< ಕೀರ್ತನೆಗಳು 104 >

1 ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
Благосиљај, душо моја, Господа! Господе, Боже мој, велик си веома, обукао си се у величанство и красоту.
2 ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.
Обукао си светлост као хаљину, разапео небо као шатор;
3 ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
Водом си покрио дворове своје, облаке начинио си да су Ти кола, идеш на крилима ветреним.
4 ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
Чиниш ветрове да су Ти анђели, пламен огњени да су Ти слуге.
5 ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.
Утврдио си земљу на темељима њеним, да се не помести на век века.
6 ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
Безданом као хаљином оденуо си је; на горама стоје воде.
7 ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,
Од претње Твоје беже, од громовног гласа Твог теку.
8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
Излазе на горе и силазе у долине, на место које си им утврдио.
9 ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.
Поставио си међу, преко које не прелазе, и не враћају се да покрију земљу.
10 ೧೦ ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.
Извео си изворе по долинама, између гора теку воде.
11 ೧೧ ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
Напајају све звери пољске; дивљи магарци гасе жеђ своју.
12 ೧೨ ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
На њима птице небеске живе; кроз гране разлеже се глас њихов.
13 ೧೩ ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.
Напајаш горе с висина својих, плодовима дела Твојих сити се земља.
14 ೧೪ ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,
Дајеш те расте трава стоци, и зелен на корист човеку, да би извадио хлеб из земље.
15 ೧೫ ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
И вино весели срце човеку, и лице се светли од уља, и хлеб срце човеку крепи.
16 ೧೬ ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.
Сите се дрвета Божија, кедри ливански, које си посадио.
17 ೧೭ ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
На њима птице вију гнезда; станак је родин на јелама.
18 ೧೮ ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
Горе високе дивокозама, камен је уточиште зечевима.
19 ೧೯ ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
Створио си месец да показује времена, сунце познаје запад свој.
20 ೨೦ ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.
Стереш таму, и бива ноћ, по којој излази све зверје шумско;
21 ೨೧ ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.
Лавови ричу за пленом, и траже од Бога хране себи.
22 ೨೨ ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
Сунце гране, и они се сакривају и лежу у ложе своје.
23 ೨೩ ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.
Излази човек на посао свој, и на рад свој до вечера.
24 ೨೪ ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
Како је много дела Твојих, Господе! Све си премудро створио; пуна је земља блага Твог.
25 ೨೫ ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
Гле, море велико и широко, ту гмижу без броја, животиња мала и велика;
26 ೨೬ ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.
Ту лађе плове, крокодил, ког си створио да се игра по њему.
27 ೨೭ ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.
Све Тебе чека, да им дајеш пићу на време.
28 ೨೮ ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.
Дајеш им, примају; отвориш руку своју, сите се добра.
29 ೨೯ ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.
Одвратиш лице своје, жалосте се; узмеш им дух, гину, и у прах свој враћају се.
30 ೩೦ ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.
Пошаљеш дух свој, постају, и понављаш лице земљи.
31 ೩೧ ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.
Слава Господу увек; нек се весели Господ за дела своја!
32 ೩೨ ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.
Он погледа на земљу, и она се тресе; дотакне се гора, и диме се.
33 ೩೩ ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.
Певаћу Господу за живота свог; хвалићу Бога свог док сам год.
34 ೩೪ ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.
Нека Му буде мила беседа моја! Веселићу се о Господу.
35 ೩೫ ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.
Нека нестане грешника са земље, и безбожника нека не буде више! Благосиљај, душо моја, Господа! Алилуја!

< ಕೀರ್ತನೆಗಳು 104 >