< ಜೆಕರ್ಯನು 7 >

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
Потом четврте године цара Дарија дође реч Господња Захарији четвртог дана деветог месеца, Хаслева,
2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
Кад послаше у дом Божји Сарасара и Регемелеха и људе своје да моле Господа,
3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
И да говоре свештеницима, који беху у дому Господа над војскама, и пророцима, и кажу: Хоћемо ли плакати петог месеца одвајајући се, како чинисмо већ толико година?
4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
И дође ми реч Господња Говорећи:
5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
Кажи свему народу земаљском и свештеницима, и реци: Кад постисте и тужисте петог и седмог месеца за седамдесет година, еда ли мени постисте?
6 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
А кад једете и пијете, не једете ли и не пијете ли сами?
7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
Нису ли то речи које је Господ прогласио преко пређашњих пророка, кад Јерусалим беше насељен и миран и градови његови око њега, и кад беше насељен јужни крај и равница?
8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
Дође реч Господња Захарији говорећи:
9 “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
Овако говори Господ над војскама: Судите право и будите милостиви и жалостиви један другом.
10 ೧೦ ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
И не чините криво удовици ни сироти, иностранцу ни сиромаху, и не мислите зло један другом у срцу свом.
11 ೧೧ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
Али не хтеше слушати, и узмакоше раменом натраг, и затискоше уши своје да не чују.
12 ೧೨ ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
И срцем својим отврднуше као дијамант да не чују закон и речи које сла Господ над војскама духом својим преко пророка пређашњих; зато дође велик гнев од Господа над војскама.
13 ೧೩ “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
Зато као што Он вика, а они не слушаше, тако и они викаше а ја их не слушах, говори Господ над војскама.
14 ೧೪ ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”
Него их разметнух вихором по свим народима, којих не познаваше, и земља опусте иза њих да нико у њу не дохођаше нити се из ње враћаше, и обратише милу земљу у пустош.

< ಜೆಕರ್ಯನು 7 >