< ಕೀರ್ತನೆಗಳು 111 >

1 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
Хвалим Те, Господе, од свега срца на већу праведничком и на сабору.
2 ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
Велика су дела Господња, драга свима који их љубе.
3 ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.
Дело је Његово слава и красота, и правда Његова траје довека.
4 ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
Чудеса је своја учинио да се не забораве; добар је и милостив Господ.
5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
Храну даје онима који Га се боје, памти увек завет свој.
6 ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
Силу дела својих јавио је народу свом давши им наследство народа.
7 ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
Дела су руку Његових истина и правда; верне су све заповести Његове;
8 ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
Тврде су за ва век века, основане на истини и правди.
9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
Избављење посла народу свом; постави зававек завет свој. Име је Његово свето, и ваља Му се клањати.
10 ೧೦ ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
Почетак је мудрости страх Господњи; добра су разума сви који их творе. Хвала Његова траје довека.

< ಕೀರ್ತನೆಗಳು 111 >