< ಕೀರ್ತನೆಗಳು 75 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
Хвалимо Те, Боже, хвалимо; близу је име Твоје. За Тебе казују чудеса Твоја.
2 ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
"Кад видим да је време, судићу право.
3 ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. (ಸೆಲಾ)
Њиха се земља са свима који живе на њој, ја утврђујем ступове њене."
4 ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
Кажем хвалишама: Не хвалите се, и безаконицима: Не дижите рог.
5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
Не дижите у вис рог свој, не говорите тврдоглаво.
6 ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
Јер узвишавање не долази ни од истока ни од запада ни од пустиње;
7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
Него је Бог судија, једног понижује а другог узвишује.
8 ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
Јер је чаша у руци Господу, вино ври, наточио је пуну, и раздаје из ње. И талог ће њен прогутати, испиће сви безбожници на земљи.
9 ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
А ја ћу казивати довека, певаћу Богу Јаковљевом.
10 ೧೦ ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.
"Све ћу рогове безбожницима поломити, а рогови праведникови узвисиће се."

< ಕೀರ್ತನೆಗಳು 75 >