< ಕೀರ್ತನೆಗಳು 66 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
לַ֭מְנַצֵּחַ שִׁ֣יר מִזְמֹ֑ור הָרִ֥יעוּ לֵ֝אלֹהִים כָּל־הָאָֽרֶץ׃
2 ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
זַמְּר֥וּ כְבֹֽוד־שְׁמֹ֑ו שִׂ֥ימוּ כָ֝בֹ֗וד תְּהִלָּתֹֽו׃
3 ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
אִמְר֣וּ לֵ֭אלֹהִים מַה־נֹּורָ֣א מַעֲשֶׂ֑יךָ בְּרֹ֥ב עֻ֝זְּךָ֗ יְֽכַחֲשׁ֖וּ לְךָ֣ אֹיְבֶֽיךָ׃
4 ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. (ಸೆಲಾ)
כָּל־הָאָ֤רֶץ ׀ יִשְׁתַּחֲו֣וּ לְ֭ךָ וִֽיזַמְּרוּ־לָ֑ךְ יְזַמְּר֖וּ שִׁמְךָ֣ סֶֽלָה׃
5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
לְכ֣וּ וּ֭רְאוּ מִפְעֲלֹ֣ות אֱלֹהִ֑ים נֹורָ֥א עֲ֝לִילָ֗ה עַל־בְּנֵ֥י אָדָֽם׃
6 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
הָ֤פַךְ יָ֨ם ׀ לְֽיַבָּשָׁ֗ה בַּ֭נָּהָר יַֽעַבְר֣וּ בְרָ֑גֶל שָׁ֝֗ם נִשְׂמְחָה־בֹּֽו׃
7 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. (ಸೆಲಾ)
מֹ֘שֵׁ֤ל בִּגְבוּרָתֹ֨ו ׀ עֹולָ֗ם עֵ֭ינָיו בַּגֹּויִ֣ם תִּצְפֶּ֑ינָה הַסֹּורְרִ֓ים ׀ אַל־יָרִימוּ (יָר֖וּמוּ) לָ֣מֹו סֶֽלָה׃
8 ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
בָּרְכ֖וּ עַמִּ֥ים ׀ אֱלֹהֵ֑ינוּ וְ֝הַשְׁמִ֗יעוּ קֹ֣ול תְּהִלָּתֹֽו׃
9 ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
הַשָּׂ֣ם נַ֭פְשֵׁנוּ בַּֽחַיִּ֑ים וְלֹֽא־נָתַ֖ן לַמֹּ֣וט רַגְלֵֽנוּ׃
10 ೧೦ ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
כִּֽי־בְחַנְתָּ֥נוּ אֱלֹהִ֑ים צְ֝רַפְתָּ֗נוּ כִּצְרָף־כָּֽסֶף׃
11 ೧೧ ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
הֲבֵאתָ֥נוּ בַמְּצוּדָ֑ה שַׂ֖מְתָּ מוּעָקָ֣ה בְמָתְנֵֽינוּ׃
12 ೧೨ ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
הִרְכַּ֥בְתָּ אֱנֹ֗ושׁ לְרֹ֫אשֵׁ֥נוּ בָּֽאנוּ־בָאֵ֥שׁ וּבַמַּ֑יִם וַ֝תֹּוצִיאֵ֗נוּ לָֽרְוָיָֽה׃
13 ೧೩ ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
אָבֹ֣וא בֵיתְךָ֣ בְעֹולֹ֑ות אֲשַׁלֵּ֖ם לְךָ֣ נְדָרָֽי׃
14 ೧೪ ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
אֲשֶׁר־פָּצ֥וּ שְׂפָתָ֑י וְדִבֶּר־פִּ֝֗י בַּצַּר־לִֽי׃
15 ೧೫ ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. (ಸೆಲಾ)
עֹ֘לֹ֤ות מֵחִ֣ים אַעֲלֶה־לָּ֭ךְ עִם־קְטֹ֣רֶת אֵילִ֑ים אֶ֥עֱשֶֽׂה בָקָ֖ר עִם־עַתּוּדִ֣ים סֶֽלָה׃
16 ೧೬ ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
לְכֽוּ־שִׁמְע֣וּ וַ֭אֲסַפְּרָה כָּל־יִרְאֵ֣י אֱלֹהִ֑ים אֲשֶׁ֖ר עָשָׂ֣ה לְנַפְשִֽׁי׃
17 ೧೭ ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
אֵלָ֥יו פִּֽי־קָרָ֑אתִי וְ֝רֹומַ֗ם תַּ֣חַת לְשֹׁונִֽי׃
18 ೧೮ ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
אָ֭וֶן אִם־רָאִ֣יתִי בְלִבִּ֑י לֹ֖א יִשְׁמַ֣ע ׀ אֲדֹנָֽי׃
19 ೧೯ ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
אָ֭כֵן שָׁמַ֣ע אֱלֹהִ֑ים הִ֝קְשִׁ֗יב בְּקֹ֣ול תְּפִלָּתִֽי׃
20 ೨೦ ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.
בָּר֥וּךְ אֱלֹהִ֑ים אֲשֶׁ֥ר לֹֽא־הֵסִ֘יר תְּפִלָּתִ֥י וְ֝חַסְדֹּ֗ו מֵאִתִּֽי׃

< ಕೀರ್ತನೆಗಳು 66 >