< ಆದಿಕಾಂಡ 8 >

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
А Бог се опомену Ноја и свих звери и све стоке што беху с њим у ковчегу; и посла Бог ветар на земљу да узбије воду.
2 ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
И затворише се извори бездану и уставе небеске, и дажд с неба престаде.
3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
И стаде вода опадати на земљи, и једнако опадаше после сто педесет дана;
4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
Те се устави ковчег седмог месеца дана седамнаестог на планини Арарату.
5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
И вода опадаше све већма до десетог месеца; и првог дана десетог месеца показаше се врхови од брда.
6 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
А после четрдесет дана отвори Ноје прозор на ковчегу, који беше начинио;
7 ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
И испусти гаврана, који једнако одлеташе и долеташе докле не пресахну вода на земљи.
8 ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
Па пусти и голубицу да би видео је ли опала вода са земље.
9 ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
А голубица не нашавши где би стала ногом својом врати се к њему у ковчег, јер још беше вода по свој земљи; и Ноје пруживши руку ухвати је и узе к себи у ковчег.
10 ೧೦ ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
И почека још седам дана, па опет испусти голубицу из ковчега.
11 ೧೧ ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
И пред вече врати се к њему голубица, и гле, у кљуну јој лист маслинов, који беше откинула; тако позна Ноје да је опала вода са земље.
12 ೧೨ ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
Али почека још седам дана, па опет испусти голубицу, а она му се више не врати.
13 ೧೩ ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
Шест стотина прве године века Нојевог први дан првог месеца усахну вода на земљи; и Ноје откри кров на ковчегу, и угледа земљу суву.
14 ೧೪ ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
А другог месеца двадесет седмог дана беше сва земља сува.
15 ೧೫ ಆಗ ದೇವರು ನೋಹನಿಗೆ,
Тада рече Бог Ноју говорећи:
16 ೧೬ “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
Изађи из ковчега ти и жена твоја и синови твоји и жене синова твојих с тобом;
17 ೧೭ ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
Све звери што су са тобом од сваког тела, птице и стоку и шта год гамиже по земљи, изведи са собом, нека се разиђу по земљи, и нека се плоде и множе на земљи.
18 ೧೮ ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.
И изиђе Ноје и синови његови и жена његова и жене синова његових с њим.
19 ೧೯ ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
Све звери, све ситне животиње, све птице и све што се миче по земљи по својим врстама изиђоше из ковчега.
20 ೨೦ ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
И начини Ноје жртвеник Господу, и узе од сваке чисте стоке и од свих птица чистих, и принесе на жртвенику жртве паљенице.
21 ೨೧ ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
И Господ омириса мирис угодни, и рече у срцу свом: Нећу више клети земље с људи, што је мисао срца човечијег зла од малена; нити ћу више убијати све што живи, као што учиних.
22 ೨೨ ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
Од сада докле буде земље, неће нестајати сетве ни жетве, студени ни врућине, лета ни зиме, дана ни ноћи.

< ಆದಿಕಾಂಡ 8 >

A Dove is Sent Forth from the Ark
A Dove is Sent Forth from the Ark