< ಪ್ರಲಾಪಗಳು 5 >

1 ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.
耶和華啊,求你記念我們所遭遇的事, 觀看我們所受的凌辱。
2 ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.
我們的產業歸與外邦人; 我們的房屋歸與外路人。
3 ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.
我們是無父的孤兒; 我們的母親好像寡婦。
4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.
我們出錢才得水喝; 我們的柴是人賣給我們的。
5 ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.
追趕我們的,到了我們的頸項上; 我們疲乏不得歇息。
6 ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.
我們投降埃及人和亞述人, 為要得糧吃飽。
7 ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.
我們列祖犯罪,而今不在了; 我們擔當他們的罪孽。
8 ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.
奴僕轄制我們, 無人救我們脫離他們的手。
9 ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.
因為曠野的刀劍, 我們冒着險才得糧食。
10 ೧೦ ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
因飢餓燥熱, 我們的皮膚就黑如爐。
11 ೧೧ ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.
敵人在錫安玷污婦人, 在猶大的城邑玷污處女。
12 ೧೨ ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.
他們吊起首領的手, 也不尊敬老人的面。
13 ೧೩ ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.
少年人扛磨石, 孩童背木柴,都絆跌了。
14 ೧೪ ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.
老年人在城門口斷絕; 少年人不再作樂。
15 ೧೫ ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.
我們心中的快樂止息, 跳舞變為悲哀。
16 ೧೬ ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!
冠冕從我們的頭上落下; 我們犯罪了,我們有禍了!
17 ೧೭ ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.
這些事我們心裏發昏, 我們的眼睛昏花。
18 ೧೮ ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.
錫安山荒涼, 野狗行在其上。
19 ೧೯ ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.
耶和華啊,你存到永遠; 你的寶座存到萬代。
20 ೨೦ ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?
你為何永遠忘記我們? 為何許久離棄我們?
21 ೨೧ ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
耶和華啊,求你使我們向你回轉, 我們便得回轉。 求你復新我們的日子,像古時一樣。
22 ೨೨ ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;
你竟全然棄絕我們, 向我們大發烈怒?

< ಪ್ರಲಾಪಗಳು 5 >