< ನ್ಯಾಯಸ್ಥಾಪಕರು 7 >

1 ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
И урани Јеровал, то је Гедеон, и сав народ што беше с њим, и стадоше у логор код извора Арода; а војска мадијанска беше му са севера крај горе Мореха у долини.
2 ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
А Господ рече Гедеону: Много је народа с тобом, зато им нећу дати Мадијане у руке, да се не би хвалио Израиљ супрот мени говорећи: Моја ме рука избави.
3 ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
Него сада огласи да чује народ и реци: Ко се боји и кога је страх, нека се врати и нек иде одмах ка гори Галаду. И врати се из народа двадесет и две хиљаде; а десет хиљада оста.
4 ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.
Опет рече Господ Гедеону: Још је много народа; сведи их на воду, и онде ћу ти их пребрати; за ког ти год кажем: Тај нека иде с тобом, нека иде с тобом; а за кога ти год кажем: Тај нека не иде с тобом, нека не иде.
5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.
И сведе народ на воду; а Господ рече Гедеону: Који стане лаптати језиком воду, као што лапће пас, метни га на страну; тако и сваког који клекне на колена да пије.
6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.
И оних који лапташе, руком својом к устима принесавши воду, беше три стотине људи; а сав остали народ клече на колена своја да пију воде.
7 ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
Тада рече Господ Гедеону: С тих триста људи који лапташе воду избавићу вас и предаћу ти у руке Мадијане; нека дакле одлази сав овај народ свако на своје место.
8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.
И народ узе брашњенице и трубе; и Гедеон отпусти све људе Израиљце да иду сваки у свој шатор, а оних триста људи задржа. А логор мадијански беше ниже њега у долини.
9 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.
И ону ноћ рече му Господ: Устани, сиђи у логор, јер ти га дадох у руке.
10 ೧೦ ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;
Ако ли се бојиш сам сићи, сиђи у логор са Фуром момком својим,
11 ೧೧ ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.
И чућеш шта говоре, па ће ти осилити руке и ударићеш на логор. И сиђе он и Фура момак његов до краја војске која беше у логору.
12 ೧೨ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
А Мадијани и Амалици и сав народ источни лежаху по долини као скакавци, тако их беше много; и камилама њиховим не беше броја; беше их много као песка по брегу морском,
13 ೧೩ ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು
И кад дође Гедеон, а то један приповедаше другу свом сан и говораше: Гле усних, а то печен хлеб јечмен котрљаше се к логору мадијанском и дође до шатора и стаде ударати о њих, те падаху, и испремета их, и попадаше шатори.
14 ೧೪ ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
А друг му одговори и рече: То није друго него мач Гедеона сина Јоасовог човека Израиљца; предао му је у руке Бог Мадијане и сав овај логор.
15 ೧೫ ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
И кад Гедеон чу како онај приповеди сан и како га овај истумачи, поклони се и врати се у логор израиљски и рече: Устајте, јер вам даде Господ у руке логор мадијански.
16 ೧೬ ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
Потом раздели триста људи у три чете, и даде свакоме по трубу у руку и по празан жбан и по луч у жбан.
17 ೧೭ “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.
И рече им: На мене гледајте, па тако чините; гле, је ћу доћи на крај логора, па шта ја ушчиним, то чините.
18 ೧೮ ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
Кад ја затрубим у трубу и сви који буду са мном, тада и ви затрубите у трубе око свега логора, и вичите: Мач Господњи и Гедеонов.
19 ೧೯ ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
И дође Гедеон и сто људи што беху с њим на крај логора, у почетак средње страже, истом беху променили стражу; а они затрубеше у трубе и полупаше жбанове које имаху у рукама.
20 ೨೦ ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
Тако три чете затрубише у трубе и полупаше жбанове, и држаху у левој руци лучеве а у десној трубе трубећи, и повикаше: Мач Господњи и Гедеонов.
21 ೨೧ ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.
И стадоше сваки на свом месту око војске; а сва се војска смете и стадоше викати и бежати.
22 ೨೨ ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
А кад затрубише у трубе оних три стотине, Господ обрати мач свакоме на друга његовог по свему логору, те побеже војска до Вет-Асете, у Зерерат, до обале авел-меолске код Тавата.
23 ೨೩ ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
А Израиљци из племена Нефталимовог и Асирова и из свега племена Манасијиног стекоше се и гонише Мадијане.
24 ೨೪ ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
И Гедеон посла гласнике по свој гори Јефремовој говорећи: Сиђите пред Мадијане и ухватите им воде до Ветваре дуж Јордана. И стекоше се сви људи из племена Јефремовог и ухватише воде до Ветваре дуж Јордана.
25 ೨೫ ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
И ухватише два кнеза мадијанска, Орива и Зива, и убише Орива на стени Оривовој, а Зива убише код теснаца Зивовог; и гонише Мадијане, и донесоше главу Оривову и Зивову ка Гедеону преко Јордана.

< ನ್ಯಾಯಸ್ಥಾಪಕರು 7 >