< ಅಪೊಸ್ತಲರ ಕೃತ್ಯಗಳ 20 >

1 ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.
After the uproar was over, Paul sent for the disciples and after he encouraged them, he said farewell and left to go into Macedonia.
2 ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.
When he had gone through those regions and had spoken many words of encouragement to them, he came to Greece.
3 ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.
After he had spent three months there, a plot was formed against him by the Jews as he was about to sail for Syria, so he decided to return through Macedonia.
4 ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.
Accompanying him as far as Asia were Sopater son of Pyrrhus from Berea; Aristarchus and Secundus, both from the Thessalonian believers; Gaius of Derbe; Timothy; and Tychicus and Trophimus from Asia.
5 ಇವರೆಲ್ಲರೂ ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.
But these men had gone before us and were waiting for us at Troas.
6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.
We sailed away from Philippi after the days of unleavened bread, and in five days we came to them in Troas. There we stayed for seven days.
7 ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.
On the first day of the week, when we were gathered together to break bread, Paul spoke to the believers. He was planning to leave the next day, so he kept speaking until midnight.
8 ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.
There were many lamps in the upper room where we had come together.
9 ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.
In the window was sitting a young man named Eutychus, who fell into a deep sleep. As Paul spoke even longer, this young man, still sleeping, fell down from the third story and was picked up dead.
10 ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು.
But Paul went down, stretched himself out on him, and embraced him. Then he said, “Do not be upset any more, for he is alive.”
11 ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.
Then he went upstairs again and broke bread and ate. After talking with them much longer until dawn, he left.
12 ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.
They brought back the boy alive and were greatly comforted.
13 ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು.
We ourselves went ahead of Paul by ship and sailed away to Assos, where we planned to take Paul on board. This is what he himself desired to do, because he planned to go by land.
14 ಅಸ್ಸೊಸಿನಲ್ಲಿ ಪೌಲನು ನಮ್ಮನ್ನು ಭೇಟಿಯಾದಾಗ, ಅವನನ್ನು ಕರೆದುಕೊಂಡು ಮಿತಿಲೇನೆಗೆ ಹೋದೆವು.
When he met us at Assos, we took him onto the ship and went to Mitylene.
15 ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು.
Then we sailed from there and arrived the next day opposite the island of Chios. The following day we touched at the island of Samos, and the day after we came to the city of Miletus.
16 ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.
For Paul had decided to sail past Ephesus, so that he would not spend any time in Asia; for he was hurrying to be in Jerusalem for the day of Pentecost, if it were at all possible for him to do so.
17 ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.
From Miletus he sent men to Ephesus and called to himself the elders of the church.
18 ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.
When they had come to him, he said to them, “You yourselves know, from the first day that I set foot in Asia, how I always spent my time with you.
19 ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.
I kept serving the Lord with all lowliness of mind and with tears, and in sufferings that happened to me because of the plots of the Jews.
20 ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.
You know how I did not keep back from declaring to you anything that was useful, and how I taught you in public and from house to house,
21 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.
testifying both Jews and Greeks about repentance toward God and of faith in our Lord Jesus.
22 “ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ.
Now look, I am going to Jerusalem, compelled by the Spirit, not knowing what will happen to me there,
23 ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.
except that the Holy Spirit warns to me in every city that chains and sufferings await me.
24 ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.
But I do not consider my life is valuable to myself, if only I may finish the race and complete the ministry that I received from the Lord Jesus, to testify to the gospel of the grace of God.
25 “ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.
Now look, I know that you all, among whom I went about proclaiming the kingdom, will see my face no more.
26 ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.
Therefore I testify to you this day, that I am innocent of the blood of any man.
27 ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.
For I did not hold back from declaring to you the whole will of God.
28 ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.
Therefore be careful about yourselves, and about all the flock of which the Holy Spirit has made you overseers. Be careful to shepherd the church of God, which he purchased with his own blood.
29 ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.
I know that after my departure, vicious wolves will come in among you and will not spare the flock.
30 ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.
I know that from even among you some men shall come and distort the truth in order to draw away the disciples after them.
31 ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.
So be on guard. Remember that for three years I did not stop instructing every one of you with tears night and day.
32 “ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.
Now I entrust you to God and to the word of his grace, which is able to build you up and to give you the inheritance among all those who are being sanctified.
33 ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.
I coveted no man's silver, gold, or clothing.
34 ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.
You yourselves know that these hands served my own needs and the needs of those who were with me.
35 ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.
In all things I gave you an example of how you should help the weak by working, and of how you should remember the words of the Lord Jesus, words that he himself said: “It is more blessed to give than to receive.”
36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.
After he had spoken in this way, he knelt down and prayed with them all.
37 ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.
There was a lot of crying and they embraced Paul and kissed him.
38 “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.
They were sad most of all because of what he had said, that they would never see his face again. Then they escorted him to the ship.

< ಅಪೊಸ್ತಲರ ಕೃತ್ಯಗಳ 20 >