< ಲೂಕನು 22 >

1 ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,
Jam alproksimiĝis la festo de macoj, kiu estas nomata la Pasko.
2 ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
Kaj la ĉefpastroj kaj la skribistoj serĉis, kiamaniere ili povu mortigi lin, ĉar ili timis la popolon.
3 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
Kaj Satano eniris en Judason, nomatan Iskariota, kiu estis el la nombro de la dek du.
4 ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
Kaj li foriris kaj interparolis kun la ĉefpastroj kaj kapitanoj, kiamaniere transdoni lin al ili.
5 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,
Kaj ili ĝojis, kaj konsentis doni al li monon.
6 ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
Kaj li promesis, kaj serĉis okazon transdoni lin al ili, for de la homamaso.
7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,
Kaj venis la tago de macoj, kiam oni devis buĉi la Paskon.
8 ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
Kaj li sendis Petron kaj Johanon, dirante: Iru kaj pretigu por ni la Paskon, por ke ni ĝin manĝu.
9 ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,
Kaj ili diris al li: Kie vi volas, ke ni pretigu?
10 ೧೦ ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
Kaj li diris al ili: Jen kiam vi estos enirintaj en la urbon, vin renkontos viro, portanta kruĉon da akvo; lin sekvu en la domon, en kiun li eniros.
11 ೧೧ ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
Kaj vi diros al la domomastro: La Majstro diras: Kie estas la gastoĉambro, en kiu mi manĝos la Paskon kun miaj disĉiploj?
12 ೧೨ ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
Kaj li montros al vi grandan supran ĉambron aranĝitan; tie pretigu.
13 ೧೩ ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
Kaj ili iris kaj trovis tiel, kiel li diris al ili; kaj ili pretigis la Paskon.
14 ೧೪ ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
Kaj kiam alvenis la horo, li sidiĝis, kaj la apostoloj kun li.
15 ೧೫ ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
Kaj li diris al ili: Kun deziro mi deziris manĝi ĉi tiun Paskon kun vi, antaŭ ol mi suferos;
16 ೧೬ ಇನ್ನು ದೇವರ ರಾಜ್ಯದಲ್ಲಿಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
ĉar mi diras al vi: Mi ne manĝos ĝin, antaŭ ol ĝi plenumiĝos en la regno de Dio.
17 ೧೭ ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.
Kaj ricevinte kalikon, kaj doninte dankon, li diris: Ĉi tion prenu kaj dividu inter vi;
18 ೧೮ ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
ĉar mi diras al vi: De nun mi ne trinkos el la frukto de la vinberarbo, ĝis venos la regno de Dio.
19 ೧೯ ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
Kaj li prenis panon, kaj doninte dankon, li ĝin dispecigis kaj donis al ili, dirante: Ĉi tio estas mia korpo, kiu estas donita por vi; ĉi tion faru por memorigo pri mi.
20 ೨೦ ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
Sammaniere ankaŭ la kalikon post la vespermanĝo, dirante: Ĉi tiu kaliko estas la nova interligo en mia sango, kiu estas elverŝata por vi.
21 ೨೧ “ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.
Sed jen la mano de tiu, kiu min perfidas, estas apud mi sur la tablo.
22 ೨೨ ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.
Ĉar la Filo de homo ja iros, laŭ la antaŭdecido; sed ve al tiu viro, de kiu li estos perfidata!
23 ೨೩ ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
Kaj ili komencis diskuti inter si: kiu el ili faros tion.
24 ೨೪ ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
Kaj fariĝis ankaŭ inter ili disputo: kiun el ili oni opinias la plej granda.
25 ೨೫ ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
Kaj li diris al ili: La reĝoj de la nacianoj faras sin sinjoroj super ili; kaj tiujn, kiuj potencas inter ili, oni nomas Bonfarantoj.
26 ೨೬ ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.
Sed vi ne estu tiaj; sed kiu estas la pli granda el vi, tiu fariĝu kiel la pli juna; kaj tiu, kiu estas ĉefa, kiel la servanto.
27 ೨೭ ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
Ĉar kiu estas la pli granda, la sidanto ĉe manĝo, aŭ la servanto? ĉu ne la sidanto ĉe manĝo? sed mi estas meze de vi kiel la servanto.
28 ೨೮ ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
Sed vi estas tiuj, kiuj restadis apud mi en miaj tentoj;
29 ೨೯ ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;
kaj mi difinas por vi regnon, kiel mia Patro difinis por mi;
30 ೩೦ ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
por ke vi manĝu kaj trinku ĉe mia tablo en mia regno, kaj sidu sur tronoj, juĝante la dek du tribojn de Izrael.
31 ೩೧ “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.
Simon, Simon, jen Satano postulis vin ĉiujn, por kribri kiel tritikon;
32 ೩೨ ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
sed mi preĝis por vi, ke via fido ne ŝanceliĝu; kaj vi, kiam vi konvertiĝos, firmigu viajn fratojn.
33 ೩೩ ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,
Kaj li diris al li: Sinjoro, vin mi estas preta akompani eĉ al malliberejo kaj al morto.
34 ೩೪ ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
Kaj li diris: Mi diras al vi, Petro, koko ne krios hodiaŭ, antaŭ ol vi trifoje malkonfesos, ke vi min konas.
35 ೩೫ ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
Kaj li diris al ili: Kiam mi vin elsendis sen monujo kaj sako kaj ŝuoj, ĉu io mankis al vi?
36 ೩೬ ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
Kaj ili diris: Nenio. Kaj li diris al ili: Sed nun kiu havas monujon, tiu prenu ĝin, kaj ankaŭ sakon; kaj kiu ne havas, tiu vendu sian mantelon kaj aĉetu glavon.
37 ೩೭ ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
Ĉar mi diras al vi, ke tio, kio estas skribita, devas plenumiĝi pri mi: Kaj li estis alkalkulita al krimuloj; ĉar tio, kio rilatas al mi, havas sian finon.
38 ೩೮ ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು.
Kaj ili diris: Sinjoro, jen estas du glavoj; kaj li diris al ili: Sufiĉas.
39 ೩೯ ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
Kaj elirinte, li iris laŭ sia kutimo al la monto Olivarba, kaj la disĉiploj lin sekvis.
40 ೪೦ ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
Kaj veninte al la loko, li diris al ili: Preĝu, ke vi ne eniru en tenton.
41 ೪೧ ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,
Kaj li iris for de ili proksimume ŝtonĵeton, kaj li genuis, kaj preĝis,
42 ೪೨ “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
dirante: Patro, se Vi volas, formetu de mi ĉi tiun kalikon; tamen plenumiĝu ne mia volo, sed Via.
43 ೪೩ ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
Kaj aperis antaŭ li anĝelo el la ĉielo, fortigante lin.
44 ೪೪ ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
Kaj estante en agonio, li preĝis pli fervore, kaj lia ŝvito fariĝis kiel gutoj da sango, defalantaj sur la teron.
45 ೪೫ ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
Kaj leviĝinte post la preĝo, li venis al la disĉiploj kaj trovis ilin dormantaj de malĝojo,
46 ೪೬ ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
kaj diris al ili: Kial vi dormas? leviĝu kaj preĝu, ke vi ne eniru en tenton.
47 ೪೭ ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
Dum li ankoraŭ parolis, jen homamaso; kaj tiu, kiu estis nomata Judas, unu el la dek du, iris antaŭ ili, kaj alproksimiĝis al Jesuo, por kisi lin.
48 ೪೮ ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.
Sed Jesuo diris al li: Judas, ĉu vi perfidas per kiso la Filon de homo?
49 ೪೯ ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
Kaj kiam tiuj, kiuj ĉirkaŭis lin, vidis, kio sekvos, ili diris: Sinjoro, ĉu ni frapu per glavo?
50 ೫೦ ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.
Kaj unu el ili frapis la sklavon de la ĉefpastro, kaj detranĉis lian dekstran orelon.
51 ೫೧ ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
Sed Jesuo responde diris: Permesu tiom. Kaj li tuŝis lian orelon kaj sanigis lin.
52 ೫೨ ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?
Kaj Jesuo diris al la ĉefpastroj kaj kapitanoj de la templo kaj pliaĝuloj, kiuj venis kontraŭ lin: Ĉu vi elvenis kun glavoj kaj bastonoj, kvazaŭ kontraŭ rabiston?
53 ೫೩ ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.
Kiam mi estis ĉiutage inter vi en la templo, vi ne etendis kontraŭ min viajn manojn; sed ĉi tiu estas via horo, kaj la potenco de mallumo.
54 ೫೪ ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
Kaj ili kaptis lin, kaj forkondukinte, venigis lin en la domon de la ĉefpastro. Sed Petro sekvis malproksime.
55 ೫೫ ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.
Kaj kiam oni ekbruligis fajron meze de la korto kaj sidis kune, Petro sidiĝis meze de ili.
56 ೫೬ ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
Kaj unu servantino, vidante lin sidantan en la fajrolumo, kaj fikse rigardinte lin, diris:
57 ೫೭ ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.
Ĉi tiu ankaŭ estis kun li. Sed li malkonfesis, dirante: Virino, mi lin ne konas.
58 ೫೮ ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.
Kaj post iom da tempo alia vidis lin, kaj diris: Vi ankaŭ estas el ili. Sed Petro diris: Viro, mi ne estas.
59 ೫೯ ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.
Kaj post la daŭro de unu horo proksimume, alia asertis persiste, dirante: Vere, ĉi tiu ankaŭ estis kun li, ĉar li estas Galileano.
60 ೬೦ ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.
Sed Petro diris: Viro, mi ne scias, kion vi diras. Kaj tuj, dum li ankoraŭ parolis, la koko kriis.
61 ೬೧ ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
Kaj la Sinjoro sin turnis, kaj alrigardis Petron. Kaj Petro ekmemoris la vorton de la Sinjoro, ke li diris al li: Antaŭ ol koko krios hodiaŭ, vi trifoje min malkonfesos.
62 ೬೨ ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು.
Kaj li eliris, kaj maldolĉe ploris.
63 ೬೩ ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
Kaj tiuj, kiuj gardis Jesuon, lin mokis kaj batis.
64 ೬೪
Kaj ili ĉirkaŭkovris lin, kaj demandis lin, dirante: Profetu, kiu vin frapis?
65 ೬೫ ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.
Kaj per multaj aliaj insultoj ili parolis kontraŭ li.
66 ೬೬ ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
Kaj tuj kiam tagiĝis la pliaĝularo de la popolo kunvenis, kaj ĉefpastroj kaj skribistoj, kaj ili forkondukis lin antaŭ sian sinedrion, kaj diris:
67 ೬೭ “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.
Se vi estas la Kristo, diru al ni. Sed li diris al ili: Se mi diros al vi, vi ne kredos;
68 ೬೮ ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.
kaj se mi demandos, vi ne respondos.
69 ೬೯ ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
Tamen, de nun la Filo de homo sidos dekstre de la Potenco de Dio.
70 ೭೦ ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
Kaj ili ĉiuj demandis: Ĉu vi do estas la Filo de Dio? Kaj li respondis: Vi diras, ke mi estas.
71 ೭೧ ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.
Kaj ili diris: Pro kio ni bezonas pluan atestadon? ĉar ni mem aŭdis el lia propra buŝo.

< ಲೂಕನು 22 >