< ಹೋಶೇಯನು 14 >

1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
שׁ֚וּבָה יִשְׂרָאֵ֔ל עַ֖ד יְהוָ֣ה אֱלֹהֶ֑יךָ כִּ֥י כָשַׁ֖לְתָּ בַּעֲוֹנֶֽךָ׃
2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
קְח֤וּ עִמָּכֶם֙ דְּבָרִ֔ים וְשׁ֖וּבוּ אֶל־יְהוָ֑ה אִמְר֣וּ אֵלָ֗יו כָּל־תִּשָּׂ֤א עָוֹן֙ וְקַח־טֹ֔וב וּֽנְשַׁלְּמָ֥ה פָרִ֖ים שְׂפָתֵֽינוּ׃
3 ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.
אַשּׁ֣וּר ׀ לֹ֣א יֹושִׁיעֵ֗נוּ עַל־סוּס֙ לֹ֣א נִרְכָּ֔ב וְלֹא־נֹ֥אמַר עֹ֛וד אֱלֹהֵ֖ינוּ לְמַעֲשֵׂ֣ה יָדֵ֑ינוּ אֲשֶׁר־בְּךָ֖ יְרֻחַ֥ם יָתֹֽום׃
4 ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
אֶרְפָּא֙ מְשׁ֣וּבָתָ֔ם אֹהֲבֵ֖ם נְדָבָ֑ה כִּ֛י שָׁ֥ב אַפִּ֖י מִמֶּֽנּוּ׃
5 ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.
אֶהְיֶ֤ה כַטַּל֙ לְיִשְׂרָאֵ֔ל יִפְרַ֖ח כַּשֹּֽׁושַׁנָּ֑ה וְיַ֥ךְ שָׁרָשָׁ֖יו כַּלְּבָנֹֽון׃
6 ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.
יֵֽלְכוּ֙ יֹֽנְקֹותָ֔יו וִיהִ֥י כַזַּ֖יִת הֹודֹ֑ו וְרֵ֥יחַֽ לֹ֖ו כַּלְּבָנֹֽון׃
7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.
יָשֻׁ֙בוּ֙ יֹשְׁבֵ֣י בְצִלֹּ֔ו יְחַיּ֥וּ דָגָ֖ן וְיִפְרְח֣וּ כַגָּ֑פֶן זִכְרֹ֖ו כְּיֵ֥ין לְבָנֹֽון׃ ס
8 ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.
אֶפְרַ֕יִם מַה־לִּ֥י עֹ֖וד לָֽעֲצַבִּ֑ים אֲנִ֧י עָנִ֣יתִי וַאֲשׁוּרֶ֗נּוּ אֲנִי֙ כִּבְרֹ֣ושׁ רַֽעֲנָ֔ן מִמֶּ֖נִּי פֶּרְיְךָ֥ נִמְצָֽא׃
9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
מִ֤י חָכָם֙ וְיָ֣בֵֽן אֵ֔לֶּה נָבֹ֖ון וְיֵֽדָעֵ֑ם כִּֽי־יְשָׁרִ֞ים דַּרְכֵ֣י יְהוָ֗ה וְצַדִּקִים֙ יֵ֣לְכוּ בָ֔ם וּפֹשְׁעִ֖ים יִכָּ֥שְׁלוּ בָֽם׃

< ಹೋಶೇಯನು 14 >