< ಪ್ರಕಟಣೆ 9 >

1 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. (Abyssos g12)
তেতিয়া পঞ্চম দূতে তেওঁৰ তূৰী বজালে৷ আকাশৰ পৰা পৃথিৱীলৈ পৰা এটা তৰা দেখিবলৈ পালোঁ৷ অগাধ ঠাইৰ কুণ্ডৰ চাবি তেওঁক দিয়া হ’ল। (Abyssos g12)
2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. (Abyssos g12)
তাতে তেওঁ সেই অগাধ ঠাইৰ কুণ্ড মেলোতে, কুণ্ডৰ পৰা বৰ অগ্নিকুণ্ডৰ ধুঁৱাৰ নিচিনাকৈ ধুঁৱা উঠিল; তাতে সেই কুণ্ডৰ ধুঁৱাৰে সূৰ্য্য আৰু আকাশ অন্ধকাৰময় হ’ল। (Abyssos g12)
3 ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.
সেই ধুঁৱাৰ পৰা কচুৱা ফৰিংবোৰ পৃথিৱীত ওলাল; আৰু সেইবোৰক, পৃথিৱীৰ কেঁকোৰা-বিছাৰ ক্ষমতাৰ নিচিনা ক্ষমতা দিয়া হ’ল।
4 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
আৰু পৃথিৱীৰ কোনো তৃণ, বা কোনো কেচা শাক বা কোনো গছ অনিষ্ট নকৰি, যি সকলৰ কপালত ঈশ্বৰৰ ছাব নাই, অকল তেনে লোক সকলক অনিষ্ট কৰিবলৈ সেইবোৰক কোৱা হ’ল।
5 ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.
সেই লোক সকলক বধ কৰিবলৈ তেওঁলোকক অনুমতি দিয়া হোৱা নাই, কিন্তু লোক সকলক পাঁচ মাহলৈকে যাতনা দিবৰ বাবে, সেইবোৰক ক্ষমতা দিয়া হ’ল। কেঁকোৰা-বিছাই মানুহক বিন্ধাত যেনে যাতনা, সেইবোৰে দিয়া যাতনাও তেনে।
6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.
সেই কালত লোক সকলে মৃত্যুক বিচাৰিব, কিন্তু কোনোমতে তাক নাপাব; তেওঁলোকে মৰিবলৈ আকাংক্ষা কৰিব, কিন্তু মৃত্যু তেওঁলোকৰ পৰা পলাব।
7 ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.
সেই ফৰিংবোৰৰ আকৃতি, যুদ্ধৰ অৰ্থে সুসজ্জিত কৰা ঘোঁৰাৰ নিচিনা৷ তেওঁলোকৰ মুৰত সোণৰ কিৰীটি থকা যেন দেখা যায় আৰু সিহঁতৰ মুখ মানুহৰ মুখৰ নিচিনা।
8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
মহিলাৰ চুলিৰ নিচিনা সিহঁতৰ চুলি আছিল; সিহঁতৰ দাঁত সিংহৰ দাঁতৰ নিচিনা।
9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.
লোহাৰ বুকুবৰিৰ নিচিনা সিহঁতৰ বুকুবৰি আছিল; সিহঁতৰ ডেউকাৰ শব্দ, ৰণলৈ ল’ৰি যোৱা ঘোঁৰা লগোৱা ৰথৰ শব্দৰ নিচিনা।
10 ೧೦ ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.
১০কেঁকোৰা-বিছাৰ নিচিনা সিহঁতৰ নেজ হুলেৰে সৈতে আছিল; আৰু পাঁচ মাহলৈকে মানুহক অনিষ্ট কৰিবলৈ সিহঁতৰ ক্ষমতা সিহঁতৰ নেজত আছিল।
11 ೧೧ ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. (Abyssos g12)
১১অগাধ ঠাইৰ দূত সিহঁতৰ ওপৰত ৰজা আছিল৷ তাৰ নাম ইব্ৰী ভাষাত আবদ্দোন আৰু গ্ৰীক ভাষাত আপল্লুয়োন। (Abyssos g12)
12 ೧೨ ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.
১২এই প্ৰথম সন্তাপ গ’ল; চোৱা! ইয়াৰ পাছত এতিয়াও দুটা দুৰ্যোগ আহি আছে৷
13 ೧೩ ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
১৩পাছত ষষ্ঠ দূতে তেওঁৰ তুৰী বজাওঁতে, ঈশ্বৰৰ আগত থকা সোণৰ বেদিৰ শিং কেইটাৰ পৰা এটা মাত শুনিলোঁ।
14 ೧೪ ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
১৪তাৰ পৰা কোনোবাই তূৰী লোৱা সেই ষষ্ঠ দূতক ক’লে, “ফৰাৎ মহা-নদীৰ ওপৰত যি চাৰি দূত বন্ধ আছে, তেওঁলোকক মেলি দিয়া”।
15 ೧೫ ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.
১৫তেতিয়া লোক সকলৰ তিনি ভাগৰ এভাগক বধ কৰিবলৈ, যি চাৰি দূতক সেই ঘণ্টা, দিন, মাহ আৰু বছৰৰ কাৰণে যুগুত কৰা হৈছিল, তেওঁলোকক মেলি দিয়া হ’ল।
16 ೧೬ ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.
১৬আৰু ঘোঁৰাত উঠা সৈন্যৰ সংখ্যা দুই হাজাৰ লাখ আছিল৷ তেওঁলোকৰ সংখ্যা মই শুনিলোঁ;
17 ೧೭ ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.
১৭আৰু দৰ্শনত মই সেই ঘোঁৰাবোৰ আৰু তাত উঠি থকা সকল, যি সকলে চলাইছিল, এইৰূপে দৰ্শন পালোঁ: তেওঁলোকৰ বুকুবৰি অগ্নিময়, নীলবৰ্ণ আৰু গন্ধকময়৷ আৰু ঘোঁৰাবোৰৰ মুৰ, সিংহৰ মুৰৰ নিচিনা; সেইবোৰৰ মুখৰ পৰা জুই, ধুঁৱা আৰু গন্ধক ওলায়।
18 ೧೮ ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.
১৮সেইবোৰৰ মুখৰ পৰা ওলোৱা জুই, ধুঁৱা আৰু গন্ধক, এই তিনি উৎপাতৰ দ্বাৰাই মানুহৰ তিনি ভাগৰ এভাগ বধ কৰা হ’ল।
19 ೧೯ ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.
১৯কিয়নো সেই ঘোঁৰাবোৰৰ ক্ষমতা, সিহঁতৰ মুখত আৰু নেজত আছে; কাৰণ সিহঁতৰ নেজ সাপৰ নিচিনা আৰু মুৰ থকা; তাৰে সিহঁতে আঘাত কৰি যাতনা দিয়ে।
20 ೨೦ ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
২০এই উৎপাতবোৰৰ দ্বাৰাই যি অৱশিষ্ট লোক সকলক বধ কৰা নহ’ল, তেওঁলোকে দেখিব, শুনিব, আৰু ফুৰিব নোৱাৰা এনে সোণ, ৰূপ, পিতল, শিল আৰু কাঠেৰে সজা মূৰ্তি আৰু দেৱতাবোৰৰ পূজা কৰিবলৈ নেৰিবৰ অভিপ্ৰায়েৰে নিজ নিজ হাতে কৰা কৰ্মৰ পৰা মন-পালটন নকৰিলে।
21 ೨೧ ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
২১তেওঁলোকে নৰ-বধ, মায়া কৰ্ম, ব্যভিচাৰ, চুৰ, সেইবোৰৰ পৰাও মন-পালটন নকৰিলে।

< ಪ್ರಕಟಣೆ 9 >