< ಕೀರ್ತನೆಗಳು 2 >

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
Зашто се буне народи и племена помишљају залудне ствари?
2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
Устају цареви земаљски, и кнезови се скупљају на Господа и на помазаника Његовог.
3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
"Раскинимо свезе њихове и збацимо са себе јарам њихов."
4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
Онај, што живи на небесима, смеје се, Господ им се подсмева.
5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
Па им говори у гневу свом и јарошћу својом збуњује их:
6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
"Ја сам помазао цара свог на Сиону, на светој гори својој."
7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
Казаћу наредбу Господњу; Он рече мени: "Ти си син мој, ја те сад родих.
8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
Ишти у мене, и даћу ти народе у наследство, и крајеве земаљске теби у државу.
9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
Ударићеш их гвозденом палицом; разбићеш их као лончарски суд."
10 ೧೦ ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
Сад, цареви, оразумите се; научите се судије земаљске!
11 ೧೧ ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
Служите Господу са страхом, и радујте се с трепетом.
12 ೧೨ ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
Поштујте сина, да се не разгневи, и ви не изгинете на путу свом; јер ће се гнев Његов брзо разгорети. Благо свима који се у Њ уздају!

< ಕೀರ್ತನೆಗಳು 2 >