< ಕೀರ್ತನೆಗಳು 53 >

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
Isithutha sithi enhliziyweni yaso: KakulaNkulunkulu. Bonakele, benza ububi obunengekayo; kakho owenza okuhle.
2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
UNkulunkulu wakhangela phansi esemazulwini phezu kwabantwana babantu, ukubona ukuthi ukhona yini oqedisisayo, odinga uNkulunkulu.
3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
Bonke ngamunye wabo babuyele emuva, bonke bonakele; kakho owenza okuhle, kakho loyedwa.
4 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.
Kabazi yini bonke abenzi bobubi, abadla abantu bami njengoba besidla isinkwa? Kababizi uNkulunkulu.
5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
Lapho besaba lokwesaba, kungekho okwesabekayo. Ngoba uNkulunkulu uchithachithe amathambo akhe omisa inkamba emelane lawe; ubayangisile, ngoba uNkulunkulu ubadelile.
6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.
Kungathi insindiso zikaIsrayeli zingavela eZiyoni! Lapho uNkulunkulu ebuyisa ukuthunjwa kwabantu bakhe, uJakobe uzathaba, uIsrayeli athokoze.

< ಕೀರ್ತನೆಗಳು 53 >