< استر 6 >

در آن شب، خواب از پادشاه برفت و امرفرمود که کتاب تذکره تواریخ ایام رابیاورند تا آن را در حضور پادشاه بخوانند. ۱ 1
ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.
و درآن، نوشته‌ای یافتند که مردخای درباره بغتان وترش خواجه‌سرایان پادشاه و حافظان آستانه وی که قصد دست درازی بر اخشورش پادشاه کرده بودند، خبر داده بود. ۲ 2
ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು.
و پادشاه پرسید که «چه حرمت و عزت به عوض این (خدمت ) به مردخای عطا شد؟» بندگان پادشاه که او را خدمت می‌کردند جواب دادند که «برای او چیزی نشد.» ۳ 3
ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.
پادشاه گفت: «کیست در حیاط؟» (و هامان به حیاط بیرونی خانه پادشاه آمده بود تا به پادشاه عرض کند که مردخای را برداری که برایش حاضر ساخته بود مصلوب کنند. ) ۴ 4
ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.
و خادمان پادشاه وی را گفتند: «اینک هامان در حیاطایستاده است.» پادشاه فرمود تا داخل شود. ۵ 5
ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು.
و چون هامان داخل شد پادشاه وی را گفت: «با کسی‌که پادشاه رغبت دارد که او را تکریم نماید، چه باید کرد؟» و هامان در دل خود فکرکرد: «کیست غیر از من که پادشاه به تکریم نمودن او رغبت داشته باشد؟» ۶ 6
ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.
پس هامان به پادشاه گفت: «برای شخصی که پادشاه به تکریم نمودن او رغبت دارد، ۷ 7
ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು.
لباس ملوکانه را که پادشاه می‌پوشد و اسبی را که پادشاه بر آن سوار می‌شودو تاج ملوکانه‌ای را که بر سر او نهاده می‌شود، بیاورند. ۸ 8
ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.
و لباس و اسب را به‌دست یکی ازامرای مقرب ترین پادشاه بدهند و آن را به شخصی که پادشاه به تکریم نمودن او رغبت داردبپوشانند و بر اسب‌سوار کرده، و در کوچه های شهر بگردانند و پیش روی او ندا کنند که با کسی‌که پادشاه به تکریم نمودن او رغبت دارد، چنین کرده خواهد شد.» ۹ 9
ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು.
آنگاه پادشاه به هامان فرمود: «آن لباس واسب را چنانکه گفتی به تعجیل بگیر و با مردخای یهود که در دروازه پادشاه نشسته است، چنین معمول دار و از هرچه گفتی چیزی کم نشود.» ۱۰ 10
೧೦ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.
پس هامان آن لباس و اسب را گرفت ومردخای را پوشانیده و او را سوار کرده، درکوچه های شهر گردانید و پیش روی او ندامی کرد که «با کسی‌که پادشاه به تکریم نمودن اورغبت دارد چنین کرده خواهد شد.» ۱۱ 11
೧೧ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.
ومردخای به دروازه پادشاه مراجعت کرد. اماهامان ماتم‌کنان و سرپوشیده، به خانه خودبشتافت. ۱۲ 12
೧೨ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
و هامان به زوجه خود زرش و همه دوستان خویش، ماجرای خود را حکایت نمود وحکیمانش و زنش زرش او را گفتند: «اگر این مردخای که پیش وی آغاز افتادن نمودی از نسل یهود باشد، بر او غالب نخواهی آمد، بلکه البته پیش او خواهی افتاد.» ۱۳ 13
೧೩ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.
و ایشان هنوز با اوگفتگو می‌کردند که خواجه‌سرایان پادشاه رسیدند تا هامان را به ضیافتی که استر مهیا ساخته بود، به تعجیل ببرند. ۱۴ 14
೧೪ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.

< استر 6 >