< ಅಪೊಸ್ತಲರ ಕೃತ್ಯಗಳ 2 >

1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.
When the day of Pentecost came, all the believers were in the same place with one accord.
2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
Suddenly a sound like a mighty rushing wind came from heaven, and it filled the whole house where they were sitting.
3 ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.
Divided tongues that looked like fire appeared to them and rested on each one of them.
4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
Then they were all filled with the Holy Spirit and began speaking in other tongues, as the Spirit gave them utterance.
5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.
Now there were devout Jews from every nation under heaven dwelling in Jerusalem.
6 ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.
When this sound occurred, the multitude came together, and they were bewildered because each one of them heard his own language being spoken.
7 ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?
They were all astonished and amazed, saying to one another, “Behold, are not all these who are speaking Galileans?
8 ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?
How then do we each hear them in our own native languages?
9 ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,
Parthians, Medes, Elamites; those who dwell in Mesopotamia, Judea and Cappadocia, Pontus and Asia,
10 ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.
Phrygia and Pamphylia, Egypt and the districts of Libya that are near Cyrene; visitors from Rome (both Jews and converts to Judaism),
11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.
Cretans and Arabs—we hear them speaking about the mighty acts of God in our own tongues.”
12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.
They were all amazed and greatly perplexed, saying to one another, “What could this mean?”
13 ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು.
But others scoffed at the believers, saying, “They are filled with new wine.”
14 ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.
Then Peter stood up with the eleven, lifted up his voice, and declared to them, “Men of Judea and all who dwell in Jerusalem, let this be known to you, and give ear to my words.
15 ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!
These men are not drunk, as you suppose, for it is only the third hour of the day.
16 ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:
But this is what was spoken through the prophet Joel:
17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
‘In the last days, says God, I will pour out my Spirit upon all flesh. Your sons and your daughters will prophesy, your young men will see visions, and your old men will dream dreams.
18 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.
Even upon my male and female servants I will pour out my Spirit in those days, and they will prophesy.
19 ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
I will perform wonders in the heavens above and signs on the earth below: blood, fire, and a mist of smoke.
20 ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
The sun will be turned to darkness and the moon to blood, before the coming of the great and glorious day of the Lord.
21 ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’
And everyone who calls upon the name of the Lord will be saved.’
22 “ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.
“Men of Israel, listen to these words: Jesus of Nazareth, a man attested to you by God with miracles, wonders, and signs that God did through him in your midst, just as you yourselves well know,
23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.
this man, who was delivered up by the deliberate plan and foreknowledge of God, you took and put to death, having him nailed to the cross by the hands of lawless men.
24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
But God raised him up, releasing him from the pangs of death, because it was impossible for death to keep its hold on him.
25 ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.
For David says about him, ‘I saw the Lord always before me, for he is at my right hand so that I will not be shaken.
26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.
Therefore my heart was glad and my tongue rejoiced; moreover, my flesh will dwell in hope.
27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. (Hadēs g86)
For yoʋ will not abandon my soul to Hades, nor will yoʋ let yoʋr Holy One see corruption. (Hadēs g86)
28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’
Yoʋ have made known to me the paths of life; yoʋ will fill me with joy by yoʋr presence.’
29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.
“Brothers, I can say to you with confidence concerning our patriarch David that he died and was buried, and his tomb is with us to this day.
30 ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.
So then, because he was a prophet and knew that God had sworn an oath to him that from among his descendants, according to the flesh, he would raise up the Christ to sit on his throne,
31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ (Hadēs g86)
David foresaw what would happen and spoke about the resurrection of the Christ, saying that his soul was not abandoned to Hades and that his flesh did not see corruption. (Hadēs g86)
32 ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.
This Jesus God has raised up, of which we are all witnesses.
33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.
Therefore, having been exalted to the right hand of God and having received from the Father the promise of the Holy Spirit, he has poured out this that you now see and hear.
34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು
For David did not ascend to heaven, but he himself says, ‘The Lord said to my Lord, “Sit at my right hand
35 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.”’
until I make yoʋr enemies a footstool for yoʋr feet.”’
36 “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.
Therefore, let all the house of Israel know with certainty that God has made him both Lord and Christ, this Jesus whom you crucified.”
37 ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.
When they heard this, they were pierced to the heart and said to Peter and the rest of the apostles, “Brothers, what should we do?”
38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
Peter said to them, “Repent and be baptized, each one of you, in the name of Jesus Christ for the remission of sins, and you will receive the gift of the Holy Spirit.
39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.
For this promise is for you, for your children, and for all who are far off, as many as the Lord our God calls to himself.”
40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.
With many other words he testified and exhorted them, saying, “Be saved from this crooked generation.”
41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.
Then those who gladly received his word were baptized, and about three thousand souls were added on that day.
42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,
They devoted themselves to the teaching of the apostles and to fellowship, to the breaking of bread and to prayer.
43 ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.
A sense of awe came upon every soul, and many wonders and signs were being done by the apostles.
44 ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
All who believed were together and had all things in common.
45 ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.
They were selling their possessions and belongings, and distributing the proceeds to all, as anyone had need.
46 ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.
Day by day as they continued meeting together with one accord in the temple courts and breaking bread from house to house, they shared food together with gladness and simplicity of heart,
47 ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.
praising God and having favor with all the people. And the Lord added to the church daily those who were being saved.

< ಅಪೊಸ್ತಲರ ಕೃತ್ಯಗಳ 2 >