< ನ್ಯಾಯಸ್ಥಾಪಕರು 19 >

1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.
И у то време, кад не беше цара у Израиљу, беше један Левит који живљаше као дошљак крај горе Јефремове, и узе иночу из Витлејема Јудиног.
2 ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
А иноча његова чињаше прељубу код њега, па отиде од њега кући оца свог у Витлејем Јудин, и оста онде четири месеца.
3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.
А муж њен уста и отиде за њом да јој лепо говори и да је доведе натраг, имајући са собом момка свог, и два магарца; и она га уведе у кућу оца свог, и кад га виде отац њен обрадова се доласку његовом.
4 ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
И устави га таст његов, отац младичин, и оста код њега три дана, и онде јеђаху и пијаху и ноћиваху.
5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು
А четврти дан кад усташе рано, уста и он да иде; али отац младичин рече зету свом: Поткрепи срце своје залогајем хлеба, па онда идите.
6 ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;
И тако седоше и седоше обојица заједно и напише се; па рече отац младичин мужу: Хајде остани још ноћас, и буди весео.
7 ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.
Али човек уста да иде; али таст његов навали на њ, те опет ноћи онде.
8 ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.
Потом урани петог дана да иде; и рече му отац младичин: Поткрепи срце своје. И једући заједно забавише се докле и дан наже.
9 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.
Тада уста човек да иде, он и иноча му и момак; а таст његов, отац младичин, рече му: Ето, дан је већ нагао, вече је, преноћите овде; ето доцкан је, преноћи овде, и буди весео, па сутра ураните на пут, и иди к свом шатору.
10 ೧೦ ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.
Али човек не хте ноћити; него уста и пође; и дође до Јевуса, а то је Јерусалим, и с њим два магарца натоварена и иноча његова.
11 ೧೧ ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.
А кад беху близу Јевуса, дан беше нагао врло, па рече слуга господару свом: Хајде брже да се свратимо у тај град Јевус, и ту да ноћимо.
12 ೧೨ ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.
А господар му рече: Нећемо свртати у туђ град, који није синова Израиљевих, него ћемо ићи до Гаваје.
13 ೧೩ ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.
Још рече момку свом: Хајде брже да стигнемо у које од тих места и да ноћимо у Гаваји или у Рами.
14 ೧೪ ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.
И минуше онуда и отидоше; и сунце их зађе близу Гаваје Венијаминове.
15 ೧೫ ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.
И окретоше онамо да отиду и преноће у Гаваји, и кад уђе, седе на улици градској; и не би никога да их прими у кућу да преноће.
16 ೧೬ ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
И гле, један старац враћаше се с посла свог из поља увече, а беше из горе Јефремове и живљаше као дошљак у Гаваји; а људи оног места беху синови Венијаминови.
17 ೧೭ ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
И он подигавши очи своје угледа оног човека путника на улици градској; и рече му старац: Куда идеш? И откуда идеш?
18 ೧೮ ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.
А он му одговори: Идемо до Витлејема Јудиног до на крај горе Јефремове; оданде сам, па сам ишао до Витлејема Јудиног, а сада идем к дому Господњем и нема никога да ме прими у кућу.
19 ೧೯ ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.
А имамо и сламе и пиће за магарце своје, и хлеба и вина за се и за слушкињу твоју и за момка који је са слугом твојим имамо свега доста.
20 ೨೦ ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
А старац му рече: Буди миран; шта ти год недостаје, ја ћу се старати за то; само немој ноћити на улици.
21 ೨೧ ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
И уведе га у своју кућу, и положи магарцима; потом опраше ноге, и једоше и пише.
22 ೨೨ ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.
А кад се развеселише, гле, људи оног града, безаконици, опколише кућу, и стадоше лупати у врата, и рекоше старцу, господару од куће, говорећи: Изведи тог човека што је ушао у твоју кућу, да га познамо.
23 ೨೩ ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
И изашав к њима онај човек, господар од куће, рече им: Не, браћо, не чините зло; кад је човек ушао у моју кућу, не чините то безумље.
24 ೨೪ ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.
Ево кћи моја девојка и иноча његова, њих ћу вам извести, па њих осрамотите и чините с њима шта вам је воља, само човеку овом не чините то безумље.
25 ೨೫ ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.
Али га не хтеше послушати они људи; тада онај човек узе иночу своју и изведе је напоље к њима, и они је познаше, и злоставише је целу ноћ до зоре, и пустише је кад зора забеле.
26 ೨೬ ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.
И дошавши жена у зору паде код врата од куће оног човека где беше господар њен, и лежа докле се не расвану.
27 ೨೭ ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.
А господар њен уста ујутру, и кад отвори врата и изађе да иде својим путем, а то жена иноча његова лежаше на вратима кућним, и руке јој на прагу.
28 ೨೮ ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.
И рече јој: Устани да идемо. Али не би одговора; тада је метну на магарца, и уставши човек пође у место своје,
29 ೨೯ ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
И дошав кући својој узе мач, и узе иночу своју и исече је с костима на дванаест комада и разасла у све крајеве Израиљеве.
30 ೩೦ ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.
И ко год виде говораше: Није се учинило нити се видело такво шта откад изиђоше синови Израиљеви из Мисира до данас. Промислите о том и већајте и говорите.

< ನ್ಯಾಯಸ್ಥಾಪಕರು 19 >