< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 3 >

1 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು, 2 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು. 3 ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. 4 ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. 5 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು. 6 ಇದಲ್ಲದೆ ಇಬ್ಹಾರ್, ಎಲೀಷಾಮ, ಎಲೀಫೆಲೆಟ್, 7 ನೋಗಹ, ನೆಫೆಗ್, ಯಾಫೀಯ, 8 ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು. 9 ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು. 10 ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು; 11 ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು. 12 ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು. 13 ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು. 14 ಇವನ ಮಗನು ಆಮೋನನು; ಇವನ ಮಗನು ಯೋಷೀಯನು. 15 ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್. 16 ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ. 17 ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್, 18 ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ. 19 ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು. 20 ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್ 21 ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. 22 ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು. 23 ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು. 24 ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 3 >