< ಪರಮಗೀತೆ 1 >

1 ಸೊಲೊಮೋನನು ರಚಿಸಿದ ಪರಮಗೀತೆ.
שִׁ֥יר הַשִּׁירִ֖ים אֲשֶׁ֥ר לִשְׁלֹמֹֽה׃
2 ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ.
יִשָּׁקֵ֙נִי֙ מִנְּשִׁיקֹ֣ות פִּ֔יהוּ כִּֽי־טֹובִ֥ים דֹּדֶ֖יךָ מִיָּֽיִן׃
3 ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.
לְרֵ֙יחַ֙ שְׁמָנֶ֣יךָ טֹובִ֔ים שֶׁ֖מֶן תּוּרַ֣ק שְׁמֶ֑ךָ עַל־כֵּ֖ן עֲלָמֹ֥ות אֲהֵבֽוּךָ׃
4 ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.
מָשְׁכֵ֖נִי אַחֲרֶ֣יךָ נָּר֑וּצָה הֱבִיאַ֨נִי הַמֶּ֜לֶךְ חֲדָרָ֗יו נָגִ֤ילָה וְנִשְׂמְחָה֙ בָּ֔ךְ נַזְכִּ֤ירָה דֹדֶ֙יךָ֙ מִיַּ֔יִן מֵישָׁרִ֖ים אֲהֵבֽוּךָ׃ ס
5 ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
שְׁחֹורָ֤ה אֲנִי֙ וְֽנָאוָ֔ה בְּנֹ֖ות יְרוּשָׁלָ֑͏ִם כְּאָהֳלֵ֣י קֵדָ֔ר כִּירִיעֹ֖ות שְׁלֹמֹֽה׃
6 ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.
אַל־תִּרְא֙וּנִי֙ שֶׁאֲנִ֣י שְׁחַרְחֹ֔רֶת שֶׁשֱּׁזָפַ֖תְנִי הַשָּׁ֑מֶשׁ בְּנֵ֧י אִמִּ֣י נִֽחֲרוּ־בִ֗י שָׂמֻ֙נִי֙ נֹטֵרָ֣ה אֶת־הַכְּרָמִ֔ים כַּרְמִ֥י שֶׁלִּ֖י לֹ֥א נָטָֽרְתִּי׃
7 ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
הַגִּ֣ידָה לִּ֗י שֶׁ֤אָהֲבָה֙ נַפְשִׁ֔י אֵיכָ֣ה תִרְעֶ֔ה אֵיכָ֖ה תַּרְבִּ֣יץ בַּֽצָּהֳרָ֑יִם שַׁלָּמָ֤ה אֶֽהְיֶה֙ כְּעֹ֣טְיָ֔ה עַ֖ל עֶדְרֵ֥י חֲבֵרֶֽיךָ׃
8 ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
אִם־לֹ֤א תֵדְעִי֙ לָ֔ךְ הַיָּפָ֖ה בַּנָּשִׁ֑ים צְֽאִי־לָ֞ךְ בְּעִקְבֵ֣י הַצֹּ֗אן וּרְעִי֙ אֶת־גְּדִיֹּתַ֔יִךְ עַ֖ל מִשְׁכְּנֹ֥ות הָרֹעִֽים׃ ס
9 ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ.
לְסֻסָתִי֙ בְּרִכְבֵ֣י פַרְעֹ֔ה דִּמִּיתִ֖יךְ רַעְיָתִֽי׃
10 ೧೦ ನಿನ್ನ ಕೆನ್ನೆಗಳು ಆಭರಣಗಳಿಂದಲೂ, ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ!
נָאו֤וּ לְחָיַ֙יִךְ֙ בַּתֹּרִ֔ים צַוָּארֵ֖ךְ בַּחֲרוּזִֽים׃
11 ೧೧ ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು.
תֹּורֵ֤י זָהָב֙ נַעֲשֶׂה־לָּ֔ךְ עִ֖ם נְקֻדֹּ֥ות הַכָּֽסֶף׃
12 ೧೨ ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.
עַד־שֶׁ֤הַמֶּ֙לֶךְ֙ בִּמְסִבֹּ֔ו נִרְדִּ֖י נָתַ֥ן רֵיחֹֽו׃
13 ೧೩ ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;
צְרֹ֨ור הַמֹּ֤ר ׀ דֹּודִי֙ לִ֔י בֵּ֥ין שָׁדַ֖י יָלִֽין׃
14 ೧೪ ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.
אֶשְׁכֹּ֨ל הַכֹּ֤פֶר ׀ דֹּודִי֙ לִ֔י בְּכַרְמֵ֖י עֵ֥ין גֶּֽדִי׃ ס
15 ೧೫ ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.
הִנָּ֤ךְ יָפָה֙ רַעְיָתִ֔י הִנָּ֥ךְ יָפָ֖ה עֵינַ֥יִךְ יֹונִֽים׃
16 ೧೬ ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,
הִנְּךָ֙ יָפֶ֤ה דֹודִי֙ אַ֣ף נָעִ֔ים אַף־עַרְשֵׂ֖נוּ רַעֲנָנָֽה׃
17 ೧೭ ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.
קֹרֹ֤ות בָּתֵּ֙ינוּ֙ אֲרָזִ֔ים רַחִיטֵנוּ (רַהִיטֵ֖נוּ) בְּרֹותִֽים׃

< ಪರಮಗೀತೆ 1 >