< 전도서 2 >

1 나는 내 마음에 이르기를 자, 내가 시험적으로 너를 즐겁게 하리니 너는 낙을 누리라 하였으나 본즉 이것도 헛되도다
ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.
2 내가 웃음을 논하여 이르기를 미친 것이라 하였고 희락을 논하여 이르기를 저가 무엇을 하는가 하였노라
“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
3 내 마음이 궁구하기를 내가 어떻게 하여야 내 마음에 지혜로 다스림을 받으면서 술로 내 육신을 즐겁게 할까 또 어떻게 하여야 어리석음을 취하여서 천하 인생의 종신토록 생활함에 어떤 것이 쾌락인지 알까 하여
ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.
4 나의 사업을 크게 하였노라 내가 나를 위하여 집들을 지으며 포도원을 심으며
ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.
5 여러 동산과 과원을 만들고 그 가운데 각종 과목을 심었으며
ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.
6 수목을 기르는 삼림에 물주기 위하여 못을 팠으며
ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.
7 노비는 사기도 하였고 집에서 나게도 하였으며 나보다 먼저 예루살렘에 있던 모든 자보다도 소와 양떼의 소유를 많게 하였으며
ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
8 은금과 왕들의 보배와 여러 도의 보배를 쌓고 또 노래하는 남녀와 인생들의 기뻐하는 처와 첩들을 많이 두었노라
ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
9 내가 이같이 창성하여 나보다 먼저 예루살렘에 있던 모든 자보다 지나고 내 지혜도 내게 여전하여
ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.
10 무엇이든지 내 마음이 즐거워하는 것을 내가 막지 아니하였으니 이는 나의 모든 수고를 내 마음이 기뻐하였음이라 이것이 나의 모든 수고로 말미암아 얻은 분복이로다
೧೦ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.
11 그 후에 본즉 내 손으로 한 모든 일과 수고한 모든 수고가 다 헛되어 바람을 잡으려는 것이며 해 아래서 무익한 것이로다
೧೧ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
12 내가 돌이켜 지혜와 망령됨과 어리석음을 보았나니 왕의 뒤에 오는 자는 무슨 일을 행할꼬 행한지 오랜 일일 뿐이리라
೧೨ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.
13 내가 보건대 지혜가 우매보다 뛰어남이 빛이 어두움보다 뛰어남 같도다
೧೩ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
14 지혜자는 눈이 밝고 우매자는 어두움에 다니거니와 이들의 당하는 일이 일반인 줄을 내가 깨닫고
೧೪ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.
15 심중에 이르기를 우매자의 당한 것을 나도 당하리니 내가 심중에 이르기를 이것도 헛되도다
೧೫ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
16 지혜자나 우매자나 영원토록 기억함을 얻지 못하나니 후일에는 다 잊어버린 지 오랠 것임이라 오호라 지혜자의 죽음이 우매자의 죽음과 일반이로다
೧೬ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
17 이러므로 내가 사는 것을 한하였노니 이는 해 아래서 하는 일이 내게 괴로움이요 다 헛되어 바람을 잡으려는 것임이로다
೧೭ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
18 내가 해 아래서 나의 수고한 모든 수고를 한하였노니 이는 내 뒤를 이을 자에게 끼치게 됨이라
೧೮ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
19 그 사람이 지혜자일지, 우매자일지야 누가 알랴마는 내가 해 아래서 내 지혜를 나타내어 수고한 모든 결과를 저가 다 관리하리니 이것도 헛되도다
೧೯ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
20 이러므로 내가 해 아래서 수고한 모든 수고에 대하여 도리어 마음으로 실망케 하였도다
೨೦ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.
21 어떤 사람은 그 지혜와 지식과 재주를 써서 수고하였어도 그 얻은 것을 수고하지 아니한 자에게 업으로 끼치리니 이것도 헛된 것이라 큰 해로다
೨೧ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
22 사람이 해 아래서 수고하는 모든 수고와 마음에 애쓰는 것으로 소득이 무엇이랴
೨೨ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
23 일평생에 근심하며 수고하는 것이 슬픔뿐이라 그 마음이 밤에도 쉬지 못하나니 이것도 헛되도다
೨೩ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.
24 사람이 먹고 마시며 수고하는 가운데서 심령으로 낙을 누리게 하는 것보다 나은 것이 없나니 내가 이것도 본즉 하나님의 손에서 나는 것이로다
೨೪ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
25 먹고 즐거워하는 일에 누가 나보다 승하랴
೨೫ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?
26 하나님이 그 기뻐하시는 자에게는 지혜와 지식과 희락을 주시나 죄인에게는 노고를 주시고 저로 모아 쌓게 하사 하나님을 기뻐하는 자에게 주게 하시나니 이것도 헛되어 바람을 잡으려는 것이로다
೨೬ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

< 전도서 2 >