< ಅರಸುಗಳು - ದ್ವಿತೀಯ ಭಾಗ 5 >

1 ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.
וְ֠נַעֲמָן שַׂר־צְבָ֨א מֶֽלֶךְ־אֲרָ֜ם הָיָ֣ה אִישׁ֩ גָּדֹ֨ול לִפְנֵ֤י אֲדֹנָיו֙ וּנְשֻׂ֣א פָנִ֔ים כִּֽי־בֹ֛ו נָֽתַן־יְהוָ֥ה תְּשׁוּעָ֖ה לַאֲרָ֑ם וְהָאִ֗ישׁ הָיָ֛ה גִּבֹּ֥ור חַ֖יִל מְצֹרָֽע׃
2 ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.
וַאֲרָם֙ יָצְא֣וּ גְדוּדִ֔ים וַיִּשְׁבּ֛וּ מֵאֶ֥רֶץ יִשְׂרָאֵ֖ל נַעֲרָ֣ה קְטַנָּ֑ה וַתְּהִ֕י לִפְנֵ֖י אֵ֥שֶׁת נַעֲמָֽן׃
3 ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.
וַתֹּ֙אמֶר֙ אֶל־גְּבִרְתָּ֔הּ אַחֲלֵ֣י אֲדֹנִ֔י לִפְנֵ֥י הַנָּבִ֖יא אֲשֶׁ֣ר בְּשֹׁמְרֹ֑ון אָ֛ז יֶאֱסֹ֥ף אֹתֹ֖ו מִצָּרַעְתֹּֽו׃
4 ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
וַיָּבֹ֕א וַיַּגֵּ֥ד לַאדֹנָ֖יו לֵאמֹ֑ר כָּזֹ֤את וְכָזֹאת֙ דִּבְּרָ֣ה הַֽנַּעֲרָ֔ה אֲשֶׁ֖ר מֵאֶ֥רֶץ יִשְׂרָאֵֽל׃
5 ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.
וַיֹּ֤אמֶר מֶֽלֶךְ־אֲרָם֙ לֶךְ־בֹּ֔א וְאֶשְׁלְחָ֥ה סֵ֖פֶר אֶל־מֶ֣לֶךְ יִשְׂרָאֵ֑ל וַיֵּלֶךְ֩ וַיִּקַּ֨ח בְּיָדֹ֜ו עֶ֣שֶׂר כִּכְּרֵי־כֶ֗סֶף וְשֵׁ֤שֶׁת אֲלָפִים֙ זָהָ֔ב וְעֶ֖שֶׂר חֲלִיפֹ֥ות בְּגָדִֽים׃
6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು.
וַיָּבֵ֣א הַסֵּ֔פֶר אֶל־מֶ֥לֶךְ יִשְׂרָאֵ֖ל לֵאמֹ֑ר וְעַתָּ֗ה כְּבֹ֨וא הַסֵּ֤פֶר הַזֶּה֙ אֵלֶ֔יךָ הִנֵּ֨ה שָׁלַ֤חְתִּי אֵלֶ֙יךָ֙ אֶת־נַעֲמָ֣ן עַבְדִּ֔י וַאֲסַפְתֹּ֖ו מִצָּרַעְתֹּֽו׃
7 ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.
וַיְהִ֡י כִּקְרֹא֩ מֶֽלֶךְ־יִשְׂרָאֵ֨ל אֶת־הַסֵּ֜פֶר וַיִּקְרַ֣ע בְּגָדָ֗יו וַיֹּ֙אמֶר֙ הַאֱלֹהִ֥ים אָ֙נִי֙ לְהָמִ֣ית וּֽלְהַחֲיֹ֔ות כִּֽי־זֶה֙ שֹׁלֵ֣חַ אֵלַ֔י לֶאֱסֹ֥ף אִ֖ישׁ מִצָּֽרַעְתֹּ֑ו כִּ֤י אַךְ־דְּעֽוּ־נָא֙ וּרְא֔וּ כִּֽי־מִתְאַנֶּ֥ה ה֖וּא לִֽי׃
8 ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.
וַיְהִ֞י כִּשְׁמֹ֣עַ ׀ אֱלִישָׁ֣ע אִישׁ־הָאֱלֹהִ֗ים כִּֽי־קָרַ֤ע מֶֽלֶךְ־יִשְׂרָאֵל֙ אֶת־בְּגָדָ֔יו וַיִּשְׁלַח֙ אֶל־הַמֶּ֣לֶךְ לֵאמֹ֔ר לָ֥מָּה קָרַ֖עְתָּ בְּגָדֶ֑יךָ יָבֹֽא־נָ֣א אֵלַ֔י וְיֵדַ֕ע כִּ֛י יֵ֥שׁ נָבִ֖יא בְּיִשְׂרָאֵֽל׃
9 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು.
וַיָּבֹ֥א נַעֲמָ֖ן בְּסוּסֹו (בְּסוּסָ֣יו) וּבְרִכְבֹּ֑ו וַיַּעֲמֹ֥ד פֶּֽתַח־הַבַּ֖יִת לֶאֱלִישָֽׁע׃
10 ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
וַיִּשְׁלַ֥ח אֵלָ֛יו אֱלִישָׁ֖ע מַלְאָ֣ךְ לֵאמֹ֑ר הָלֹ֗וךְ וְרָחַצְתָּ֤ שֶֽׁבַע־פְּעָמִים֙ בַּיַּרְדֵּ֔ן וְיָשֹׁ֧ב בְּשָׂרְךָ֛ לְךָ֖ וּטְהָֽר׃
11 ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.
וַיִּקְצֹ֥ף נַעֲמָ֖ן וַיֵּלַ֑ךְ וַיֹּאמֶר֩ הִנֵּ֨ה אָמַ֜רְתִּי אֵלַ֣י ׀ יֵצֵ֣א יָצֹ֗וא וְעָמַד֙ וְקָרָא֙ בְּשֵׁם־יְהוָ֣ה אֱלֹהָ֔יו וְהֵנִ֥יף יָדֹ֛ו אֶל־הַמָּקֹ֖ום וְאָסַ֥ף הַמְּצֹרָֽע׃
12 ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
הֲלֹ֡א טֹוב֩ אֲבָנָה (אֲמָנָ֨ה) וּפַרְפַּ֜ר נַהֲרֹ֣ות דַּמֶּ֗שֶׂק מִכֹּל֙ מֵימֵ֣י יִשְׂרָאֵ֔ל הֲלֹֽא־אֶרְחַ֥ץ בָּהֶ֖ם וְטָהָ֑רְתִּי וַיִּ֖פֶן וַיֵּ֥לֶךְ בְּחֵמָֽה׃
13 ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.
וַיִּגְּשׁ֣וּ עֲבָדָיו֮ וַיְדַבְּר֣וּ אֵלָיו֒ וַיֹּאמְר֗וּ אָבִי֙ דָּבָ֣ר גָּדֹ֗ול הַנָּבִ֛יא דִּבֶּ֥ר אֵלֶ֖יךָ הֲלֹ֣וא תַעֲשֶׂ֑ה וְאַ֛ף כִּֽי־אָמַ֥ר אֵלֶ֖יךָ רְחַ֥ץ וּטְהָֽר׃
14 ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.
וַיֵּ֗רֶד וַיִּטְבֹּ֤ל בַּיַּרְדֵּן֙ שֶׁ֣בַע פְּעָמִ֔ים כִּדְבַ֖ר אִ֣ישׁ הָאֱלֹהִ֑ים וַיָּ֣שָׁב בְּשָׂרֹ֗ו כִּבְשַׂ֛ר נַ֥עַר קָטֹ֖ן וַיִּטְהָֽר׃
15 ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.
וַיָּשָׁב֩ אֶל־אִ֨ישׁ הָאֱלֹהִ֜ים ה֣וּא וְכָֽל־מַחֲנֵ֗הוּ וַיָּבֹא֮ וַיַּעֲמֹ֣ד לְפָנָיו֒ וַיֹּ֗אמֶר הִנֵּה־נָ֤א יָדַ֙עְתִּי֙ כִּ֣י אֵ֤ין אֱלֹהִים֙ בְּכָל־הָאָ֔רֶץ כִּ֖י אִם־בְּיִשְׂרָאֵ֑ל וְעַתָּ֛ה קַח־נָ֥א בְרָכָ֖ה מֵאֵ֥ת עַבְדֶּֽךָ׃
16 ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು.
וַיֹּ֕אמֶר חַי־יְהוָ֛ה אֲשֶׁר־עָמַ֥דְתִּי לְפָנָ֖יו אִם־אֶקָּ֑ח וַיִּפְצַר־בֹּ֥ו לָקַ֖חַת וַיְמָאֵֽן׃
17 ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.
וַיֹּאמֶר֮ נַעֲמָן֒ וָלֹ֕א יֻתַּן־נָ֣א לְעַבְדְּךָ֔ מַשָּׂ֥א צֶֽמֶד־פְּרָדִ֖ים אֲדָמָ֑ה כִּ֡י לֹֽוא־יַעֲשֶׂה֩ עֹ֨וד עַבְדְּךָ֜ עֹלָ֤ה וָזֶ֙בַח֙ לֵאלֹהִ֣ים אֲחֵרִ֔ים כִּ֖י אִם־לַיהוָֽה׃
18 ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು.
לַדָּבָ֣ר הַזֶּ֔ה יִסְלַ֥ח יְהוָ֖ה לְעַבְדֶּ֑ךָ בְּבֹ֣וא אֲדֹנִ֣י בֵית־רִמֹּון֩ לְהִשְׁתַּחֲוֹ֨ת שָׁ֜מָּה וְה֣וּא ׀ נִשְׁעָ֣ן עַל־יָדִ֗י וְהִֽשְׁתַּחֲוֵ֙יתִי֙ בֵּ֣ית רִמֹּ֔ן בְּהִשְׁתַּחֲוָיָ֙תִי֙ בֵּ֣ית רִמֹּ֔ן יִסְלַח־נָא יְהוָ֥ה לְעַבְדְּךָ֖ בַּדָּבָ֥ר הַזֶּֽה׃
19 ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. ನಾಮಾನನು ಸ್ವಲ್ಪ ದೂರ ಹೋದನು.
וַיֹּ֥אמֶר לֹ֖ו לֵ֣ךְ לְשָׁלֹ֑ום וַיֵּ֥לֶךְ מֵאִתֹּ֖ו כִּבְרַת־אָֽרֶץ׃ ס
20 ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.
וַיֹּ֣אמֶר גֵּיחֲזִ֗י נַעַר֮ אֱלִישָׁ֣ע אִישׁ־הָאֱלֹהִים֒ הִנֵּ֣ה ׀ חָשַׂ֣ךְ אֲדֹנִ֗י אֶֽת־נַעֲמָ֤ן הָֽאֲרַמִּי֙ הַזֶּ֔ה מִקַּ֥חַת מִיָּדֹ֖ו אֵ֣ת אֲשֶׁר־הֵבִ֑יא חַי־יְהוָה֙ כִּֽי־אִם־רַ֣צְתִּי אַחֲרָ֔יו וְלָקַחְתִּ֥י מֵאִתֹּ֖ו מְאֽוּמָה׃
21 ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು.
וַיִּרְדֹּ֥ף גֵּיחֲזִ֖י אַחֲרֵ֣י נַֽעֲמָ֑ן וַיִּרְאֶ֤ה נַֽעֲמָן֙ רָ֣ץ אַחֲרָ֔יו וַיִּפֹּ֞ל מֵעַ֧ל הַמֶּרְכָּבָ֛ה לִקְרָאתֹ֖ו וַיֹּ֥אמֶר הֲשָׁלֹֽום׃
22 ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.
וַיֹּ֣אמֶר ׀ שָׁלֹ֗ום אֲדֹנִי֮ שְׁלָחַ֣נִי לֵאמֹר֒ הִנֵּ֣ה עַתָּ֡ה זֶ֠ה בָּ֣אוּ אֵלַ֧י שְׁנֵֽי־נְעָרִ֛ים מֵהַ֥ר אֶפְרַ֖יִם מִבְּנֵ֣י הַנְּבִיאִ֑ים תְּנָה־נָּ֤א לָהֶם֙ כִּכַּר־כֶּ֔סֶף וּשְׁתֵּ֖י חֲלִפֹ֥ות בְּגָדִֽים׃
23 ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.
וַיֹּ֣אמֶר נַעֲמָ֔ן הֹואֵ֖ל קַ֣ח כִּכָּרָ֑יִם וַיִּפְרָץ־בֹּ֗ו וַיָּצַר֩ כִּכְּרַ֨יִם כֶּ֜סֶף בִּשְׁנֵ֣י חֲרִטִ֗ים וּשְׁתֵּי֙ חֲלִפֹ֣ות בְּגָדִ֔ים וַיִּתֵּן֙ אֶל־שְׁנֵ֣י נְעָרָ֔יו וַיִּשְׂא֖וּ לְפָנָֽיו׃
24 ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು.
וַיָּבֹא֙ אֶל־הָעֹ֔פֶל וַיִּקַּ֥ח מִיָּדָ֖ם וַיִּפְקֹ֣ד בַּבָּ֑יִת וַיְשַׁלַּ֥ח אֶת־הָאֲנָשִׁ֖ים וַיֵּלֵֽכוּ׃
25 ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.
וְהוּא־בָא֙ וַיַּעֲמֹ֣ד אֶל־אֲדֹנָ֔יו וַיֹּ֤אמֶר אֵלָיו֙ אֱלִישָׁ֔ע מֵאָן (מֵאַ֖יִן) גֵּחֲזִ֑י וַיֹּ֕אמֶר לֹֽא־הָלַ֥ךְ עַבְדְּךָ֖ אָ֥נֶה וָאָֽנָה׃
26 ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?
וַיֹּ֤אמֶר אֵלָיו֙ לֹא־לִבִּ֣י הָלַ֔ךְ כַּאֲשֶׁ֧ר הָֽפַךְ־אִ֛ישׁ מֵעַ֥ל מֶרְכַּבְתֹּ֖ו לִקְרָאתֶ֑ךָ הַעֵ֞ת לָקַ֤חַת אֶת־הַכֶּ֙סֶף֙ וְלָקַ֣חַת בְּגָדִ֔ים וְזֵיתִ֤ים וּכְרָמִים֙ וְצֹ֣אן וּבָקָ֔ר וַעֲבָדִ֖ים וּשְׁפָחֹֽות׃
27 ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.
וְצָרַ֤עַת נַֽעֲמָן֙ תִּֽדְבַּק־בְּךָ֔ וּֽבְזַרְעֲךָ לְעֹולָ֑ם וַיֵּצֵ֥א מִלְּפָנָ֖יו מְצֹרָ֥ע כַּשָּֽׁלֶג׃ ס

< ಅರಸುಗಳು - ದ್ವಿತೀಯ ಭಾಗ 5 >