< ಅರಣ್ಯಕಾಂಡ 32 >

1 ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
А синови Рувимови и синови Гадови имаху врло много стоке, и видеше земљу јазирску и земљу галадску да је добра за стоку.
2 ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,
И дошавши синови Гадови и синови Рувимови рекоше Мојсију и Елеазару свештенику и кнезовима од збора говорећи:
3 “ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
Атарот и Девон и Јазир и Намра и Есевон и Елеалија и Севама и Навав и Веан,
4 ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.
Та је земља, коју Господ покори збору израиљском, добра за стоку, а слуге твоје имају стоке.
5 ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.
Ако смо, рекоше, нашли милост пред тобом, нека се та земља даде слугама твојим у наследство, немој нас водити преко Јордана.
6 ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?
А Мојсије рече синовима Гадовим и синовима Рувимовим: Браћа ће ваша ићи на војску, а ви хоћете овде да останете?
7 ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?
Зашто обарате срце синовима Израиљевим да не пређу у земљу коју им је дао Господ?
8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
Тако су учинили оци ваши, кад их послах из Кадис-Варније да уходе земљу;
9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.
И отидоше до потока Есхола, и уходише земљу; и оборише срце синовима Израиљевим да не иду у земљу коју им даде Господ;
10 ೧೦ ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,
И разгневи се онда Господ, и закле се говорећи:
11 ೧೧ ‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
Неће ти људи који изађоше из Мисира, од двадесет година и више, видети земље за коју се заклех Авраму, Исаку и Јакову, јер се не држаше мене сасвим,
12 ೧೨ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು.
Осим Халева, сина Јефонијиног Кенезеја и Исуса сина Навиног, јер се сасвим држаше Господа.
13 ೧೩ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
И разгневи се Господ на Израиља, и учини те се потуцаше по пустињи четрдесет година, докле не помре сав онај нараштај који чињаше зло пред Господом.
14 ೧೪ “ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
А ви сада изађосте на место отаца својих, род грешних људи, да умножавате жестину гнева Господњег на Израиља.
15 ೧೫ ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.
Ако се одвратите од њега, Он ће га још оставити у пустињи, и тако ћете упропастити сав онај народ.
16 ೧೬ ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
А они приступише опет к њему, и рекоше му: Ми смо ради само торове начинити овде за стада своја и градове за децу своју.
17 ೧೭ ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
А сами ћемо наоружани јуначки поћи пред синовима Израиљевим, докле их не одведемо на њихово место; а наша деца нека стоје у градовима тврдим ради становника те земље.
18 ೧೮ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
Нећемо се вратити кућама својим докле синови Израиљеви не приме сваки своје наследство.
19 ೧೯ ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.
Нити ћемо узети наследство с њима с оне стране Јордана ни даље, ако нам допадне наследство с ове стране Јордана према истоку.
20 ೨೦ ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,
Тада им рече Мојсије; ако ћете учинити тако и ићи под оружјем пред Господом на војску,
21 ೨೧ ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ
Ако сваки од вас под оружјем пређе преко Јордана пред Господом, докле не отера испред себе непријатеља својих,
22 ೨೨ ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.
И докле се не покори земља пред Господом, па се онда вратите и не згрешите Господу ни Израиљу, онда ће ова земља припасти вама у наследство пред Господом.
23 ೨೩ “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
Ако ли не учините тако, гле, згрешићете Господу, и знајте да ће вас грех ваш стићи.
24 ೨೪ ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.
Градите себи градове за децу своју и торове за стоку своју; и шта је изашло из уста ваших, учините.
25 ೨೫ ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.
И рекоше Мојсију синови Гадови и синови Рувимови говорећи: Слуге ће твоје учинити како господар наш заповеда.
26 ೨೬ ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.
Деца наша и жене наше, стада наша и сва стока наша овде ће остати у градовима галадским;
27 ೨೭ ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.
А слуге ће твоје прећи сваки наоружан, да се бије пред Господом, као што говори господар наш.
28 ೨೮ ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.
Тада Мојсије заповеди за њих Елеазару свештенику и Исусу сину Навином и главарима од домова отачких међу синовима Израиљевим,
29 ೨೯ ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.
И рече им: Ако пређу синови Гадови и синови Рувимови с вама преко Јордана, сви оружани, да се бију пред Господом, и кад вам буде земља покорена, онда подајте њима земљу галадску у наследство.
30 ೩೦ ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು.
Ако ли не пређу с вама под оружјем, онда нека им буде наследство међу вама у земљи хананској.
31 ೩೧ ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.
И одговорише синови Гадови и синови Рувимови говорећи: Како је Господ казао слугама твојим тако ћемо учинити.
32 ೩೨ ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.
Прећи ћемо под оружјем пред Господом у земљу хананску, а наше наследство да буде с ове стране Јордана.
33 ೩೩ ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
И даде Мојсије синовима Гадовим и синовима Рувимовим и половини племена Манасије сина Јосифовог царство Сиона, цара аморејског и царство Ога, цара васанског, земљу и градове по међама њеним, градове оне земље унаоколо.
34 ೩೪ ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
И саградише синови Гадови Девон и Атарот и Ароир.
35 ೩೫ ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,
И Атрот-Софан и Јазир и Јогвеју,
36 ೩೬ ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.
И Вет-Нимру и Вет-Аран, градове тврде, и торове за стоку.
37 ೩೭ ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
А синови Рувимови саградише Есевон и Елеалију и Киријатајим,
38 ೩೮ ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
И Навон и Валмеон преденувши им имена, и Сивму; и надеше друга имена градовима које саградише.
39 ೩೯ ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
А синови Махира, сина Манасијиног отидоше у Галад, и узеше га, и изагнаше Амореје који беху онде.
40 ೪೦ ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
И Мојсије даде Галад Махиру сину Манасијином, који се онде насели.
41 ೪೧ ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
И Јаир, син Манасијин отиде и узе села њихова и прозва их села Јаирова.
42 ೪೨ ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
И Навав отиде и узе Кенат са селима његовим, и прозва га Навав по имену свом.

< ಅರಣ್ಯಕಾಂಡ 32 >