< ಅರಣ್ಯಕಾಂಡ 22 >

1 ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
ইস্রায়েল সন্তানরা যাত্রা করে যিরীহোর কাছে অবস্থিত যর্দ্দনের পরপারে মোয়াবের তলভূমিতে শিবির স্থাপন করল।
2 ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
ইস্রায়েল ইমোরীয়দের প্রতি যা যা করেছিল, সে সমস্ত সিপ্পোরের ছেলে বালাক দেখেছিলেন।
3 ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.
মোয়াব তাদেরকে খুব ভয় পেল কারণ ইস্রায়েল সন্তানদের জন্য মোয়াব আতঙ্কিত ছিল।
4 ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.
মোয়াবের রাজা মিদিয়নের প্রাচীনদেরকে বলল, “গরু যেমন মাঠের কচি ঘাস চেঁটে খায়, তেমনি এই লোকজন আমাদের চারদিকের সব কিছুই চেঁটে খাবে।” সেই দিন সিপ্পোরের ছেলে বালাক মোয়াবের রাজা ছিলেন।
5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
তিনি বিয়োরের ছেলে বিলিয়মকে ডেকে আনতে তার জাতির লোকেদের দেশে [ফরাৎ] নদীর তীরে অবস্থিত পথোর শহরে দূত পাঠিয়ে তাকে বললেন, “দেখুন, মিশর থেকে একটি জাতি বের হয়ে এসেছে, দেখুন, তারা পৃথিবী ঢেকে আমার সামনে অবস্থান করছে।
6 ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.
এখন নিবেদন করি, আপনি এসে আমার জন্য সেই লোকেদেরকে অভিশাপ দিন; কারণ আমার থেকে তারা বলবান। হয় তো আমি তাদেরকে আঘাত করে দেশ থেকে তাড়িয়ে দিতে পারব। আমি জানি যে, আপনি যাকে আশীর্বাদ করেন, সে আশীর্বাদ পায় ও যাকে অভিশাপ দেন, সে অভিশপ্ত হয়।”
7 ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
সুতরাং মোয়াবের প্রাচীনেরা ও মিদিয়নের প্রাচীনেরা মন্ত্রণার পুরষ্কার হাতে নিয়ে চলে গেল এবং বিলিয়মের কাছে উপস্থিত হয়ে বালাকের কথা তাকে বলল।
8 ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
সে তাদেরকে বলল, “তোমরা এখানে রাত কাটাও; পরে সদাপ্রভু আমাকে যা বলবেন, সেই অনুযায়ী কথা আমি তোমাদেরকে বলব।” তাতে মোয়াবের শাসনকর্তারা বিলিয়মের সঙ্গে রাত কাটাল।
9 ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,
ঈশ্বর বিলিয়মের কাছে উপস্থিত হয়ে বললেন, “তোমার সঙ্গে এই লোকেরা কে?”
10 ೧೦ ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
১০তাতে বিলিয়ম ঈশ্বরকে বলল, “মোয়াবের রাজা সিপ্পোরের ছেলে বালাক আমার কাছে বলে পাঠিয়েছেন;
11 ೧೧ ‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
১১দেখ, মিশর থেকে বাইরের ঐ জাতি পৃথিবী ঢেকে আছে। এখন তুমি এসে আমার জন্য তাদের অভিশাপ দাও, হয় তো আমি তাদের সঙ্গে যুদ্ধ করে তাদেরকে তাড়িয়ে দিতে পারব।”
12 ೧೨ ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.
১২তাতে ঈশ্বর বিলিয়মকে বললেন, “তুমি তাদের সঙ্গে যেও না, সেই জাতিকে অভিশাপ দিও না, কারণ তারা আশীর্বাদযুক্ত।”
13 ೧೩ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.
১৩বিলিয়ম সকালে উঠে বালাকের শাসনকর্তাদেরকে বলল, “তোমরা নিজেদের দেশে চলে যাও, কারণ তোমাদের সঙ্গে আমার যাওয়ায় অনুমতি দিতে সদাপ্রভু অস্বীকার করলেন।”
14 ೧೪ ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.
১৪তাতে মোয়াবের শাসনকর্তারা উঠে বালাকের কাছে গিয়ে বলল, “আমাদের সঙ্গে আসতে বিলিয়ম অস্বীকার করলেন।”
15 ೧೫ ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.
১৫বালাক আবার তাদের থেকে বেশি সংখ্যক ও সম্মানীয় অন্য শাসনকর্তাদেরকে পাঠালেন।
16 ೧೬ ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.
১৬তারা বিলিয়মের কাছে এসে তাকে বলল, “সিপ্পোরের ছেলে বালাক এই কথা বলেন, ‘অনুরোধ করি, আমার কাছে আসা আপনি কিছুতেই বন্ধ করবেন না।
17 ೧೭ ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
১৭কারণ আমি আপনাকে খুব সম্মানিত করব; আপনি আমাকে যা যা বলবেন, আমি সব কিছুই করব। অতএব বিনয় করি, আপনি এসে আমার জন্য সেই লোকেদেরকে অভিশাপ দিন।’”
18 ೧೮ ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
১৮তখন বিলিয়ম বালাকের দাসেদেরকে উত্তর দিল, “যদি বালাক রূপা ও সোনার ভর্তি নিজের বাড়িও আমাকে দেন, তবুও আমি কম কি বেশি কোনকিছুর করার জন্য আমার ঈশ্বর সদাপ্রভুর আদেশ অমান্য করতে পারব না।
19 ೧೯ ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
১৯এখন অনুরোধ করি, তোমরাও এখানে রাত কাটাও, সদাপ্রভু আমাকে আবার যা বলবেন, তা আমি জানাব।”
20 ೨೦ ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.
২০ঈশ্বর রাতের বেলা বিলিয়মের কাছে এসে তাকে বললেন, “ঐ লোকেরা যদি তোমাকে ডাকতে এসে থাকে, তুমি ওঠ, তাদের সঙ্গে যাও; কিন্তু আমি তোমাকে যা বলব, তুমি শুধু তাই করবে।”
21 ೨೧ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
২১বিলিয়ম সকালে উঠে তার গাধী সাজিয়ে মোয়াবের শাসনকর্ত্তাদের সঙ্গে গেল।
22 ೨೨ ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
২২তার যাওয়ায় ঈশ্বরের রাগ জ্বলে উঠল এবং সদাপ্রভুর দূত তার বিপক্ষে পথের মধ্যে দাঁড়ালেন। সে তার গাধীতে চড়ে যাচ্ছিল এবং তার দুই দাস তার সঙ্গে ছিল।
23 ೨೩ ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.
২৩সেই গাধী দেখলে যে, সদাপ্রভুর দূত খোলা তরোয়াল হাতে নিয়ে পথের মধ্যে দাঁড়িয়ে আছেন। তাই গাধী পথ ছেড়ে ক্ষেতের দিকে চলে গেল। তাতে বিলিয়ম গাধীকে পথে আনার জন্য আঘাত করল।
24 ೨೪ ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.
২৪তখন সদাপ্রভুর দূত দুই আঙ্গুর ক্ষেতের গলির পথে দাঁড়ালেন, এ পাশে দেয়াল ওপাশে দেয়াল ছিল।
25 ೨೫ ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.
২৫তখন গাধী সদাপ্রভুর দূতকে দেখে দেয়ালের গা ঘেঁষে গেল, আর দেয়ালে বিলিয়মের পায়ে ঘষে গেল; তাতে সে আবার তাকে আঘাত করল।
26 ೨೬ ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.
২৬পরে সদাপ্রভুর দূত আরও কিছুটা এগিয়ে গেল, ডানে কি বামে ফেরার পথ নেই, এমন একটি সরু জায়গায় দাঁড়ালেন।
27 ೨೭ ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.
২৭তখন গাধী সদাপ্রভুর দূতকে দেখে বিলিয়মের নীচে ভূমিতে বসে পড়ল; তাতে বিলিয়ম রাগে জ্বলে উঠলো, সে গাধীকে লাঠি দিয়ে আঘাত করল।
28 ೨೮ ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.
২৮তখন সদাপ্রভু গাধীর মুখ খুলে দিলেন এবং সে বিলিয়মকে বলল, “আমি তোমার কি করলাম যে তুমি এই তিনবার আমাকে আঘাত করলে?”
29 ೨೯ ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.
২৯বিলিয়ম গাধীকে বলল, “তুমি আমাকে বিদ্রূপ করেছ; আমার হাতে যদি তরোয়াল থাকত, তবে আমি এখনই তোমাকে হত্যা করতাম।”
30 ೩೦ ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.
৩০পরে গাধী বিলিয়মকে বলল, “তুমি জন্ম থেকে আজ পর্যন্ত যার উপরে চড়ে থাক, আমি কি তোমার সেই গাধী নই? আমি কি তোমার প্রতি এমন ব্যবহার করে থাকি?” সে বলল, “না।”
31 ೩೧ ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.
৩১তখন সদাপ্রভু বিলিয়মের চোখ খুলে দিলেন, তাতে সে দেখল, সদাপ্রভুর দূত খোলা তরোয়াল হাতে পথের মধ্যে দাঁড়িয়ে আছেন; তখন সে মাথা নিচু করে উপুড় হয়ে পড়ল।
32 ೩೨ ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
৩২তখন সদাপ্রভুর দূত তাকে বললেন, “তুমি এই তিন বার তোমার গাধীকে কেন আঘাত করলে? দেখ, আমি তোমার বিপক্ষে বের হয়েছি, কারণ আমার সাক্ষাৎে তুমি বিপথে যাচ্ছ।
33 ೩೩ ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
৩৩গাধী আমাকে দেখে এই তিনবার আমার সামনে থেকে চলে গেল। সে যদি আমার সামনে থেকে চলে না যেত, তবে আমি নিশ্চয়ই তোমাকে হত্যা করতাম, আর ওটাকে জীবিত রাখতাম।”
34 ೩೪ ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.
৩৪তাতে বিলিয়ম সদাপ্রভুর দূতকে বলল, “আমি পাপ করেছি; কারণ আপনি যে আমার বিপরীতে পথে দাঁড়িয়ে আছেন, তা আমি জানি না; কিন্তু এখন যদি এটাতে আপনি বিরক্ত হন, তবে আমি ফিরে যাই।”
35 ೩೫ ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
৩৫তাতে সদাপ্রভুর দূত বিলিয়মকে বললেন, “ঐ লোকদের সঙ্গে যাও, কিন্তু আমি যে কথা তোমাকে বলব, তুমি শুধু সেই কথাই বলবে।” পরে বিলিয়ম বালাকের শাসনকর্ত্তাদের সঙ্গে চলে গেল।
36 ೩೬ ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
৩৬বিলিয়ম এসেছে শুনে বালাক তার সঙ্গে দেখা করতে মোয়াবের শহরে গেলেন। সেটা দেশের সীমানার শেষে অবস্থিত অর্ণোনের সীমানায় অবস্থিত।
37 ೩೭ ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.
৩৭বালাক বিলিয়মকে বললেন, “আমি আপনাকে ডেকে আনতে কি অনেক যত্ন করে লোক পাঠাইনি? আপনি আমার কাছে কেন আসেন নি? আপনাকে সম্মানিত করতে আমি কি সত্যিই ব্যর্থ?”
38 ೩೮ ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.
৩৮তখন বিলিয়ম বালাককে বলল, “দেখুন, আমি আপনার কাছে এলাম, কিন্তু এখনও কোন কথা বলতে কি আমার ক্ষমতা আছে? ঈশ্বর আমার মুখে যে কথা দেন, আমি সেটাই বলতে পারি।”
39 ೩೯ ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
৩৯বিলিয়ম বালাকের সঙ্গে গেল এবং তাঁরা কিরিয়ৎ হুষোতে উপস্থিত হলেন।
40 ೪೦ ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
৪০তখন বালাক কতকগুলি গরু ও ভেড়া বলিদান করে বিলিয়মের ও তার সঙ্গী শাসনকর্ত্তাদের কাছে পাঠিয়ে দিলেন।
41 ೪೧ ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.
৪১সকাল বেলায়, বালাক বিলিয়মকে বামোৎ বাল দেবতার উঁচুস্থানে নিয়ে গেল৷ সেই জায়গা থেকে বিলিয়ম ইস্রায়েলীয়দের শিবিরের একটি অংশ দেখতে পেলেন৷

< ಅರಣ್ಯಕಾಂಡ 22 >