< ಯೋಬನು 7 >

1 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.
Kakukho yini imfazo kumuntu emhlabeni, lensuku zakhe kazinjengensuku zoqhatshiweyo yini?
2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
Njengesigqili sikhefuzelela umthunzi, lanjengesiqatshwa silindele iholo laso,
3 ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.
ngokunjalo mina ngidliswe ilifa lenyanga zeze, lobusuku bezinhlupheko bubalelwe mina.
4 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.
Lapho ngilala phansi ngithi: Ngizavuka nini? Ngoba ubusuku bude, njalo ngigcwele ukutshukuma kuze kuse.
5 ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.
Inyama yami yembethe impethu lamagade othuli; isikhumba sami siyadabuka siyenyanyeka.
6 ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.
Insuku zami ziyaphangisa kuleselukiso someluki, ziphele kungelathemba.
7 ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.
Khumbula ukuthi impilo yami ingumoya; ilihlo lami kaliyikuphinda libone okuhle.
8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.
Ilihlo longibonayo kaliyikungibona futhi; amehlo akho aphezu kwami, kodwa ngizakuba ngingasekho.
9 ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. (Sheol h7585)
Iyezi liyaphela linyamalale; ngokunjalo owehlela engcwabeni kayikwenyuka. (Sheol h7585)
10 ೧೦ ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.
Kaphindi abuyele emzini wakhe, lendawo yakhe kayisayikumazi.
11 ೧೧ ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.
Ngakho mina kangiyikubamba umlomo wami; ngizakhuluma ekucindezelweni komoya wami, ngisole ekubabeni komphefumulo wami.
12 ೧೨ ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?
Ngilulwandle yini, kumbe isilo solwandle, ukuze lingibekele abalindi?
13 ೧೩ ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ
Lapho ngisithi: Umbheda wami uzangiduduza, icansi lami liphungule ukusola kwami;
14 ೧೪ ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ.
ubusungiqhaqhazelisa ngamaphupho, angethuse ngemibono;
15 ೧೫ ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.
ukuze umphefumulo wami ukhethe ukuklinywa, ukufa kulamathambo ami.
16 ೧೬ ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
Ngiyanengwa yikho, kangiyikuphila njalonjalo; ngiyekele, ngoba insuku zami ziyize.
17 ೧೭ ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?
Uyini umuntu ukuthi umkhulise, lokuthi ubeke inhliziyo yakho kuye,
18 ೧೮ ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?
lokuthi umhambele ikuseni yonke, umlinge sonke isikhathi?
19 ೧೯ ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?
Koze kube nini ungayekeli ukungiqaphela, ungangiyekeli ngize ngiginye amathe ami yini?
20 ೨೦ ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.
Ngonile, ngizakwenzani kuwe, wena mlindi wabantu? Ungimiseleni ngibe yinto yakho yokunenjwa, ngize ngibe ngumthwalo kimi?
21 ೨೧ ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
Njalo kawuthetheleli ngani isiphambeko sami, ususe isono sami? Ngoba sengizalala phansi othulini; uzangidinga ngovivi, kodwa kangiyikuba khona.

< ಯೋಬನು 7 >