< ಕೀರ್ತನೆಗಳು 60 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
Боже, расрдио си се на нас, расуо си нас, гневио си се; поврати нас.
2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;
Затресао си земљу, и развалио си је; стегни раселине њене, јер се њиха.
3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
Дао си народу свом да позна љуту невољу, напојио си нас вина од ког се занесосмо.
4 ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. (ಸೆಲಾ)
Подигни заставу за оне који Те се боје, да утеку од лука,
5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
Да се избаве мили Твоји. Помози десницом својом и услиши ме.
6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
Бог рече у светињи својој: Веселићу се, разделићу Сихем, и долину Сокот размерићу.
7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
Мој је Галад, мој је Манасија, Јефрем је крепост главе моје, Јуда скиптар мој,
8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
Моав чаша моја, из које се умивам, на Едома пружићу обућу своју. Певај ми, филистејска земљо!
9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
Ко ће ме одвести у тврди град? Ко ће ме отпратити до Едома?
10 ೧೦ ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
Зар нећеш Ти, Боже, који си нас одбацио, и не идеш, Боже, с војском нашом?
11 ೧೧ ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.
Дај нам помоћ у тескоби. А обрана је човечија узалуд.
12 ೧೨ ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
Богом смо јаки: Он гази непријатеље наше.

< ಕೀರ್ತನೆಗಳು 60 >