< ಪ್ರಲಾಪಗಳು 4 >

1 ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
Како потамне злато, промени се чисто злато? Камење је од светиње разметнуто по угловима свих улица.
2 ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
Драги синови сионски, цењени као најчистије злато, како се цене земљани судови, као дело руку лончаревих!
3 ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.
И звери истичу сисе своје и доје млад своју, а кћи народа мог поста немилостива као ној у пустињи.
4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
Језик детету које сиса приону за грло од жеђи; деца ишту хлеба, а нема никога да им ломи.
5 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.
Који јеђаху посластице, гину на улицама; који одрастоше у скерлету, ваљају се по буњишту.
6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
И кар који допаде кћери народа мог већи је од пропасти која допаде Содому, који се затре у часу и руке се не забавише око њега.
7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.
Назиреји њени беху чистији од снега, бељи од млека; тело им беше црвеније од драгог камења, глатки као сафир.
8 ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.
А сада им је лице црње од угља, не познају се на улицама; кожа им се прилепила за кости, осушила се као дрво.
9 ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
Боље би онима који су побијени мачем него онима који мру од глади, који издишу убијени од несташице рода земаљског.
10 ೧೦ ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.
Својим рукама жене жалостиве куваше децу своју, она им бише храна у погибли кћери народа мог.
11 ೧೧ ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.
Наврши Господ гнев свој, изли жестоки гнев свој, и распали огањ на Сиону, који му прождре темеље.
12 ೧೨ ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.
Не би веровали цареви земаљски и сви становници по васиљеној да ће непријатељ и противник ући на врата јерусалимска.
13 ೧೩ ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
Али би за грехе пророка његових и за безакоња свештеника његових, који проливаху крв праведничку усред њега.
14 ೧೪ ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.
Лутаху као слепци по улицама, каљаху се крвљу, које не могаху да се не дотичу хаљинама својим.
15 ೧೫ ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
Одступите, нечисти, вичу им, одступите, одступите, не додевајте се ничега. И одлазе и скитају се; и међу народима се говори: Неће се више станити.
16 ೧೬ ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
Гнев Господњи расеја их, неће више погледати на њих; не поштују свештеника, нису жалостиви на старце.
17 ೧೭ ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.
Већ нам очи ишчилеше изгледајући помоћ залудну; чекасмо народ који не може избавити.
18 ೧೮ ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
Вребају нам кораке, да не можемо ходити по улицама својим, приближи се крај наш, навршише се дани наши, дође крај наш.
19 ೧೯ ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
Који нас гонише, беху лакши од орлова небеских, по горама нас гонише, у пустињи нам заседаше.
20 ೨೦ ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
Дисање ноздрва наших, помазаник Господњи, за ког говорасмо да ћемо живети под сеном његовим међу народима, ухвати се у јаме њихове.
21 ೨೧ ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
Радуј се и весели се, кћери едомска, која живиш у земљи Узу! Доћи ће до тебе чаша, опићеш се, и открићеш се.
22 ೨೨ ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.
Сврши се кар за безакоње твоје, кћери сионска; неће те више водити у ропство; походиће твоје безакоње, кћери едомска, откриће грехе твоје.

< ಪ್ರಲಾಪಗಳು 4 >