< ಯೆರೆಮೀಯನು 1 >

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
Słowa Jeremijasza, syna Helkijaszowego, z kapłanów, którzy byli w Anatot, w ziemi Benjamin
2 ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
Do którego stało się słowo Pańskie za dni Jozyjasza, syna Amonowego, króla Judzkiego trzynastego roku królowania jego.
3 ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
A stało się za dni Joakima, syna Jozyjaszowego, króla Judzkiego, aż do skończenia jedenastego roku Sedekijasza, syna Jozyjasza, króla Judzkiego, aż do przeprowadzenia Jeruzalemczyków, miesiąca piątego,
4 ಕರ್ತನಾದ ಯೆಹೋವನು ನನಗೆ,
Stało się mówię, słowo Pańskie do mnie, mówiąc
5 “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
Pierwej niżelim cię utworzył w żywocie, znałem cię, a pierwej niżeliś wyszedł z żywota, poświęciłem cię, za proroka narodom dałem cię.
6 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.
I rzekłem: Ach, ach panujący Panie! Oto nie umiem mówić, bom jest dziecięciem.
7 ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
Ale Pan rzekł do mnie: Nie mów: Jestem dziecięciem, owszem, na wszystko, na co cię poślę, idź, a wszystko, coć rozkażę, mów
8 ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
Nie bój się oblicza ich, bom Ja jest z tobą, abym cię wybawił, mówi Pan.
9 ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
A wyciągnąwszy Pan rękę swoję, dotknął się ust moich, i rzekł mi Pan: Otom dał słowa moje do ust twoich.
10 ೧೦ ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
Oto cię dziś postanawiam nad narodami i nad królestwami, abyś wykorzeniał, i psuł, i wytracał, i obalał, i abyś budował i szczepił.
11 ೧೧ ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
Potem stało się słowo Pańskie do mnie, mówiąc: Co widzisz Jeremijaszu? I rzekłem: Widzę rózgę migdałową.
12 ೧೨ ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.
I rzekł Pan do mnie: Dobrze widzisz: albowiem się Ja pospieszam z słowem swem, abym je wykonał.
13 ೧೩ ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
I stało się słowo Pańskie do mnie powtóre, mówiąc: Co widzisz? I rzekłem: Widzę garniec wrzący, a przednia strona jego ku stronie północnej.
14 ೧೪ ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
I rzekł Pan do mnie: Od północy przypadnie złe na wszystkich mieszkających na tej ziemi.
15 ೧೫ ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
Bo oto Ja zawołam wszystkich rodzajów z królestw północnych, mówi Pan, aby przyciągnąwszy każdy z nich, postanowił stolicę swoję w wejściu bram Jeruzalemskich i przy wszystkich murach jego, i przy wszystkich miastach Judzkich.
16 ೧೬ ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
A tak opowiem sądy moje przeciwko nim dla wszelakiej złości tych, którzy mię opuścili, a kadzili bogom obcym, i kłaniali się robocie rąk swoich.
17 ೧೭ ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
Przetoż ty przepasz biodra swoje, a wstawszy mów do nich wszystko, co Ja tobie rozkazuję, nie bój się ich bym cię snać nie starł przed obliczem ich,
18 ೧೮ ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
Bo oto Ja postanawiam cię dziś miastem obronnem, i słupem żelaznym, i murem miedzianym przeciwko tej wszystkiej ziemi, przeciwko królom Judzkim, przeciwko książętom ich, przeciwko kapłanom ich, i przeciwko ludowi tej ziemi;
19 ೧೯ ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
Którzy walczyć będą przeciwko tobie, ale cię nie przemogą: bom Ja z tobą mówi Pan, abym cię wybawił.

< ಯೆರೆಮೀಯನು 1 >