< ಕೀರ್ತನೆಗಳು 85 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
Смиловао си се, Господе, на земљу своју, повратио си робље Јаковљево.
2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. (ಸೆಲಾ)
Опростио си неправду народу свом, покрио си све грехе његове.
3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
Зауставио си сву јарост своју, ублажио жестину гнева свог.
4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
Поврати нас Боже, Спаситељу наш, прекини срдњу своју на нас.
5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
Зар ћеш се довека гневити на нас, и протегнути гнев свој од колена на колено?
6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
Зар се нећеш повратити и оживети нас, да би се народ Твој радовао о Теби?
7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
Покажи нам, Господе, милост своју, и помоћ своју дај нам.
8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
Да послушам шта говори Господ Бог. Он изриче мир народу свом и свецима својим, и онима који се обраћају срцем к Њему.
9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
Да, близу је оних који Га се боје помоћ Његова, да би населио славу у земљи нашој!
10 ೧೦ ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
Милост и истина срешће се, правда и мир пољубиће се.
11 ೧೧ ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
Истина ће никнути из земље и правда ће с неба проникнути.
12 ೧೨ ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
И Господ ће дати добро, и земља наша даће плод свој.
13 ೧೩ ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
Правда ће пред Њим ићи, и поставиће на пут стопе своје.

< ಕೀರ್ತನೆಗಳು 85 >