< ನೆಹೆಮೀಯನು 9 >

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.
וּבְיֹום֩ עֶשְׂרִ֨ים וְאַרְבָּעָ֜ה לַחֹ֣דֶשׁ הַזֶּ֗ה נֶאֶסְפ֤וּ בְנֵֽי־יִשְׂרָאֵל֙ בְּצֹ֣ום וּבְשַׂקִּ֔ים וַאֲדָמָ֖ה עֲלֵיהֶֽם׃
2 ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.
וַיִּבָּֽדְלוּ֙ זֶ֣רַע יִשְׂרָאֵ֔ל מִכֹּ֖ל בְּנֵ֣י נֵכָ֑ר וַיַּעַמְד֗וּ וַיִּתְוַדּוּ֙ עַל־חַטֹּ֣אתֵיהֶ֔ם וַעֲוֹנֹ֖ות אֲבֹתֵיהֶֽם׃
3 ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.
וַיָּק֙וּמוּ֙ עַל־עָמְדָ֔ם וַֽיִּקְרְא֗וּ בְּסֵ֨פֶר תֹּורַ֧ת יְהוָ֛ה אֱלֹהֵיהֶ֖ם רְבִעִ֣ית הַיֹּ֑ום וּרְבִעִית֙ מִתְוַדִּ֣ים וּמִֽשְׁתַּחֲוִ֔ים לַיהוָ֖ה אֱלֹהֵיהֶֽם׃ פ
4 ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
וַיָּ֜קָם עַֽל־מַֽעֲלֵ֣ה הַלְוִיִּ֗ם יֵשׁ֨וּעַ וּבָנִ֜י קַדְמִיאֵ֧ל שְׁבַנְיָ֛ה בֻּנִּ֥י שֵׁרֵבְיָ֖ה בָּנִ֣י כְנָ֑נִי וַֽיִּזְעֲקוּ֙ בְּקֹ֣ול גָּדֹ֔ול אֶל־יְהוָ֖ה אֱלֹהֵיהֶֽם׃
5 ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.
וַיֹּאמְר֣וּ הַלְוִיִּ֡ם יֵשׁ֣וּעַ וְ֠קַדְמִיאֵל בָּנִ֨י חֲשַׁבְנְיָ֜ה שֵׁרֵֽבְיָ֤ה הֹֽודִיָּה֙ שְׁבַנְיָ֣ה פְתַֽחְיָ֔ה ק֗וּמוּ בָּרֲכוּ֙ אֶת־יְהוָ֣ה אֱלֹֽהֵיכֶ֔ם מִן־הָעֹולָ֖ם עַד־הָעֹולָ֑ם וִיבָֽרְכוּ֙ שֵׁ֣ם כְּבֹודֶ֔ךָ וּמְרֹומַ֥ם עַל־כָּל־בְּרָכָ֖ה וּתְהִלָּֽה׃
6 ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.
אַתָּה־ה֣וּא יְהוָה֮ לְבַדֶּךָ֒ אַתְּ (אַתָּ֣ה) עָשִׂ֡יתָ אֶֽת־הַשָּׁמַיִם֩ שְׁמֵ֨י הַשָּׁמַ֜יִם וְכָל־צְבָאָ֗ם הָאָ֜רֶץ וְכָל־אֲשֶׁ֤ר עָלֶ֙יהָ֙ הַיַּמִּים֙ וְכָל־אֲשֶׁ֣ר בָּהֶ֔ם וְאַתָּ֖ה מְחַיֶּ֣ה אֶת־כֻּלָּ֑ם וּצְבָ֥א הַשָּׁמַ֖יִם לְךָ֥ מִשְׁתַּחֲוִֽים׃
7 ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.
אַתָּה־הוּא֙ יְהוָ֣ה הָאֱלֹהִ֔ים אֲשֶׁ֤ר בָּחַ֙רְתָּ֙ בְּאַבְרָ֔ם וְהֹוצֵאתֹ֖ו מֵא֣וּר כַּשְׂדִּ֑ים וְשַׂ֥מְתָּ שְּׁמֹ֖ו אַבְרָהָֽם׃
8 ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.
וּמָצָ֣אתָ אֶת־לְבָבֹו֮ נֶאֱמָ֣ן לְפָנֶיךָ֒ וְכָרֹ֨ות עִמֹּ֜ו הַבְּרִ֗ית לָתֵ֡ת אֶת־אֶרֶץ֩ הַכְּנַעֲנִ֨י הַחִתִּ֜י הָאֱמֹרִ֧י וְהַפְּרִזִּ֛י וְהַיְבוּסִ֥י וְהַגִּרְגָּשִׁ֖י לָתֵ֣ת לְזַרְעֹ֑ו וַתָּ֙קֶם֙ אֶת־דְּבָרֶ֔יךָ כִּ֥י צַדִּ֖יק אָֽתָּה׃
9 ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.
וַתֵּ֛רֶא אֶת־עֳנִ֥י אֲבֹתֵ֖ינוּ בְּמִצְרָ֑יִם וְאֶת־זַעֲקָתָ֥ם שָׁמַ֖עְתָּ עַל־יַם־סֽוּף׃
10 ೧೦ ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.
וַ֠תִּתֵּן אֹתֹ֨ת וּמֹֽפְתִ֜ים בְּפַרְעֹ֤ה וּבְכָל־עֲבָדָיו֙ וּבְכָל־עַ֣ם אַרְצֹ֔ו כִּ֣י יָדַ֔עְתָּ כִּ֥י הֵזִ֖ידוּ עֲלֵיהֶ֑ם וַתַּֽעַשׂ־לְךָ֥ שֵׁ֖ם כְּהַיֹּ֥ום הַזֶּֽה׃
11 ೧೧ ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.
וְהַיָּם֙ בָּקַ֣עְתָּ לִפְנֵיהֶ֔ם וַיַּֽעַבְר֥וּ בְתֹוךְ־הַיָּ֖ם בַּיַּבָּשָׁ֑ה וְֽאֶת־רֹ֨דְפֵיהֶ֜ם הִשְׁלַ֧כְתָּ בִמְצֹולֹ֛ת כְּמֹו־אֶ֖בֶן בְּמַ֥יִם עַזִּֽים׃
12 ೧೨ ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.
וּבְעַמּ֣וּד עָנָ֔ן הִנְחִיתָ֖ם יֹומָ֑ם וּבְעַמּ֥וּד אֵשׁ֙ לַ֔יְלָה לְהָאִ֣יר לָהֶ֔ם אֶת־הַדֶּ֖רֶךְ אֲשֶׁ֥ר יֵֽלְכוּ־בָֽהּ׃
13 ೧೩ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.
וְעַ֤ל הַר־סִינַי֙ יָרַ֔דְתָּ וְדַבֵּ֥ר עִמָּהֶ֖ם מִשָּׁמָ֑יִם וַתִּתֵּ֨ן לָהֶ֜ם מִשְׁפָּטִ֤ים יְשָׁרִים֙ וְתֹורֹ֣ות אֱמֶ֔ת חֻקִּ֥ים וּמִצְוֹ֖ת טֹובִֽים׃
14 ೧೪ ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.
וְאֶת־שַׁבַּ֥ת קָדְשְׁךָ֖ הֹודַ֣עַתָ לָהֶ֑ם וּמִצְוֹ֤ות וְחֻקִּים֙ וְתֹורָ֔ה צִוִּ֣יתָ לָהֶ֔ם בְּיַ֖ד מֹשֶׁ֥ה עַבְדֶּֽךָ׃
15 ೧೫ ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.
וְ֠לֶחֶם מִשָּׁמַ֜יִם נָתַ֤תָּה לָהֶם֙ לִרְעָבָ֔ם וּמַ֗יִם מִסֶּ֛לַע הֹוצֵ֥אתָ לָהֶ֖ם לִצְמָאָ֑ם וַתֹּ֣אמֶר לָהֶ֗ם לָבֹוא֙ לָרֶ֣שֶׁת אֶת־הָאָ֔רֶץ אֲשֶׁר־נָשָׂ֥אתָ אֶת־יָדְךָ֖ לָתֵ֥ת לָהֶֽם׃
16 ೧೬ ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.
וְהֵ֥ם וַאֲבֹתֵ֖ינוּ הֵזִ֑ידוּ וַיַּקְשׁוּ֙ אֶת־עָרְפָּ֔ם וְלֹ֥א שָׁמְע֖וּ אֶל־מִצְוֹתֶֽיךָ׃
17 ೧೭ ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.
וַיְמָאֲנ֣וּ לִשְׁמֹ֗עַ וְלֹא־זָכְר֤וּ נִפְלְאֹתֶ֙יךָ֙ אֲשֶׁ֣ר עָשִׂ֣יתָ עִמָּהֶ֔ם וַיַּקְשׁוּ֙ אֶת־עָרְפָּ֔ם וַיִּתְּנוּ־רֹ֛אשׁ לָשׁ֥וּב לְעַבְדֻתָ֖ם בְּמִרְיָ֑ם וְאַתָּה֩ אֱלֹ֨והַּ סְלִיחֹ֜ות חַנּ֧וּן וְרַח֛וּם אֶֽרֶךְ־אַפַּ֥יִם וְרַב־וְחֶסֶד (חֶ֖סֶד) וְלֹ֥א עֲזַבְתָּֽם׃
18 ೧೮ ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,
אַ֗ף כִּֽי־עָשׂ֤וּ לָהֶם֙ עֵ֣גֶל מַסֵּכָ֔ה וַיֹּ֣אמְר֔וּ זֶ֣ה אֱלֹהֶ֔יךָ אֲשֶׁ֥ר הֶעֶלְךָ֖ מִמִּצְרָ֑יִם וֽ͏ַיַּעֲשׂ֔וּ נֶאָצֹ֖ות גְּדֹלֹֽות׃
19 ೧೯ ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.
וְאַתָּה֙ בְּרַחֲמֶ֣יךָ הָֽרַבִּ֔ים לֹ֥א עֲזַבְתָּ֖ם בַּמִּדְבָּ֑ר אֶת־עַמּ֣וּד הֶ֠עָנָן לֹא־סָ֨ר מֵעֲלֵיהֶ֤ם בְּיֹומָם֙ לְהַנְחֹתָ֣ם בְּהַדֶּ֔רֶךְ וְאֶת־עַמּ֨וּד הָאֵ֤שׁ בְּלַ֙יְלָה֙ לְהָאִ֣יר לָהֶ֔ם וְאֶת־הַדֶּ֖רֶךְ אֲשֶׁ֥ר יֵֽלְכוּ־בָֽהּ׃
20 ೨೦ ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.
וְרוּחֲךָ֨ הַטֹּובָ֔ה נָתַ֖תָּ לְהַשְׂכִּילָ֑ם וּמַנְךָ֙ לֹא־מָנַ֣עְתָּ מִפִּיהֶ֔ם וּמַ֛יִם נָתַ֥תָּה לָהֶ֖ם לִצְמָאָֽם׃
21 ೨೧ ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.
וְאַרְבָּעִ֥ים שָׁנָ֛ה כִּלְכַּלְתָּ֥ם בַּמִּדְבָּ֖ר לֹ֣א חָסֵ֑רוּ שַׂלְמֹֽתֵיהֶם֙ לֹ֣א בָל֔וּ וְרַגְלֵיהֶ֖ם לֹ֥א בָצֵֽקוּ׃
22 ೨೨ ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.
וַתִּתֵּ֨ן לָהֶ֤ם מַמְלָכֹות֙ וַעֲמָמִ֔ים וַֽתַּחְלְקֵ֖ם לְפֵאָ֑ה וַיִּֽירְשׁ֞וּ אֶת־אֶ֣רֶץ סִיחֹ֗ון וְאֶת־אֶ֙רֶץ֙ מֶ֣לֶךְ חֶשְׁבֹּ֔ון וְאֶת־אֶ֖רֶץ עֹ֥וג מֶֽלֶךְ־הַבָּשָֽׁן׃
23 ೨೩ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.
וּבְנֵיהֶ֣ם הִרְבִּ֔יתָ כְּכֹכְבֵ֖י הַשָּׁמָ֑יִם וַתְּבִיאֵם֙ אֶל־הָאָ֔רֶץ אֲשֶׁר־אָמַ֥רְתָּ לַאֲבֹתֵיהֶ֖ם לָבֹ֥וא לָרָֽשֶׁת׃
24 ೨೪ ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.
וַיָּבֹ֤אוּ הַבָּנִים֙ וַיִּֽירְשׁ֣וּ אֶת־הָאָ֔רֶץ וַתַּכְנַ֨ע לִפְנֵיהֶ֜ם אֶת־יֹשְׁבֵ֤י הָאָ֙רֶץ֙ הַכְּנַ֣עֲנִ֔ים וַֽתִּתְּנֵ֖ם בְּיָדָ֑ם וְאֶת־מַלְכֵיהֶם֙ וְאֶת־עַֽמְמֵ֣י הָאָ֔רֶץ לַעֲשֹׂ֥ות בָּהֶ֖ם כִּרְצֹונָֽם׃
25 ೨೫ ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.
וַֽיִּלְכְּד֞וּ עָרִ֣ים בְּצֻרֹות֮ וַאֲדָמָ֣ה שְׁמֵנָה֒ וַיִּֽירְשׁ֡וּ בָּתִּ֣ים מְלֵֽאִים־כָּל־ט֠וּב בֹּרֹ֨ות חֲצוּבִ֜ים כְּרָמִ֧ים וְזֵיתִ֛ים וְעֵ֥ץ מַאֲכָ֖ל לָרֹ֑ב וַיֹּאכְל֤וּ וַֽיִּשְׂבְּעוּ֙ וַיַּשְׁמִ֔ינוּ וַיִּֽתְעַדְּנ֖וּ בְּטוּבְךָ֥ הַגָּדֹֽול׃
26 ೨೬ ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
וַיַּמְר֨וּ וַֽיִּמְרְד֜וּ בָּ֗ךְ וַיַּשְׁלִ֤כוּ אֶת־תֹּורָֽתְךָ֙ אַחֲרֵ֣י גַוָּ֔ם וְאֶת־נְבִיאֶ֣יךָ הָרָ֔גוּ אֲשֶׁר־הֵעִ֥ידוּ בָ֖ם לַהֲשִׁיבָ֣ם אֵלֶ֑יךָ וֽ͏ַיַּעֲשׂ֔וּ נֶאָצֹ֖ות גְּדֹולֹֽת׃
27 ೨೭ ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.
וַֽתִּתְּנֵם֙ בְּיַ֣ד צָֽרֵיהֶ֔ם וַיָּצֵ֖רוּ לָהֶ֑ם וּבְעֵ֤ת צָֽרָתָם֙ יִצְעֲק֣וּ אֵלֶ֔יךָ וְאַתָּה֙ מִשָּׁמַ֣יִם תִּשְׁמָ֔ע וּֽכְרַחֲמֶ֣יךָ הָֽרַבִּ֗ים תִּתֵּ֤ן לָהֶם֙ מֹֽושִׁיעִ֔ים וְיֹושִׁיע֖וּם מִיַּ֥ד צָרֵיהֶֽם׃
28 ೨೮ ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.
וּכְנֹ֣וחַ לָהֶ֔ם יָשׁ֕וּבוּ לַעֲשֹׂ֥ות רַ֖ע לְפָנֶ֑יךָ וַתַּֽעַזְבֵ֞ם בְּיַ֤ד אֹֽיְבֵיהֶם֙ וַיִּרְדּ֣וּ בָהֶ֔ם וַיָּשׁ֙וּבוּ֙ וַיִּזְעָק֔וּךָ וְאַתָּ֞ה מִשָּׁמַ֧יִם תִּשְׁמַ֛ע וְתַצִּילֵ֥ם כְּֽרַחֲמֶ֖יךָ רַבֹּ֥ות עִתִּֽים׃
29 ೨೯ ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.
וַתָּ֨עַד בָּהֶ֜ם לַהֲשִׁיבָ֣ם אֶל־תֹּורָתֶ֗ךָ וְהֵ֨מָּה הֵזִ֜ידוּ וְלֹא־שָׁמְע֤וּ לְמִצְוֹתֶ֙יךָ֙ וּבְמִשְׁפָּטֶ֣יךָ חָֽטְאוּ־בָ֔ם אֲשֶׁר־יַעֲשֶׂ֥ה אָדָ֖ם וְחָיָ֣ה בָהֶ֑ם וַיִּתְּנ֤וּ כָתֵף֙ סֹורֶ֔רֶת וְעָרְפָּ֥ם הִקְשׁ֖וּ וְלֹ֥א שָׁמֵֽעוּ׃
30 ೩೦ ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
וַתִּמְשֹׁ֤ךְ עֲלֵיהֶם֙ שָׁנִ֣ים רַבֹּ֔ות וַתָּ֨עַד בָּ֧ם בְּרוּחֲךָ֛ בְּיַד־נְבִיאֶ֖יךָ וְלֹ֣א הֶאֱזִ֑ינוּ וַֽתִּתְּנֵ֔ם בְּיַ֖ד עַמֵּ֥י הָאֲרָצֹֽת׃
31 ೩೧ ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
וּֽבְרַחֲמֶ֧יךָ הָרַבִּ֛ים לֹֽא־עֲשִׂיתָ֥ם כָּלָ֖ה וְלֹ֣א עֲזַבְתָּ֑ם כִּ֛י אֵֽל־חַנּ֥וּן וְרַח֖וּם אָֽתָּה׃
32 ೩೨ ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.
וְעַתָּ֣ה אֱ֠לֹהֵינוּ הָאֵ֨ל הַגָּדֹ֜ול הַגִּבֹּ֣ור וְהַנֹּורָא֮ שֹׁומֵ֣ר הַבְּרִ֣ית וְהַחֶסֶד֒ אַל־יִמְעַ֣ט לְפָנֶ֡יךָ אֵ֣ת כָּל־הַתְּלָאָ֣ה אֽ͏ֲשֶׁר־מְ֠צָאַתְנוּ לִמְלָכֵ֨ינוּ לְשָׂרֵ֧ינוּ וּלְכֹהֲנֵ֛ינוּ וְלִנְבִיאֵ֥נוּ וְלַאֲבֹתֵ֖ינוּ וּלְכָל־עַמֶּ֑ךָ מִימֵי֙ מַלְכֵ֣י אַשּׁ֔וּר עַ֖ד הַיֹּ֥ום הַזֶּֽה׃
33 ೩೩ ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.
וְאַתָּ֣ה צַדִּ֔יק עַ֖ל כָּל־הַבָּ֣א עָלֵ֑ינוּ כִּֽי־אֱמֶ֥ת עָשִׂ֖יתָ וַאֲנַ֥חְנוּ הִרְשָֽׁעְנוּ׃
34 ೩೪ ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.
וְאֶת־מְלָכֵ֤ינוּ שָׂרֵ֙ינוּ֙ כֹּהֲנֵ֣ינוּ וַאֲבֹתֵ֔ינוּ לֹ֥א עָשׂ֖וּ תֹּורָתֶ֑ךָ וְלֹ֤א הִקְשִׁ֙יבוּ֙ אֶל־מִצְוֹתֶ֔יךָ וּלְעֵ֣דְוֹתֶ֔יךָ אֲשֶׁ֥ר הַעִידֹ֖תָ בָּהֶֽם׃
35 ೩೫ ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.
וְהֵ֣ם בְּמַלְכוּתָם֩ וּבְטוּבְךָ֨ הָרָ֜ב אֲשֶׁר־נָתַ֣תָּ לָהֶ֗ם וּבְאֶ֨רֶץ הָרְחָבָ֧ה וְהַשְּׁמֵנָ֛ה אֲשֶׁר־נָתַ֥תָּ לִפְנֵיהֶ֖ם לֹ֣א עֲבָד֑וּךָ וְֽלֹא־שָׁ֔בוּ מִמַּֽעַלְלֵיהֶ֖ם הָרָעִֽים׃
36 ೩೬ ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.
הִנֵּ֛ה אֲנַ֥חְנוּ הַיֹּ֖ום עֲבָדִ֑ים וְהָאָ֜רֶץ אֲשֶׁר־נָתַ֣תָּה לַאֲבֹתֵ֗ינוּ לֶאֱכֹ֤ל אֶת־פִּרְיָהּ֙ וְאֶת־טוּבָ֔הּ הִנֵּ֛ה אֲנַ֥חְנוּ עֲבָדִ֖ים עָלֶֽיהָ׃
37 ೩೭ ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.
וּתְבוּאָתָ֣הּ מַרְבָּ֗ה לַמְּלָכִ֛ים אֲשֶׁר־נָתַ֥תָּה עָלֵ֖ינוּ בְּחַטֹּאותֵ֑ינוּ וְעַ֣ל גְּ֠וִיֹּתֵינוּ מֹשְׁלִ֤ים וּבִבְהֶמְתֵּ֙נוּ֙ כִּרְצֹונָ֔ם וּבְצָרָ֥ה גְדֹולָ֖ה אֲנָֽחְנוּ׃ פ
38 ೩೮ ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.
וּבְכָל־זֹ֕את אֲנַ֛חְנוּ כֹּרְתִ֥ים אֲמָנָ֖ה וְכֹתְבִ֑ים וְעַל֙ הֶֽחָת֔וּם שָׂרֵ֥ינוּ לְוִיֵּ֖נוּ כֹּהֲנֵֽינוּ׃

< ನೆಹೆಮೀಯನು 9 >