< ಸಮುವೇಲನು - ದ್ವಿತೀಯ ಭಾಗ 13 >

1 ಕಾಲಾಂತರದಲ್ಲಿ ದಾವೀದನ ಮಗ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸುಂದರಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗ ಅಮ್ನೋನನು ಪ್ರೀತಿಮಾಡಿದನು.
तामार नामक एक सुन्दरी जो दाऊद के पुत्र अबशालोम की बहन थी, उस पर दाऊद का पुत्र अम्नोन मोहित हुआ।
2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
अम्नोन अपनी बहन तामार के कारण ऐसा विकल हो गया कि बीमार पड़ गया; क्योंकि वह कुमारी थी, और उसके साथ कुछ करना अम्नोन को कठिन जान पड़ता था।
3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.
अम्नोन के योनादाब नामक एक मित्र था, जो दाऊद के भाई शिमआह का बेटा था, और वह बड़ा चतुर था।
4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.
और उसने अम्नोन से कहा, “हे राजकुमार, क्या कारण है कि तू प्रतिदिन ऐसा दुबला होता जाता है क्या तू मुझे न बताएगा?” अम्नोन ने उससे कहा, “मैं तो अपने भाई अबशालोम की बहन तामार पर मोहित हूँ।”
5 ಆಗ ಯೋನಾದಾಬನು ಅವನಿಗೆ, “ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವುದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ, ‘ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು. ನಾನು ಅವಳ ಕೈಯಿಂದ ಉಣ್ಣುವ ಹಾಗೆ, ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ, ನನಗೆ ಆಹಾರ ಕೊಡಲಿ,’ ಎಂದು ಹೇಳು,” ಎಂದನು.
योनादाब ने उससे कहा, “अपने पलंग पर लेटकर बीमार बन जा; और जब तेरा पिता तुझे देखने को आए, तब उससे कहना, ‘मेरी बहन तामार आकर मुझे रोटी खिलाएँ, और भोजन को मेरे सामने बनाए, कि मैं उसको देखकर उसके हाथ से खाऊँ।’”
6 ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು.
अतः अम्नोन लेटकर बीमार बना; और जब राजा उसे देखने आया, तब अम्नोन ने राजा से कहा, “मेरी बहन तामार आकर मेरे देखते दो पूरियां बनाए, कि मैं उसके हाथ से खाऊँ।”
7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು.
तब दाऊद ने अपने घर तामार के पास यह कहला भेजा, “अपने भाई अम्नोन के घर जाकर उसके लिये भोजन बना।”
8 ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ,
तब तामार अपने भाई अम्नोन के घर गई, और वह पड़ा हुआ था। तब उसने आटा लेकर गूँधा, और उसके देखते पूरियां पकाईं।
9 ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು.
तब उसने थाल लेकर उनको उसके लिये परोसा, परन्तु उसने खाने से इन्कार किया। तब अम्नोन ने अपने दासों से कहा, “मेरे आस-पास से सब लोगों को निकाल दो।” तब सब लोग उसके पास से निकल गए।
10 ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು.
१०तब अम्नोन ने तामार से कहा, “भोजन को कोठरी में ले आ, कि मैं तेरे हाथ से खाऊँ।” तो तामार अपनी बनाई हुई पूरियों को उठाकर अपने भाई अम्नोन के पास कोठरी में ले गई।
11 ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು.
११जब वह उनको उसके खाने के लिये निकट ले गई, तब उसने उसे पकड़कर कहा, “हे मेरी बहन, आ, मुझसे मिल।”
12 ಅದಕ್ಕವಳು, “ನನ್ನ ಸಹೋದರನೇ, ಬೇಡ. ನನ್ನನ್ನು ಒತ್ತಾಯ ಮಾಡಬೇಡ. ಏಕೆಂದರೆ ಇಸ್ರಾಯೇಲಿನಲ್ಲಿ ಇಂಥ ಕಾರ್ಯ ಮಾಡಕೂಡದು. ಇಂಥ ದುಷ್ಟತನದ ಕೆಲಸ ಮಾಡಬೇಡ.
१२उसने कहा, “हे मेरे भाई, ऐसा नहीं, मुझे भ्रष्ट न कर; क्योंकि इस्राएल में ऐसा काम होना नहीं चाहिये; ऐसी मूर्खता का काम न कर।
13 ಈ ಅವಮಾನವನ್ನು ಮರೆಮಾಡುವುದು ಹೇಗೆ? ನೀನು ಇಸ್ರಾಯೇಲಿನಲ್ಲಿ ದುಷ್ಟ ಮೂರ್ಖರೊಳಗೆ ಒಬ್ಬನಾಗಿ ಇರುವೆ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು. ಏಕೆಂದರೆ ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ,” ಎಂದಳು.
१३फिर मैं अपनी नामधराई लिये हुए कहाँ जाऊँगी? और तू इस्राएलियों में एक मूर्ख गिना जाएगा। तू राजा से बातचीत कर, वह मुझ को तुझे ब्याह देने के लिये मना न करेगा।”
14 ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು.
१४परन्तु उसने उसकी न सुनी; और उससे बलवान होने के कारण उसके साथ कुकर्म करके उसे भ्रष्ट किया।
15 ಅನಂತರ ಅಮ್ನೋನನು ಅವಳನ್ನು ಅತ್ಯಂತ ಹಗೆ ಮಾಡಿದನು. ಅವಳನ್ನು ಹಗೆ ಮಾಡುವ ಮೊದಲು ಮಾಡಿದ ಪ್ರೀತಿಗಿಂತ ಅದು ಅಧಿಕವಾಗಿತ್ತು. ಆದ್ದರಿಂದ, ಅಮ್ನೋನನು ಅವಳಿಗೆ, “ಎದ್ದು ಹೋಗು,” ಎಂದನು.
१५तब अम्नोन उससे अत्यन्त बैर रखने लगा; यहाँ तक कि यह बैर उसके पहले मोह से बढ़कर हुआ। तब अम्नोन ने उससे कहा, “उठकर चली जा।”
16 ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ
१६उसने कहा, “ऐसा नहीं, क्योंकि यह बड़ा उपद्रव, अर्थात् मुझे निकाल देना उस पहले से बढ़कर है जो तूने मुझसे किया है।” परन्तु उसने उसकी न सुनी।
17 ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು.
१७तब उसने अपने सेवक जवान को बुलाकर कहा, “इस स्त्री को मेरे पास से बाहर निकाल दे, और उसके पीछे किवाड़ में चिटकनी लगा दे।”
18 ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು.
१८वह तो रंगबिरंगी कुर्ती पहने थी; क्योंकि जो राजकुमारियाँ कुँवारी रहती थीं वे ऐसे ही वस्त्र पहनती थीं। अतः अम्नोन के टहलुए ने उसे बाहर निकालकर उसके पीछे किवाड़ में चिटकनी लगा दी।
19 ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.
१९तब तामार ने अपने सिर पर राख डाली, और अपनी रंगबिरंगी कुर्ती को फाड़ डाला; और सिर पर हाथ रखे चिल्लाती हुई चली गई।
20 ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು.
२०उसके भाई अबशालोम ने उससे पूछा, “क्या तेरा भाई अम्नोन तेरे साथ रहा है? परन्तु अब, हे मेरी बहन, चुप रह, वह तो तेरा भाई है; इस बात की चिन्ता न कर।” तब तामार अपने भाई अबशालोम के घर में मन मारे बैठी रही।
21 ಅರಸನಾದ ದಾವೀದನು ಇವುಗಳನ್ನೆಲ್ಲಾ ಕೇಳಿದಾಗ ಬಹು ಕೋಪಗೊಂಡನು.
२१जब ये सब बातें दाऊद राजा के कान में पड़ीं, तब वह बहुत झुँझला उठा।
22 ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
२२और अबशालोम ने अम्नोन से भला-बुरा कुछ न कहा, क्योंकि अम्नोन ने उसकी बहन तामार को भ्रष्ट किया था, इस कारण अबशालोम उससे घृणा करता था।
23 ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
२३दो वर्ष के बाद अबशालोम ने एप्रैम के निकट के बाल्हासोर में अपनी भेड़ों का ऊन कतरवाया और अबशालोम ने सब राजकुमारों को नेवता दिया।
24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು.
२४वह राजा के पास जाकर कहने लगा, “विनती यह है, कि तेरे दास की भेड़ों का ऊन कतरा जाता है, इसलिए राजा अपने कर्मचारियों समेत अपने दास के संग चले।”
25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.
२५राजा ने अबशालोम से कहा, “हे मेरे बेटे, ऐसा नहीं; हम सब न चलेंगे, ऐसा न हो कि तुझे अधिक कष्ट हो।” तब अबशालोम ने विनती करके उस पर दबाव डाला, परन्तु उसने जाने से इन्कार किया, तो भी उसे आशीर्वाद दिया।
26 ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.
२६तब अबशालोम ने कहा, “यदि तू नहीं तो मेरे भाई अम्नोन को हमारे संग जाने दे।” राजा ने उससे पूछा, “वह तेरे संग क्यों चले?”
27 ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
२७परन्तु अबशालोम ने उसे ऐसा दबाया कि उसने अम्नोन और सब राजकुमारों को उसके साथ जाने दिया।
28 ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.
२८तब अबशालोम ने अपने सेवकों को आज्ञा दी, “सावधान रहो और जब अम्नोन दाखमधु पीकर नशे में आ जाए, और मैं तुम से कहूँ, ‘अम्नोन को मार डालना।’ क्या इस आज्ञा का देनेवाला मैं नहीं हूँ? हियाव बाँधकर पुरुषार्थ करना।”
29 ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
२९अतः अबशालोम के सेवकों ने अम्नोन के साथ अबशालोम की आज्ञा के अनुसार किया। तब सब राजकुमार उठ खड़े हुए, और अपने-अपने खच्चर पर चढ़कर भाग गए।
30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.
३०वे मार्ग ही में थे, कि दाऊद को यह समाचार मिला, “अबशालोम ने सब राजकुमारों को मार डाला, और उनमें से एक भी नहीं बचा।”
31 ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು.
३१तब दाऊद ने उठकर अपने वस्त्र फाड़े, और भूमि पर गिर पड़ा, और उसके सब कर्मचारी वस्त्र फाड़े हुए उसके पास खड़े रहे।
32 ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು.
३२तब दाऊद के भाई शिमआह के पुत्र योनादाब ने कहा, “मेरा प्रभु यह न समझे कि सब जवान, अर्थात् राजकुमार मार डाले गए हैं, केवल अम्नोन मारा गया है; क्योंकि जिस दिन उसने अबशालोम की बहन तामार को भ्रष्ट किया, उसी दिन से अबशालोम की आज्ञा से ऐसी ही बात निश्चित थी।
33 ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು.
३३इसलिए अब मेरा प्रभु राजा अपने मन में यह समझकर कि सब राजकुमार मर गए उदास न हो; क्योंकि केवल अम्नोन ही मारा गया है।”
34 ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.
३४इतने में अबशालोम भाग गया। और जो जवान पहरा देता था उसने आँखें उठाकर देखा, कि पीछे की ओर से पहाड़ के पास के मार्ग से बहुत लोग चले आ रहे हैं।
35 ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು.
३५तब योनादाब ने राजा से कहा, “देख, राजकुमार तो आ गए हैं; जैसा तेरे दास ने कहा था वैसा ही हुआ।”
36 ಅವನು ಮಾತನಾಡಿ ತೀರಿಸಿದಾಗ, ಅರಸನ ಪುತ್ರರು ಬಂದು ಸ್ವರವೆತ್ತಿ ಅತ್ತರು. ಅರಸನೂ, ಅವನ ಸಮಸ್ತ ಸೇವಕರೂ ಮಹಾಧ್ವನಿಯಿಂದ ಅತ್ತರು.
३६वह कह ही चुका था, कि राजकुमार पहुँच गए, और चिल्ला चिल्लाकर रोने लगे; और राजा भी अपने सब कर्मचारियों समेत बिलख-बिलख कर रोने लगा।
37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
३७अबशालोम तो भागकर गशूर के राजा अम्मीहूद के पुत्र तल्मै के पास गया। और दाऊद अपने पुत्र के लिये दिन-दिन विलाप करता रहा।
38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು.
३८अतः अबशालोम भागकर गशूर को गया, तब वहाँ तीन वर्ष तक रहा।
39 ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.
३९दाऊद के मन में अबशालोम के पास जाने की बड़ी लालसा रही; क्योंकि अम्नोन जो मर गया था, इस कारण उसने उसके विषय में शान्ति पाई।

< ಸಮುವೇಲನು - ದ್ವಿತೀಯ ಭಾಗ 13 >