< ಕೀರ್ತನೆಗಳು 9 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
Хвалим Те, Господе, из свега срца свог, казујем сва чудеса Твоја.
2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
Радујем се и веселим се о Теби, певам имену Твом, Вишњи!
3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
Непријатељи се моји вратише натраг, спотакоше се и неста их испред лица Твог;
4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
Јер си свршио суд мој и одбранио ме; сео си на престо, судија праведни.
5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
Расрдио си се на народе и убио безбожника, име си им затро довека, за свагда.
6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
Непријатељу неста мачева сасвим; градове Ти си развалио; погибе спомен њихов.
7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
Али Господ увек живи; спремио је за суд престо свој.
8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
Он ће судити васионом свету по правди, усудиће народима право.
9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
Господ је уточиште убогоме, уточиште у невољи.
10 ೧೦ ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
У Тебе се уздају који знају име Твоје, јер не остављаш оних који Те траже, Господе!
11 ೧೧ ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
Појте Господу, који живи на Сиону; казујте народу дела Његова;
12 ೧೨ ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
Јер Он освећује крв, памти је; не заборавља јаук невољних.
13 ೧೩ ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
Смилуј се на ме, Господе; погледај како страдам од непријатеља својих, Ти, који ме подижеш од врата смртних,
14 ೧೪ ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
Да бих казивао све хвале Твоје на вратима кћери Сионове, и славио спасење Твоје.
15 ೧೫ ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
Попадоше народи у јаму, коју су ископали; у замку, коју су сами наместили, ухвати се нога њихова.
16 ೧೬ ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ (ಸೆಲಾ)
Познаше Господа; Он је судио; у дела руку својих заплете се безбожник.
17 ೧೭ ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. (Sheol h7585)
Вратиће се у пакао безбожници, сви народи који заборављају Бога; (Sheol h7585)
18 ೧೮ ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
Јер неће свагда бити заборављен убоги, и нада невољницима неће никад погинути.
19 ೧೯ ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
Устани, Господе, да се не посили човек, и да приме народи суд пред Тобом.
20 ೨೦ ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. (ಸೆಲಾ)
Пусти, Господе, страх на њих; нека познају народи да су људи.

< ಕೀರ್ತನೆಗಳು 9 >