< ಯೆಹೋಶುವನು 14 >

1 ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
А ово је што добише наследство синови Израиљеви у земљи хананској, што разделише у наследство Елеазар свештеник и Исус син Навин и поглавари породица отачких по племенима синова Израиљевих,
2 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
Жребом делећи им наследство, као што заповеди Господ преко Мојсија, међу девет племена и половину племена.
3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
Јер Мојсије даде наследство двема племенима и половини племена с ове стране Јордана, а Левитима не даде наследство међу њима.
4 ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
Јер синова Јосифових беху два племена: Манасијино и Јефремово, и Левитима не даше део у земљи, осим градова у којима ће живети и подграђа њихових за стоку њихову и за благо њихово.
5 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.
Како беше заповедио Господ Мојсију, тако учинише синови Израиљеви и поделише земљу.
6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
А синови Јудини дођоше к Исусу у Галгал, и рече му Халев син Јефонијин Кенезеј: Ти знаш шта је казао Господ Мојсију слузи Божјем за ме и за те у Кадис-Варнији.
7 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
Било ми је четрдесет година кад ме посла Мојсије слуга Господњи из Кадис-Варније да уходим земљу, и јавих му ствар, како ми је било у срцу.
8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
А браћа моја што иђоше са мном уплашише срце народу; али се ја једнако држах Господа Бога свог.
9 ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
И закле се Мојсије онај дан говорећи: Заиста земља по којој си ходио ногама својим, допашће теби у наследство и синовима твојим довека; јер си се сасвим држао Господа Бога мог.
10 ೧೦ ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
А сада, ето, сачува ме Господ у животу, као што је рекао; има већ четрдесет и пет година како то рече Господ Мојсију, кад Израиљ иђаше по пустињи; и сад, ето, има ми данас осамдесет и пет година.
11 ೧೧ ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
И данас сам јоште крепак, као што сам био кад ме је Мојсије слао; крепост ми је и сад онаква каква је била онда за бој и да одлазим и долазим.
12 ೧೨ ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
Зато дај ми сада ову гору, за коју је говорио Господ у онај дан; јер си чуо у онај дан да су онде Енакими и градови велики и тврди; да ако буде Господ са мном, те их истерам, као што је Господ казао.
13 ೧೩ ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
И Исус га благослови, и даде Хеврон Халеву сину Јефонијином у наследство.
14 ೧೪ ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
Зато припаде Хеврон Халеву сину Јефонијином Кенезеју у наследство до данашњег дана, јер се једнако држао Господа Бога Израиљевог.
15 ೧೫ ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.
А име Хеврону беше пре Киријат-Арва, а Арва беше велик човек међу Енакимима. И земља почину од рата.

< ಯೆಹೋಶುವನು 14 >