< ಕೀರ್ತನೆಗಳು 30 >

1 ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
Узвишаваћу Те, Господе, јер си ме отео, и ниси дао непријатељима мојим да ми се свете.
2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
Господе, Боже мој! Завиках к Теби, и исцелио си ме.
3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. (Sheol h7585)
Господе! Извео си из пакла душу моју, и оживео си ме да не сиђем у гроб. (Sheol h7585)
4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
Појте Господу, свеци Његови, и славите свето име Његово.
5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
Гнев је Његов за тренуће ока, а до живота милост Његова, вечером долази плач, а јутром радост.
6 ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
И ја рекох у добру свом: Нећу посрнути довека.
7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
Ти хтеде, Господе, те гора моја стајаше тврдо. Ти одврати лице своје, и ја се сметох.
8 ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
Тада Тебе, Господе, зазивах, и Господа молих:
9 “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
"Каква је корист од крви моје, да сиђем у гроб? Хоће ли Те прах славити или казивати истину Твоју?
10 ೧೦ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
Чуј, Господе, и смилуј се на ме; Господе буди ми помоћник."
11 ೧೧ ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
И Ти промени плач мој на радост, скиде с мене врећу. опаса ме весељем.
12 ೧೨ ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
Зато ће Ти певати слава моја и неће умукнути; Господе, Боже мој! Довека ћу Те хвалити.

< ಕೀರ್ತನೆಗಳು 30 >