< ಆದಿಕಾಂಡ 32 >

1 ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.
וְיַעֲקֹ֖ב הָלַ֣ךְ לְדַרְכֹּ֑ו וַיִּפְגְּעוּ־בֹ֖ו מַלְאֲכֵ֥י אֱלֹהִֽים׃
2 ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
וַיֹּ֤אמֶר יַעֲקֹב֙ כַּאֲשֶׁ֣ר רָאָ֔ם מַחֲנֵ֥ה אֱלֹהִ֖ים זֶ֑ה וַיִּקְרָ֛א שֵֽׁם־הַמָּקֹ֥ום הַה֖וּא מֽ͏ַחֲנָֽיִם׃ פ
3 ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
וַיִּשְׁלַ֨ח יַעֲקֹ֤ב מַלְאָכִים֙ לְפָנָ֔יו אֶל־עֵשָׂ֖ו אָחִ֑יו אַ֥רְצָה שֵׂעִ֖יר שְׂדֵ֥ה אֱדֹֽום׃
4 ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.
וַיְצַ֤ו אֹתָם֙ לֵאמֹ֔ר כֹּ֣ה תֹאמְר֔וּן לַֽאדֹנִ֖י לְעֵשָׂ֑ו כֹּ֤ה אָמַר֙ עַבְדְּךָ֣ יַעֲקֹ֔ב עִם־לָבָ֣ן גַּ֔רְתִּי וָאֵחַ֖ר עַד־עָֽתָּה׃
5 ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.
וַֽיְהִי־לִי֙ שֹׁ֣ור וַחֲמֹ֔ור צֹ֖אן וְעֶ֣בֶד וְשִׁפְחָ֑ה וָֽאֶשְׁלְחָה֙ לְהַגִּ֣יד לֽ͏ַאדֹנִ֔י לִמְצֹא־חֵ֖ן בְּעֵינֶֽיךָ׃
6 ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.
וַיָּשֻׁ֙בוּ֙ הַמַּלְאָכִ֔ים אֶֽל־יַעֲקֹ֖ב לֵאמֹ֑ר בָּ֤אנוּ אֶל־אָחִ֙יךָ֙ אֶל־עֵשָׂ֔ו וְגַם֙ הֹלֵ֣ךְ לִקְרָֽאתְךָ֔ וְאַרְבַּע־מֵאֹ֥ות אִ֖ישׁ עִמֹּֽו׃
7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
וַיִּירָ֧א יַעֲקֹ֛ב מְאֹ֖ד וַיֵּ֣צֶר לֹ֑ו וַיַּ֜חַץ אֶת־הָעָ֣ם אֲשֶׁר־אִתֹּ֗ו וְאֶת־הַצֹּ֧אן וְאֶת־הַבָּקָ֛ר וְהַגְּמַלִּ֖ים לִשְׁנֵ֥י מַחֲנֹֽות׃
8 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.
וַיֹּ֕אמֶר אִם־יָבֹ֥וא עֵשָׂ֛ו אֶל־הַמַּחֲנֶ֥ה הָאַחַ֖ת וְהִכָּ֑הוּ וְהָיָ֛ה הַמַּחֲנֶ֥ה הַנִּשְׁאָ֖ר לִפְלֵיטָֽה׃
9 ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,
וַיֹּאמֶר֮ יַעֲקֹב֒ אֱלֹהֵי֙ אָבִ֣י אַבְרָהָ֔ם וֵאלֹהֵ֖י אָבִ֣י יִצְחָ֑ק יְהוָ֞ה הָאֹמֵ֣ר אֵלַ֗י שׁ֧וּב לְאַרְצְךָ֛ וּלְמֹולַדְתְּךָ֖ וְאֵיטִ֥יבָה עִמָּֽךְ׃
10 ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.
קָטֹ֜נְתִּי מִכֹּ֤ל הַחֲסָדִים֙ וּמִכָּל־הָ֣אֱמֶ֔ת אֲשֶׁ֥ר עָשִׂ֖יתָ אֶת־עַבְדֶּ֑ךָ כִּ֣י בְמַקְלִ֗י עָבַ֙רְתִּי֙ אֶת־הַיַּרְדֵּ֣ן הַזֶּ֔ה וְעַתָּ֥ה הָיִ֖יתִי לִשְׁנֵ֥י מַחֲנֹֽות׃
11 ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.
הַצִּילֵ֥נִי נָ֛א מִיַּ֥ד אָחִ֖י מִיַּ֣ד עֵשָׂ֑ו כִּֽי־יָרֵ֤א אָנֹכִי֙ אֹתֹ֔ו פֶּן־יָבֹ֣וא וְהִכַּ֔נִי אֵ֖ם עַל־בָּנִֽים׃
12 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.
וְאַתָּ֣ה אָמַ֔רְתָּ הֵיטֵ֥ב אֵיטִ֖יב עִמָּ֑ךְ וְשַׂמְתִּ֤י אֶֽת־זַרְעֲךָ֙ כְּחֹ֣ול הַיָּ֔ם אֲשֶׁ֥ר לֹא־יִסָּפֵ֖ר מֵרֹֽב׃
13 ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
וַיָּ֥לֶן שָׁ֖ם בַּלַּ֣יְלָה הַה֑וּא וַיִּקַּ֞ח מִן־הַבָּ֧א בְיָדֹ֛ו מִנְחָ֖ה לְעֵשָׂ֥ו אָחִֽיו׃
14 ಅವು ಯಾವುವೆಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು,
עִזִּ֣ים מָאתַ֔יִם וּתְיָשִׁ֖ים עֶשְׂרִ֑ים רְחֵלִ֥ים מָאתַ֖יִם וְאֵילִ֥ים עֶשְׂרִֽים׃
15 ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು,
גְּמַלִּ֧ים מֵינִיקֹ֛ות וּבְנֵיהֶ֖ם שְׁלֹשִׁ֑ים פָּרֹ֤ות אַרְבָּעִים֙ וּפָרִ֣ים עֲשָׂרָ֔ה אֲתֹנֹ֣ת עֶשְׂרִ֔ים וַעְיָרִ֖ם עֲשָׂרָֽה׃
16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.
וַיִּתֵּן֙ בְּיַד־עֲבָדָ֔יו עֵ֥דֶר עֵ֖דֶר לְבַדֹּ֑ו וַ֤יֹּאמֶר אֶל־עֲבָדָיו֙ עִבְר֣וּ לְפָנַ֔י וְרֶ֣וַח תָּשִׂ֔ימוּ בֵּ֥ין עֵ֖דֶר וּבֵ֥ין עֵֽדֶר׃
17 ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ,
וַיְצַ֥ו אֶת־הָרִאשֹׁ֖ון לֵאמֹ֑ר כִּ֣י יִֽפְגָּשְׁךָ֞ עֵשָׂ֣ו אָחִ֗י וִשְׁאֵֽלְךָ֙ לֵאמֹ֔ר לְמִי־אַ֙תָּה֙ וְאָ֣נָה תֵלֵ֔ךְ וּלְמִ֖י אֵ֥לֶּה לְפָנֶֽיךָ׃
18 ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.
וְאָֽמַרְתָּ֙ לְעַבְדְּךָ֣ לְיַעֲקֹ֔ב מִנְחָ֥ה הִוא֙ שְׁלוּחָ֔ה לֽ͏ַאדֹנִ֖י לְעֵשָׂ֑ו וְהִנֵּ֥ה גַם־ה֖וּא אַחֲרֵֽינוּ׃
19 ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
וַיְצַ֞ו גַּ֣ם אֶת־הַשֵּׁנִ֗י גַּ֚ם אֶת־הַשְּׁלִישִׁ֔י גַּ֚ם אֶת־כָּל־הַהֹ֣לְכִ֔ים אַחֲרֵ֥י הָעֲדָרִ֖ים לֵאמֹ֑ר כַּדָּבָ֤ר הַזֶּה֙ תְּדַבְּר֣וּן אֶל־עֵשָׂ֔ו בְּמֹצַאֲכֶ֖ם אֹתֹֽו׃
20 ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.
וַאֲמַרְתֶּ֕ם גַּ֗ם הִנֵּ֛ה עַבְדְּךָ֥ יַעֲקֹ֖ב אַחֲרֵ֑ינוּ כִּֽי־אָמַ֞ר אֲכַפְּרָ֣ה פָנָ֗יו בַּמִּנְחָה֙ הַהֹלֶ֣כֶת לְפָנָ֔י וְאַחֲרֵי־כֵן֙ אֶרְאֶ֣ה פָנָ֔יו אוּלַ֖י יִשָּׂ֥א פָנָֽי׃
21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.
וַתַּעֲבֹ֥ר הַמִּנְחָ֖ה עַל־פָּנָ֑יו וְה֛וּא לָ֥ן בַּלַּֽיְלָה־הַה֖וּא בַּֽמַּחֲנֶֽה׃
22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.
וַיָּ֣קָם ׀ בַּלַּ֣יְלָה ה֗וּא וַיִּקַּ֞ח אֶת־שְׁתֵּ֤י נָשָׁיו֙ וְאֶת־שְׁתֵּ֣י שִׁפְחֹתָ֔יו וְאֶת־אַחַ֥ד עָשָׂ֖ר יְלָדָ֑יו וַֽיַּעֲבֹ֔ר אֵ֖ת מַעֲבַ֥ר יַבֹּֽק׃
23 ಅವನು ಅವರನ್ನು ಕರೆದುಕೊಂಡು ಹೊಳೆ ದಂಡೆಯನ್ನು ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
וַיִּקָּחֵ֔ם וַיַּֽעֲבִרֵ֖ם אֶת־הַנָּ֑חַל וַֽיַּעֲבֵ֖ר אֶת־אֲשֶׁר־לֹו׃
24 ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.
וַיִּוָּתֵ֥ר יַעֲקֹ֖ב לְבַדֹּ֑ו וַיֵּאָבֵ֥ק אִישׁ֙ עִמֹּ֔ו עַ֖ד עֲלֹ֥ות הַשָּֽׁחַר׃
25 ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.
וַיַּ֗רְא כִּ֣י לֹ֤א יָכֹל֙ לֹ֔ו וַיִּגַּ֖ע בְּכַף־יְרֵכֹ֑ו וַתֵּ֙קַע֙ כַּף־יֶ֣רֶךְ יַעֲקֹ֔ב בְּהֵֽאָבְקֹ֖ו עִמֹּֽו׃
26 ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.
וַיֹּ֣אמֶר שַׁלְּחֵ֔נִי כִּ֥י עָלָ֖ה הַשָּׁ֑חַר וַיֹּ֙אמֶר֙ לֹ֣א אֲשַֽׁלֵּחֲךָ֔ כִּ֖י אִם־בֵּרַכְתָּֽנִי׃
27 ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.
וַיֹּ֥אמֶר אֵלָ֖יו מַה־שְּׁמֶ֑ךָ וַיֹּ֖אמֶר יַעֲקֹֽב׃
28 ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.
וַיֹּ֗אמֶר לֹ֤א יַעֲקֹב֙ יֵאָמֵ֥ר עֹוד֙ שִׁמְךָ֔ כִּ֖י אִם־יִשְׂרָאֵ֑ל כִּֽי־שָׂרִ֧יתָ עִם־אֱלֹהִ֛ים וְעִם־אֲנָשִׁ֖ים וַתּוּכָֽל׃
29 ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.
וַיִּשְׁאַ֣ל יַעֲקֹ֗ב וַיֹּ֙אמֶר֙ הַגִּֽידָה־נָּ֣א שְׁמֶ֔ךָ וַיֹּ֕אמֶר לָ֥מָּה זֶּ֖ה תִּשְׁאַ֣ל לִשְׁמִ֑י וַיְבָ֥רֶךְ אֹתֹ֖ו שָֽׁם׃
30 ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
וַיִּקְרָ֧א יַעֲקֹ֛ב שֵׁ֥ם הַמָּקֹ֖ום פְּנִיאֵ֑ל כִּֽי־רָאִ֤יתִי אֱלֹהִים֙ פָּנִ֣ים אֶל־פָּנִ֔ים וַתִּנָּצֵ֖ל נַפְשִֽׁי׃
31 ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
וַיִּֽזְרַֽח־לֹ֣ו הַשֶּׁ֔מֶשׁ כַּאֲשֶׁ֥ר עָבַ֖ר אֶת־פְּנוּאֵ֑ל וְה֥וּא צֹלֵ֖עַ עַל־יְרֵכֹֽו׃
32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.
עַל־כֵּ֡ן לֹֽא־יֹאכְל֨וּ בְנֵֽי־יִשְׂרָאֵ֜ל אֶת־גִּ֣יד הַנָּשֶׁ֗ה אֲשֶׁר֙ עַל־כַּ֣ף הַיָּרֵ֔ךְ עַ֖ד הַיֹּ֣ום הַזֶּ֑ה כִּ֤י נָגַע֙ בְּכַף־יֶ֣רֶךְ יַעֲקֹ֔ב בְּגִ֖יד הַנָּשֶֽׁה׃

< ಆದಿಕಾಂಡ 32 >