< خروج 31 >

و خداوند موسی را خطاب کرده، گفت: ۱ 1
ಯೆಹೋವನು ಮೋಶೆಗೆ ಹೀಗೆಂದನು,
«آگاه باش بصلئیل بن اوری بن حور را از سبط یهودا به نام خوانده‌ام. ۲ 2
“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
و او را به روح خدا پر ساخته‌ام، و به حکمت و فهم ومعرفت و هر هنری، ۳ 3
ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
برای اختراع مخترعات، تادر طلا و نقره و برنج کار کند. ۴ 4
ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,
و برای تراشیدن سنگ و ترصیع آن و درودگری چوب، تا در هرصنعتی اشتغال نماید. ۵ 5
ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
و اینک من، اهولیاب بن اخیسامک را از سبط دان، انباز او ساخته‌ام، و دردل همه دانادلان حکمت بخشیده‌ام، تا آنچه را به تو امر فرموده‌ام، بسازند. ۶ 6
ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
خیمه اجتماع و تابوت شهادت و کرسی رحمت که بر آن است، و تمامی اسباب خیمه، ۷ 7
ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
و خوان و اسبابش و چراغدان طاهر و همه اسبابش و مذبح بخور، ۸ 8
ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,
و مذبح قربانی سوختنی و همه اسبابش، و حوض وپایه‌اش، ۹ 9
ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,
و لباس خدمت و لباس مقدس برای هارون کاهن، و لباس پسرانش بجهت کهانت، ۱۰ 10
೧೦ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,
و روغن و مسح و بخور معطر بجهت قدس، موافق آنچه به تو امر فرموده‌ام، بسازند.» ۱۱ 11
೧೧ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
و خداوند موسی را خطاب کرده، گفت: ۱۲ 12
೧೨ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,
«و تو بنی‌اسرائیل را مخاطب ساخته، بگو: البته سبت های مرا نگاه دارید. زیرا که این در میان من وشما در نسلهای شما آیتی خواهد بود تا بدانید که من یهوه هستم که شما را تقدیس می‌کنم. ۱۳ 13
೧೩“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
پس سبت را نگاه دارید، زیرا که برای شما مقدس است، هر‌که آن را بی‌حرمت کند، هرآینه کشته شود، و هر‌که در آن کار کند، آن شخص از میان قوم خود منقطع شود. ۱۴ 14
೧೪ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
شش روز کار کرده شود، و در روز هفتم سبت آرام و مقدس خداونداست. هر‌که در روز سبت کار کند، هرآینه کشته شود. ۱۵ 15
೧೫ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
پس بنی‌اسرائیل سبت را نگاه بدارند، نسلا بعد نسل سبت را به عهد ابدی مرعی دارند. ۱۶ 16
೧೬ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
این در میان من و بنی‌اسرائیل آیتی ابدی است، زیرا که در شش روز، خداوند آسمان و زمین راساخت و در روز هفتمین آرام فرموده، استراحت یافت.» ۱۷ 17
೧೭ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”
و چون گفتگو را با موسی در کوه سینابپایان برد، دو لوح شهادت، یعنی دو لوح سنگ مرقوم به انگشت خدا را به وی داد. ۱۸ 18
೧೮ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

< خروج 31 >