়সের ছেলে, এই জন্য ইস্রায়েল সব ছেলের থেকে তাকে বেশি ভালবাসতেন এবং তাকে একটা নানা রঙের পোশাক তৈরী করে দিয়েছিলেন।
4 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
কিন্তু বাবা তার সব ভাইদের থেকে তাকে বেশি ভালবাসেন, এটা দেখে তার ভাইয়েরা তাকে ঘৃণা করত, তার সঙ্গে আন্তরিকভাবে কথা বলতে পারত না।
5 ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
আর যোষেফ স্বপ্ন দেখে নিজের ভাইদেরকে তা বলল; এতে তারা তাকে আরও বেশি ঘৃণা করল।
6 ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.
সে তাদেরকে বলল, “আমি এক স্বপ্ন দেখেছি, অনুরোধ করি, তা শোন।
7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.
দেখ, আমরা আঁটি বাঁধছিলাম, আর দেখ, আমার আঁটি উঠে দাঁড়িয়ে থাকল এবং দেখ, তোমাদের আঁটি সব আমার আঁটিকে চারদিকে ঘিরে তার কাছে নত হল।”
8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
এতে তার ভাইয়েরা তাকে বলল, “তুই কি বাস্তবে আমাদের রাজা হবি? আমাদের উপরে বাস্তবে কর্তৃত্ব করবি?” ফলে তারা স্বপ্ন ও তার কথার জন্য তাকে আরো ঘৃণা করল।
9 ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
পরে সে আরো এক স্বপ্ন দেখে ভাইদেরকে তার বৃত্তান্ত বলল। সে বলল, “দেখ, আমি আর এক স্বপ্ন দেখলাম; দেখ, সূর্য্য, চন্দ্র ও এগারো নক্ষত্র আমার সামনে নত হল।”
10 ೧೦ ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
১০সে তার বাবা ও ভাইদেরকে এর বৃত্তান্ত বলল, তাতে তার বাবা তাকে ধমকিয়ে বললেন, “তুমি এ কেমন স্বপ্ন দেখলে? আমি, তোমার মা ও তোমার ভায়েরা, আমরা কি সত্যিই তোমার কাছে ভূমিতে নত হতে আসব?”
11 ೧೧ ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
১১আর তার ভায়েরা, তার প্রতি হিংসা করল, কিন্তু তার বাবা সেই কথা মনে রাখলেন।
12 ೧೨ ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.
১২একবার তার ভায়েরা বাবার পশুপাল চরাতে শিখিমে গিয়েছিল।
13 ೧೩ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
১৩তখন ইস্রায়েল যোষেফকে বললেন, “তোমার ভায়েরা কি শিখিমে পশুপাল চরাচ্ছে না? এস, আমি তাদের কাছে তোমাকে পাঠাই।”
14 ೧೪ ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
১৪সে বলল, “দেখুন, এই আমি।” তখন তিনি তাকে বললেন, “তুমি গিয়ে তোমার ভাইদের বিষয় ও পশুপালের বিষয় জেনে আমাকে সংবাদ এনে দাও।” এই ভাবে তিনি হিব্রোণের উপত্যকা থেকে যোষেফকে পাঠালে সে শিখিমে উপস্থিত হল।
15 ೧೫ ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.
১৫তখন এক জন লোক তাকে দেখতে পেল, আর দেখ, সে মরুপ্রান্তে ভ্রমণ করছে; সেই লোকটি তাকে জিঞ্জাসা করল, “কিসের খোঁজ করছ?”
16 ೧೬ ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು.
১৬সে বলল, “আমার ভাইদের খোঁজ করছি; অনুগ্রহ করে আমাকে বল, তাঁরা কোথায় পাল চরাচ্ছেন।”
17 ೧೭ ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
১৭সে ব্যক্তি বলল, “তারা এ জায়গা থেকে চলে গিয়েছে, কারণ ‘চল, দোথনে যাই,’ তাদের এই কথা বলতে শুনেছিলাম।” পরে যোষেফ নিজের ভাইদের পিছন পিছনে গিয়ে দোথনে তাদের খুঁজে পেল।
18 ೧೮ ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.
১৮তারা দূর থেকে তাকে দেখতে পেল এবং সে কাছে উপস্থিত হবার আগে তাকে হত্যা করার জন্য ষড়যন্ত্র করল।
19 ೧೯ ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ
১৯তারা পরস্পর বলল, “ঐ দেখ, স্বপ্নদর্শক মহাশয় আসছেন,
20 ೨೦ ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
২০এখন এস, আমরা ওকে হত্যা করে একটা গর্তে ফেলে দিই; পরে বলব, কোনো হিংস্র জন্তু তাকে খেয়ে ফেলেছে; তাতে দেখব, ওর স্বপ্নের কি হয়।”
21 ೨೧ ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.
২১রুবেন এটা শুনে তাদের হাত থেকে তাকে উদ্ধার করল, বলল, “না, আমরা ওকে প্রাণে মারব না।”
22 ೨೨ ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.
২২আর রুবেন তাদেরকে বলল, “তোমরা রক্তপাত কর না, ওকে মরুপ্রান্তের এই গর্তের মধ্যে ফেলে দাও, কিন্তু ওর ওপরে হাত তুল না।” এই ভাবে রুবেন তাদের হাত থেকে তাকে উদ্ধার করে বাবার কাছে ফেরত পাঠাবার চেষ্টা করল।
23 ೨೩ ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
২৩পরে যোষেফ নিজের ভাইদের কাছে আসলে তারা তার গা থেকে, সেই বস্ত্র, সেই চোগাখানি খুলে নিল,
24 ೨೪ ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
২৪আর তাকে ধরে গর্তের মধ্যে ফেলে দিল, সেই গর্ত শূন্য ছিল, তাতে জল ছিল না।
25 ೨೫ ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
২৫পরে তারা খাবার খেতে বসল এবং চোখ তুলে চাইল, আর দেখ, গিলিয়দ থেকে এক দল ইশ্মায়েলীয় ব্যবসায়ী লোক আসছে; তারা উটে সুগন্ধি দ্রব্য, গুগ্‌গুলু ও গন্ধরস নিয়ে মিশর দেশে যাচ্ছিল।
26 ೨೬ ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
২৬তখন যিহূদা নিজের ভাইদেরকে বলল, “আমাদের ভাইকে হত্যা করে তার রক্ত গোপন করলে আমাদের কি লাভ?
27 ೨೭ ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
২৭এস, আমরা ঐ ইশ্মায়েলীয়দের কাছে তাকে বিক্রি করি, আমরা তার ওপরে হাত তুলব না; কারণ সে আমাদের ভাই, আমাদের মাংস।” এতে তার ভায়েরা রাজি হল।
28 ೨೮ ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
২৮পরে মিদিয়নীয় বনিকেরা কাছে আসলে ওরা যোষেফকে গর্ত থেকে টেনে তুলল এবং কুড়িটি রূপার মুদ্রায় সেই ইশ্মায়েলীয়দের কাছে যোষেফকে বিক্রি করল; আর তারা যোষেফকে মিশর দেশে নিয়ে গেল।
29 ೨೯ ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
২৯পরে রুবেন গর্তের কাছে ফিরে গেল, আর দেখ, যোষেফ সেখানে নাই; তখন সে নিজের পোশাক ছিঁড়ল, আর ভাইদের কাছে ফিরে এসে বলল,
30 ೩೦ ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.
৩০“যুবকটি নেই, আর আমি! আমি কোথায় যাই?”
31 ೩೧ ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,
৩১পরে তারা যোষেফের পোশাক নিয়ে একটা ছাগল মেরে তার রক্তে তা ডুবাল;
32 ೩೨ ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.
৩২আর লোক পাঠিয়ে সেই চোগাখানি বাবার কাছে এনে বলল, “আমরা এই মাত্র পেলাম, পরীক্ষা করে দেখ, এটা তোমার ছেলের পোশাক কি না?”
33 ೩೩ ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
৩৩তিনি চিনতে পেরে বললেন, এত আমার ছেলেরই পোশাক; কোনো হিংস্র জন্তু তাকে খেয়ে ফেলেছে, যোষেফ অবশ্য খণ্ড খণ্ড হয়েছে।
34 ೩೪ ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
৩৪তখন যাকোব নিজের পোশাক ছিঁড়ে কোমরে চট পরিধান করে ছেলের জন্য অনেক দিন পর্যন্ত শোক করলেন।
35 ೩೫ ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. (Sheol h7585)
৩৫আর তাঁর সব ছেলেমেয়ে উঠে তাঁকে সান্ত্বনা করতে যত্ন করলেও তিনি প্রবোধ না মেনে বললেন, “আমি শোক করতে ছেলের কাছে পাতালে নামব।” এই ভাবে তার বাবা তার জন্য কাঁদলেন। (Sheol h7585)
36 ೩೬ ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
৩৬আর ঐ মিদিয়নীয়েরা যোষেফকে মিশরে নিয়ে গিয়ে ফরৌণের কর্মচারী রক্ষক-সেনাপতি পোটীফরের কাছে বিক্রি করল।

< ಆದಿಕಾಂಡ 37 >