< ಕೀರ್ತನೆಗಳು 143 >

1 ದಾವೀದನ ಕೀರ್ತನೆ. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
Господе, услиши молитву моју, прими мољење моје по истини својој, услиши ме по правди својој.
2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
И не иди на суд са слугом својим, јер се неће оправдати пред Тобом нико жив.
3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
Непријатељ гони душу моју, гази у прах живот мој, посађује ме у мрак, као давно помрле.
4 ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.
Трне у мени дух мој, нестаје у мени срца мог.
5 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
Помињем дане старе, пребрајам све послове Твоје, размишљам о делима руку Твојих.
6 ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. (ಸೆಲಾ)
Пружам к Теби руке своје; душа је моја као сува земља пред Тобом.
7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
Похитај, услиши ме; Господе, нестаје духа мог, немој одвратити лице своје од мене; јер ћу бити као они који одлазе у гроб.
8 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
Рано ми јави милост своју, јер се у Тебе уздам. Покажи ми пут, којим да идем, јер к Теби подижем душу своју.
9 ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.
Избави ме од непријатеља мојих, Господе, к Теби притечем.
10 ೧೦ ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
Научи ме Творити вољу Твоју, јер си Ти Бог мој; дух Твој благи нека ме води по стази правој.
11 ೧೧ ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
Имена ради свог, Господе, оживи ме, по правди својој изведи из муке душу моју.
12 ೧೨ ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.
И по милости својој истреби непријатеље моје, и погуби све који муче душу моју, јер сам Твој слуга.

< ಕೀರ್ತನೆಗಳು 143 >