< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >

1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.
וּכְכַלֹּ֤ות שְׁלֹמֹה֙ לְהִתְפַּלֵּ֔ל וְהָאֵ֗שׁ יָֽרְדָה֙ מֵֽהַשָּׁמַ֔יִם וַתֹּ֥אכַל הָעֹלָ֖ה וְהַזְּבָחִ֑ים וּכְבֹ֥וד יְהוָ֖ה מָלֵ֥א אֶת־הַבָּֽיִת׃
2 ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.
וְלֹ֤א יָֽכְלוּ֙ הַכֹּ֣הֲנִ֔ים לָבֹ֖וא אֶל־בֵּ֣ית יְהוָ֑ה כִּֽי־מָלֵ֥א כְבֹוד־יְהוָ֖ה אֶת־בֵּ֥ית יְהוָֽה׃
3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
וְכֹ֣ל ׀ בְּנֵ֣י יִשְׂרָאֵ֗ל רֹאִים֙ בְּרֶ֣דֶת הָאֵ֔שׁ וּכְבֹ֥וד יְהוָ֖ה עַל־הַבָּ֑יִת וַיִּכְרְעוּ֩ אַפַּ֨יִם אַ֤רְצָה עַל־הָרִֽצְפָה֙ וַיִּֽשְׁתּֽ͏ַחֲו֔וּ וְהֹודֹ֤ות לַיהוָה֙ כִּ֣י טֹ֔וב כִּ֥י לְעֹולָ֖ם חַסְדֹּֽו׃
4 ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.
וְהַמֶּ֖לֶךְ וְכָל־הָעָ֑ם זֹבְחִ֥ים זֶ֖בַח לִפְנֵ֥י יְהוָֽה׃ ס
5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.
וַיִּזְבַּ֞ח הַמֶּ֣לֶךְ שְׁלֹמֹה֮ אֶת־זֶ֣בַח הַבָּקָ֗ר עֶשְׂרִ֤ים וּשְׁנַ֙יִם֙ אֶ֔לֶף וְצֹ֕אן מֵאָ֥ה וְעֶשְׂרִ֖ים אָ֑לֶף וַֽיַּחְנְכוּ֙ אֶת־בֵּ֣ית הֽ͏ָאֱלֹהִ֔ים הַמֶּ֖לֶךְ וְכָל־הָעָֽם׃
6 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.
וְהַכֹּהֲנִ֞ים עַל־מִשְׁמְרֹותָ֣ם עֹמְדִ֗ים וְהַלְוִיִּ֞ם בִּכְלֵי־שִׁ֤יר יְהוָה֙ אֲשֶׁ֨ר עָשָׂ֜ה דָּוִ֣יד הַמֶּ֗לֶךְ לְהֹדֹ֤ות לַיהוָה֙ כִּֽי־לְעֹולָ֣ם חַסְדֹּ֔ו בְּהַלֵּ֥ל דָּוִ֖יד בְּיָדָ֑ם וְהַכֹּהֲנִים֙ מַחֲצֹצְרִים (מַחְצְרִ֣ים) נֶגְדָּ֔ם וְכָל־יִשְׂרָאֵ֖ל עֹמְדִֽים׃ ס
7 ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
וַיְקַדֵּ֣שׁ שְׁלֹמֹ֗ה אֶת־תֹּ֤וךְ הֶֽחָצֵר֙ אֲשֶׁר֙ לִפְנֵ֣י בֵית־יְהוָ֔ה כִּֽי־עָ֤שָׂה שָׁם֙ הָֽעֹלֹ֔ות וְאֵ֖ת חֶלְבֵ֣י הַשְּׁלָמִ֑ים כִּֽי־מִזְבַּ֤ח הַנְּחֹ֙שֶׁת֙ אֲשֶׁ֣ר עָשָׂ֣ה שְׁלֹמֹ֔ה לֹ֣א יָכֹ֗ול לְהָכִ֛יל אֶת־הָעֹלָ֥ה וְאֶת־הַמִּנְחָ֖ה וְאֶת־הַחֲלָבִֽים׃
8 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.
וַיַּ֣עַשׂ שְׁלֹמֹ֣ה אֶת־הֶ֠חָג בָּעֵ֨ת הַהִ֜יא שִׁבְעַ֤ת יָמִים֙ וְכָל־יִשְׂרָאֵ֣ל עִמֹּ֔ו קָהָ֖ל גָּדֹ֣ול מְאֹ֑ד מִלְּבֹ֥וא חֲמָ֖ת עַד־נַ֥חַל מִצְרָֽיִם׃
9 ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.
וֽ͏ַיַּעֲשׂ֛וּ בַּיֹּ֥ום הַשְּׁמִינִ֖י עֲצָ֑רֶת כִּ֣י ׀ חֲנֻכַּ֣ת הַמִּזְבֵּ֗חַ עָשׂוּ֙ שִׁבְעַ֣ת יָמִ֔ים וְהֶחָ֖ג שִׁבְעַ֥ת יָמִֽים׃
10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.
וּבְיֹ֨ום עֶשְׂרִ֤ים וּשְׁלֹשָׁה֙ לַחֹ֣דֶשׁ הַשְּׁבִיעִ֔י שִׁלַּ֥ח אֶת־הָעָ֖ם לְאָהֳלֵיהֶ֑ם שְׂמֵחִים֙ וְטֹ֣ובֵי לֵ֔ב עַל־הַטֹּובָ֗ה אֲשֶׁ֨ר עָשָׂ֤ה יְהוָה֙ לְדָוִ֣יד וְלִשְׁלֹמֹ֔ה וּלְיִשְׂרָאֵ֖ל עַמֹּֽו׃
11 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.
וַיְכַ֧ל שְׁלֹמֹ֛ה אֶת־בֵּ֥ית יְהוָ֖ה וְאֶת־בֵּ֣ית הַמֶּ֑לֶךְ וְאֵ֨ת כָּל־הַבָּ֜א עַל־לֵ֣ב שְׁלֹמֹ֗ה לַעֲשֹׂ֧ות בְּבֵית־יְהוָ֛ה וּבְבֵיתֹ֖ו הִצְלִֽיחַ׃ פ
12 ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.
וַיֵּרָ֧א יְהוָ֛ה אֶל־שְׁלֹמֹ֖ה בַּלָּ֑יְלָה וַיֹּ֣אמֶר לֹ֗ו שָׁמַ֙עְתִּי֙ אֶת־תְּפִלָּתֶ֔ךָ וּבָחַ֜רְתִּי בַּמָּקֹ֥ום הַזֶּ֛ה לִ֖י לְבֵ֥ית זָֽבַח׃
13 “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,
הֵ֣ן אֶֽעֱצֹ֤ר הַשָּׁמַ֙יִם֙ וְלֹֽא־יִהְיֶ֣ה מָטָ֔ר וְהֵן־אֲצַוֶּ֥ה עַל־חָגָ֖ב לֶאֱכֹ֣ול הָאָ֑רֶץ וְאִם־אֲשַׁלַּ֥ח דֶּ֖בֶר בְּעַמִּֽי׃
14 ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
וְיִכָּנְע֨וּ עַמִּ֜י אֲשֶׁ֧ר נִֽקְרָא־שְׁמִ֣י עֲלֵיהֶ֗ם וְיִֽתְפַּֽלְלוּ֙ וִֽיבַקְשׁ֣וּ פָנַ֔י וְיָשֻׁ֖בוּ מִדַּרְכֵיהֶ֣ם הָרָעִ֑ים וַאֲנִי֙ אֶשְׁמַ֣ע מִן־הַשָּׁמַ֔יִם וְאֶסְלַח֙ לְחַטָּאתָ֔ם וְאֶרְפָּ֖א אֶת־אַרְצָֽם׃
15 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.
עַתָּ֗ה עֵינַי֙ יִהְי֣וּ פְתֻחֹ֔ות וְאָזְנַ֖י קַשֻּׁבֹ֑ות לִתְפִלַּ֖ת הַמָּקֹ֥ום הַזֶּֽה׃
16 ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.
וְעַתָּ֗ה בָּחַ֤רְתִּי וְהִקְדַּ֙שְׁתִּי֙ אֶת־הַבַּ֣יִת הַזֶּ֔ה לִהְיֹות־שְׁמִ֥י שָׁ֖ם עַד־עֹולָ֑ם וְהָי֨וּ עֵינַ֧י וְלִבִּ֛י שָׁ֖ם כָּל־הַיָּמִֽים׃
17 “ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,
וְאַתָּ֞ה אִם־תֵּלֵ֣ךְ לְפָנַ֗י כַּאֲשֶׁ֤ר הָלַךְ֙ דָּוִ֣יד אָבִ֔יךָ וְלַעֲשֹׂ֕ות כְּכֹ֖ל אֲשֶׁ֣ר צִוִּיתִ֑יךָ וְחֻקַּ֥י וּמִשְׁפָּטַ֖י תִּשְׁמֹֽור׃
18 ‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
וַהֲקִ֣ימֹותִ֔י אֵ֖ת כִּסֵּ֣א מַלְכוּתֶ֑ךָ כַּאֲשֶׁ֣ר כָּרַ֗תִּי לְדָוִ֤יד אָבִ֙יךָ֙ לֵאמֹ֔ר לֹֽא־יִכָּרֵ֤ת לְךָ֙ אִ֔ישׁ מֹושֵׁ֖ל בְּיִשְׂרָאֵֽל׃
19 “ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,
וְאִם־תְּשׁוּב֣וּן אַתֶּ֔ם וַעֲזַבְתֶּם֙ חֻקֹּותַ֣י וּמִצְוֹתַ֔י אֲשֶׁ֥ר נָתַ֖תִּי לִפְנֵיכֶ֑ם וַהֲלַכְתֶּ֗ם וַעֲבַדְתֶּם֙ אֱלֹהִ֣ים אֲחֵרִ֔ים וְהִשְׁתַּחֲוִיתֶ֖ם לָהֶֽם׃
20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.
וּנְתַשְׁתִּ֗ים מֵעַ֤ל אַדְמָתִי֙ אֲשֶׁ֣ר נָתַ֣תִּי לָהֶ֔ם וְאֶת־הַבַּ֤יִת הַזֶּה֙ אֲשֶׁ֣ר הִקְדַּ֣שְׁתִּי לִשְׁמִ֔י אַשְׁלִ֖יךְ מֵעַ֣ל פָּנָ֑י וְאֶתְּנֶ֛נּוּ לְמָשָׁ֥ל וְלִשְׁנִינָ֖ה בְּכָל־הָעַמִּֽים׃
21 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.
וְהַבַּ֤יִת הַזֶּה֙ אֲשֶׁ֣ר הָיָ֣ה עֶלְיֹ֔ון לְכָל־עֹבֵ֥ר עָלָ֖יו יִשֹּׁ֑ם וְאָמַ֗ר בַּמֶּ֨ה עָשָׂ֤ה יְהוָה֙ כָּ֔כָה לָאָ֥רֶץ הַזֹּ֖את וְלַבַּ֥יִת הַזֶּֽה׃
22 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’” ಎಂದರು.
וְאָמְר֗וּ עַל֩ אֲשֶׁ֨ר עָֽזְב֜וּ אֶת־יְהוָ֣ה ׀ אֱלֹהֵ֣י אֲבֹתֵיהֶ֗ם אֲשֶׁ֣ר הֹוצִיאָם֮ מֵאֶ֣רֶץ מִצְרַיִם֒ וַֽיַּחֲזִ֙יקוּ֙ בֵּאלֹהִ֣ים אֲחֵרִ֔ים וַיִּשְׁתַּחֲו֥וּ לָהֶ֖ם וַיַּֽעַבְד֑וּם עַל־כֵּן֙ הֵבִ֣יא עֲלֵיהֶ֔ם אֵ֥ת כָּל־הָרָעָ֖ה הַזֹּֽאת׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >