< ಕೀರ್ತನೆಗಳು 49 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯನ ಪುತ್ರರು ಸಂಯೋಜಿಸಿರುವ ಒಂದು ಕೀರ್ತನೆ. ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,
প্রধান বাদ্যকরের জন্য। করোহ-সন্তানদের একটি গীত। শোন, সমস্ত লোকেরা; কান দাও, বিশ্বের সব বাসিন্দারা।
2 ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.
সামান্য এবং ধনী লোকের সন্তান উভয়ই; ধনী ও দরিদ্র সকলেই।
3 ನನ್ನ ಬಾಯಿ ಜ್ಞಾನವನ್ನು ನುಡಿಯುವುದು, ನನ್ನ ಹೃದಯದ ಧ್ಯಾನವು ವಿವೇಕವಾಗಿರುವುದು.
আমার মুখ জ্ঞানের কথা বলে এবং আমার হৃদয়ের ধ্যান বোঝে।
4 ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.
আমি দৃষ্টান্তের কথায় কান নেব; বীণাযন্ত্রে আমি গূর বাক্যের ব্যাখা করব।
5 ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ ಅಕ್ರಮವು ನನ್ನನ್ನು ಸುತ್ತಿಕೊಳ್ಳುವಾಗ ನಾನು ಏಕೆ ಭಯಪಡಬೇಕು?
কেন মন্দ দিন কে আমি ভয় করব, যখন তাদের বিপদ আমাকে ঘিরে ধরে।
6 ಅವರು ತಮ್ಮ ಸಂಪತ್ತಿನಲ್ಲಿ ಭರವಸೆಯಿಟ್ಟು, ತಮ್ಮ ಅಧಿಕ ಐಶ್ವರ್ಯಗಳಲ್ಲಿ ಜಂಭಪಡುವರು.
যারা নিজেদের সম্পদে বিশ্বাস করে এবং তাদের সম্পদে তারা প্রচুর গর্ব করে।
7 ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.
তাদের মধ্যে কেউই নিজেকে মুক্ত করতে পারে না বা প্রায়েশ্চিত্ত এর জন্য ঈশ্বরকে কিছু দিতে পারে না।
8 ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ.
কারণ তাদের প্রাণের মুক্তি ব্যয়বহুল এবং চিরকাল অসাধ্য।
9 ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ.
কেউ চিরতরে বাঁচতে পারবে না, যাতে তার শরীর ক্ষয় না।
10 ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.
১০কারণ সে দেখে যে, জ্ঞানী মানুষ মারা যায়; বোকা এবং বর্বরেরা একইরকম বিনষ্ট হয় এবং তারা অন্যদের জন্য তাদের সম্পদ ছেড়ে দেন।
11 ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ.
১১তাদের চিন্তা হল তাদের পরিবার চিরদিনের র জন্য চলবে এবং তাদের সব প্রজন্ম সেখানে বাস করবে; তারা তাদের নিজেদের নামে তাদের জমির নাম রাখে।
12 ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.
১২কিন্তু মানুষ, যারা মরুভূমিরগুলো মত; সম্পদ থাকলেও জীবিত থাকবে না।
13 ತಮ್ಮಲ್ಲಿಯೇ ಭರವಸೆ ಇಟ್ಟುಕೊಳ್ಳುವವರಿಗೂ ಇದೇ ಗತಿ. ಅಂಥವರ ಮಾತುಗಳನ್ನು ಒಪ್ಪಿ ಅನುಸರಿಸುವವರ ಗತಿಯೂ ಇದೆ.
১৩এই তাদের পথ, তাদের মূর্খতা; তখন তাদের পরে, লোকে তাদের বাক্যের অনুমোদন করে। (সেলা)
14 ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು. (Sheol h7585)
১৪তাদের পাতালের জন্য একটি মেষপালকের মত নিযুক্ত করা হয়, মৃত্যু তাদের রাখাল হবে; তাদেরকে পাতালে অবতরণ করানো হবে; তাদের রূপ পাতালে ভোগ করবে যাতে তার কোনো বাসস্থান আর না থাকে। (Sheol h7585)
15 ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು. (Sheol h7585)
১৫কিন্তু ঈশ্বর পাতালের শক্তির হাত থেকে আমার প্রাণ মুক্ত করবেন; কারণ তিনি আমাকে গ্রহণ করবেন। (সেলা) (Sheol h7585)
16 ಒಬ್ಬನು ಐಶ್ವರ್ಯವಂತನಾದರೆ ಮತ್ತು ಅವನ ಮನೆಯ ಘನತೆ ದೊಡ್ಡದಾದರೆ ಕಳವಳ ಪಡಬೇಡ.
১৬তুমি ভয় পাবে না, যখন কেউ মহিমান্বিত হয়, যখন তার বংশ শক্তি বৃদ্ধি পাবে।
17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
১৭কারণ যখন তিনি মারা যায় সে কিছুই সঙ্গে নিয়ে যাবে না, তার ক্ষমতা তার সাথে যাবে না।
18 ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನಸ್ತುತಿಯಿಂದಲೂ ಕೂಡಿದವನಾದರೂ
১৮যদিও সে জীবিত থাকাকালীন নিজের প্রাণকে আশীর্বাদ করেছিল এবং তুমি তোমার জন্য মঙ্গল করলে লোকে তোমার প্রশংসা করে।
19 ಅವನು ತನ್ನ ಪೂರ್ವಿಕರ ಬಳಿಗೆ ಹೋಗುವನು; ಅವರು ಸದಾಕಾಲಕ್ಕೂ ಜೀವ ಬೆಳಕನ್ನು ಕಾಣುವುದಿಲ್ಲ.
১৯তিনি তাঁর পিতৃপুরুষদের কাছে যাবে; তারা আর আলো দেখতে পাবে না।
20 ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.
২০যার সম্পদ আছে কিন্তু কোন বুদ্ধি নেই সে এমন পশুদের মত যা নষ্ট হয়ে যায়।

< ಕೀರ್ತನೆಗಳು 49 >