< Pāvila Vēstule Galatiešiem 4 >

1 Bet Es jums saku: kamēr mantinieks vēl ir bērns, tad starp viņu un kalpu nav nekādas starpības, jebšu viņš kungs ir pār visu mantu.
ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.
2 Bet viņš ir apakš pārstāvētājiem un sargiem līdz tam no tēva nospriestam laikam.
ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.
3 Tāpat arī mēs, kad bijām bērni, bijām kalpu kārtā apakš pasaules likumu sākumiem.
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.
4 Bet kad tā laika piepildīšana nāca, tad Dievs sūtīja Savu Dēlu, dzimušu no sievas un noliktu apakš bauslības,
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
5 Ka Viņš tos, kas bija apakš bauslības, atpirktu, ka mēs to bērnu tiesu dabūtu.
6 Un kad nu jūs esat bērni, tad Dievs Sava Dēla Garu ir sūtījis jūsu sirdīs, tas sauc: Abba, Tēvs!
ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
7 Tad nu vairs neesi kalps, bet bērns; bet ja bērns, tad arī Dieva mantinieks caur Kristu.
ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.
8 Bet to brīdi, kad jūs Dievu neatzināt, jūs esat kalpojuši tiem, kas pēc būšanas nav dievi.
ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.
9 Un tagad, kad jūs Dievu atzīstat, bet jo vairāk, kad no Dieva esat atzīti, - kā jūs atkal griežaties pie tiem vājiem un tukšiem sākumiem un tiem atkal no jauna gribat kalpot?
ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
10 Jūs cienījat dienas un mēnešus un laikus un gadus.
೧೦ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.
11 Man bail jūsu dēļ, ka tik nebūšu velti pie jums strādājis.
೧೧ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.
12 Topiet tādi, kā es; jo arī es esmu tapis tāds, kā jūs, brāļi, es jūs lūdzu. - Jūs man neko neesat pāri darījuši.
೧೨ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.
13 Bet jūs zināt, ka es pirmoreiz miesas vājības dēļ jums evaņģēliju esmu sludinājis;
೧೩ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
14 Un tā pārbaudīšana, kas jums caur manu miesu notikusi, jums nav bijusi nicināma nedz nepanesama, bet jūs mani esat uzņēmuši tā kā Dieva eņģeli, tā kā Kristu Jēzu.
೧೪ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
15 Tad nu, kāda līksmība jums to brīdi bija? Jo es jums dodu liecību, ka jūs, ja tas būtu varējis būt, savas acis būtu izrāvuši un man devuši.
೧೫ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
16 Vai tad es nu jūsu ienaidnieks esmu tapis, jums patiesību sacīdams?
೧೬ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?
17 Tie iekarst jūsu dēļ, kā nav labi, bet tie jūs grib novērst, lai jūs atkal iekarstu viņu dēļ.
೧೭ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.
18 Bet labi ir vienmēr iekarst laba dēļ un ne tad vien, kad es esmu klāt pie jums.
೧೮ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.
19 Mani bērniņi, ko es atkal dzemdēju ar sāpēm, tiekams Kristus iekš jums nāk redzams,
೧೯ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
20 Es gan vēlētos, tagad pie jums būt un citādā balsī runāt; jo man jūsu dēļ padoma pietrūkst.
೨೦ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!
21 Sakiet man, jūs, kas apakš bauslības gribat būt, vai jūs bauslību neesat dzirdējuši?
೨೧ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.
22 Jo ir rakstīts, ka Ābrahāmam bijuši divi dēli, viens no tās kalpones un otrs no tās svabadās.
೨೨ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.
23 Bet kas no tās kalpones bija, tas ir piedzimis pēc miesas; un kas no tās svabadās, tas caur to apsolīšanu.
೨೩ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.
24 Šie vārdi pēc līdzības saprotami. Šīs ir tās divas derības; viena no Sina kalna, kas uz kalpošanu dzemdē, tā ir tā Hāgare.
೨೪ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
25 Jo Hāgare ir tas Sina kalns Arābijā - un līdzinājās tai tagadējai Jeruzālemei, kas kalpo ar saviem bērniem.
೨೫ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.
26 Bet tā Jeruzāleme, kas ir augšā, ir tā svabadā, tā ir mūsu visu māte.
೨೬ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
27 Jo ir rakstīts: priecājies, neauglīgā, tu, kas neesi dzemdējusi, izsaucies un gavilē tu, kas bērnu sāpes necieti; jo tai tukšai ir daudz bērnu, vairāk nekā tai, kas ir apprecēta.
೨೭“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.
28 Bet mēs, brāļi, esam apsolīšanas bērni, tā kā Īzaks.
೨೮ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.
29 Bet itin kā to brīdi tas, kas bija piedzimis pēc miesas, vajāja to, kas bija piedzimis pēc Gara, tāpat arī tagad.
೨೯ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.
30 Bet ko tas raksts saka? Izmet to kalponi un viņas dēlu; jo tam kalpones dēlam nebūs mantot ar tās svabadās dēlu.
೩೦ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.
31 Tāpēc, brāļi, mēs neesam tās kalpones bērni, bet tās svabadās.
೩೧ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.

< Pāvila Vēstule Galatiešiem 4 >