< ಲೂಕನು 24 >

1 ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
Mapema sana siku ya kwanza ya juma, walikuja kaburini, wakileta manukato ambayo walikuwa wameyaandaa.
2 ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು,
Wakakuta jiwe limevingirishwa mbali na kaburi.
3 ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ.
Wakaingia ndani, lakini hawakuukuta mwili wa Bwana Yesu.
4 ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.
Ilitokea kwamba, wakati wamechanganyikiwa kuhusu hili, ghafla, watu wawili walisimama katikati yao wamevaa mavazi ya kung'aa.
5 ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
Wanawake wakiwa wamejaa hofu na wakiinamisha nyuso zao chini, wakawaambia wanawake, “Kwanini mnamtafuta aliye hai miongoni mwa wafu?
6 ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.
Hayupo hapa, ila amefufuka! Kumbukeni alivyosema nanyi alipokuwa angali Galilaya,
7
akisema kwamba Mwana wa Adamu lazima atolewe kwenye mikono ya watu wenye dhambi na asulubishwe, na siku ya tatu, afufuke tena.”
8 ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು,
Wale wanawake wakakumbuka maneno yake,
9 ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.
na wakarudi kutoka kaburini na wakawaambia mambo haya yote wale kumi na moja na wengine wote.
10 ೧೦ ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.
Basi Maria Magdalena, Joana, Maria mama wa Yakobo, na wanawake wengine pamoja nao wakatoa taarifa hizi kwa mitume.
11 ೧೧ ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.
Lakini ujumbe huu ukaonekana kama mzaha tu kwa mitume, na hawakuwaamini wale wanawake.
12 ೧೨ ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.
Hata hivyo Petro aliamka, na akakimbia kuelekea kaburini, na akichungulia na kuangalia ndani, aliona sanda peke yake. Petro kisha akaondoka akaenda nyumbani kwake, akistaajabu nini ambacho kimetokea.
13 ೧೩ ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,
Na tazama, wawili miongoni mwao walikuwa wakienda siku hiyo hiyo katika kijiji kimoja kiitwacho Emmau, ambacho kilikuwa maili sitini kutoka Yerusalemu.
14 ೧೪ ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು.
Wakajadiliana wao kwa wao kuhusu mambo yote yaliyotokea.
15 ೧೫ ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.
Ikatokea kwamba, wakati walipokuwa wakijadiliana na kuulizana maswali, Yesu akasogea karibu akaambatana nao.
16 ೧೬ ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ.
Lakini macho yao yalizuiliwa katika kumtambua yeye.
17 ೧೭ ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.
Yesu akawaambia, “Nini ambacho ninyi wawili mnakiongelea wakati mnatembea?” Wakasimama pale wakionekana na huzuni.
18 ೧೮ ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,
Mmoja wao, jina lake Cleopa, akamjibu, “Je wewe ni mtu pekee hapa Yerusalemu ambaye hajui mambo yaliyotokea huko siku hizi?”
19 ೧೯ ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
Yesu akawaambia, “Mambo gani?” Wakamjibu, “Mambo kuhusu Yesu Mnazareti, ambaye alikuwa nabii, muweza katika matendo na maneno mbele za Mungu na watu wote.
20 ೨೦ ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.
Na kwa jinsi ambayo wakuu wa makuhani na viongozi wetu walivyomtoa kuhukumiwa kifo na kumsulubisha.
21 ೨೧ ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.
Lakini tulitumaini kwamba yeye ndiye atakaye waweka huru Israeli. Ndiyo, mbali na haya yote, sasa ni siku ya tatu tangu mambo haya yatokee.
22 ೨೨ ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.
Lakini pia, baadhi ya wanawake kutoka katika kundi letu walitushangaza, baada ya kuwapo kaburini asubuhi na mapema.
23 ೨೩
Walipoukosa mwili wake, wakaja, wakisema kwamba waliona pia maono ya malaika waliosema kwamba yu hai.
24 ೨೪ ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು.
Baadhi ya wanaume ambao walikuwa pamoja nasi walienda kaburini, na kukuta ni kama vile wanawake walivyosema. Lakini hawakumuona yeye.”
25 ೨೫ ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,
Yesu akawaambia, “Ninyi watu wajinga na wenye mioyo mizito ya kuamini yote ambayo manabii wamesema!
26 ೨೬ ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.
Je haikuwa lazima Yesu kuteseka kwa mambo haya, na kuingia katika utukufu wake?”
27 ೨೭ ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
Kisha kuanzia kutoka kwa Musa na manabii wote, Yesu akawatafsiria mambo yanayomuhusu yeye katika maandiko yote.
28 ೨೮ ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.
Walipokaribia kile kijiji, huko walikokuwa wakienda, Yesu akafanya kana kwamba anaendelea mbele.
29 ೨೯ ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.
Lakini walimlazimisha, wakisema, “Kaa pamoja nasi, maana inaelekea jioni na siku ni kama imeisha.” Hivyo Yesu akaingia kwenda kukaa nao.
30 ೩೦ ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,
Ilitokea kwamba, wakati amekaa nao kula, alichukua mkate, akaubariki, na kuuvunja, akawapa.
31 ೩೧ ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು.
Kisha macho yao yakafunguliwa, wakamjua, na akatoweka ghafla mbele ya macho yao.
32 ೩೨ ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,
Wakasemezana wao kwa wao, “Hivi mioyo yetu haikuwaka ndani yetu, wakati alipoongea nasi njiani, wakati alipotufungulia maandiko?”
33 ೩೩ ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು.
Wakanyanyuka saa hiyo hiyo, na kurudi Yerusalemu. Wakawakuta wale kumi na mmoja wamekusanyika pamoja, na wale waliokuwa pamoja nao,
34 ೩೪ “ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.
wakisema, “Bwana amefufuka kwelikweli, na amemtokea Simoni.”
35 ೩೫ ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.
Hivyo wakawaambia mambo yaliyotokea njiani, na namna Yesu alivyodhihirishwa kwao katika kuumega mkate.
36 ೩೬ ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.
Wakati wakiongea mambo hayo, Yesu mwenyewe alisimama katikati yao, na akawaambia, “Amani iwe kwenu.”
37 ೩೭ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು.
Lakini waliogopa na kujawa na hofu, na wakafikiri kwamba waliona roho.
38 ೩೮ ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ?
Yesu akawaambia, Kwanini mnafadhaika? Kwanini maswali yanainuka mioyoni mwenu?
39 ೩೯ ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.
Angalieni mikono yangu na miguu yangu, kwamba ni mimi mwenyewe. Niguseni na muone. Kwa maana roho haina nyama na mifupa, kama mnionavyo mimi kuwa navyo.”
40 ೪೦ ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.
Alipokwisha kusema hivi, akawaonyesha mikono yake na miguu yake.
41 ೪೧ ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,
Walipokuwa bado na furaha iliyochanganyikana na kutokuamini, na kustaajabu, Yesu akawaambia, “Je mna kitu chochote cha kula?”
42 ೪೨ ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು.
Wakampa kipande cha samaki aliyechomwa.
43 ೪೩ ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು.
Yesu akakichukua, na kukila mbele yao.
44 ೪೪ ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.
Akawaambia, “Nilipokuwa nanyi, niliwaambia kwamba yote yalioandikwa kwenye sheria ya Musa na manabii na Zaburi lazima yatimilike.”
45 ೪೫ ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.
Kisha akafungua akili zao, kwamba waweze kuyaelewa maandiko.
46 ೪೬ ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,
Akawaambia, “Kwamba imeandikwa, Kristo lazima ateseke, na kufufuka tena kutoka katika wafu siku ya tatu.
47 ೪೭ ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
Na toba na msamaha wa dhambi lazima ihubiriwe kwa jina lake kwa mataifa yote, kuanzia kutokea Yerusalemu.
48 ೪೮ ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.
Ninyi ni mashahidi wa mambo haya.
49 ೪೯ ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನುನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.
Angalia, nawapelekea ahadi ya Baba yangu juu yenu. Lakini subirini hapa jijini, mpaka mtakapovishwa nguvu kutoka juu.
50 ೫೦ ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.
Kisha Yesu akawaongoza nje mpaka walipokaribia Bethania. Akainua mikono yake juu, na akawabariki.
51 ೫೧ ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.
Ikatokea kwamba, wakati alipokuwa akiwabariki, aliwaacha na akabebwa juu kuelekea mbinguni.
52 ೫೨ ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,
Basi wakamwabudu, na kurudi Yerusalemu na furaha kuu.
53 ೫೩ ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
Waliendelea kuwepo hekaluni, wakimbariki Mungu.

< ಲೂಕನು 24 >